Homeಮುಖಪುಟಮುಂಬೈ| ಜಾಹೀರಾತು ಫಲಕ ಕುಸಿತ : ಮೃತರ ಸಂಖ್ಯೆ 14ಕ್ಕೆ ಏರಿಕೆ ;70ಕ್ಕೂ ಅಧಿಕ ಮಂದಿಗೆ...

ಮುಂಬೈ| ಜಾಹೀರಾತು ಫಲಕ ಕುಸಿತ : ಮೃತರ ಸಂಖ್ಯೆ 14ಕ್ಕೆ ಏರಿಕೆ ;70ಕ್ಕೂ ಅಧಿಕ ಮಂದಿಗೆ ಗಾಯ

- Advertisement -
- Advertisement -

ಸೋಮವಾರ ಸಂಜೆ ಬೀಸಿದ ಭಾರೀ ಗಾಳಿಗೆ ವಾಣಿಜ್ಯ ನಗರಿ ಮುಂಬೈನಲ್ಲಿ ಅವಘಡ ಸಂಭವಿಸಿದ್ದು, ಬೃಹತ್ ಜಾಹೀರಾತು ಫಲಕ ಕುಸಿದು 14 ಮಂದಿ ಸಾವನ್ನಪ್ಪಿದ್ದಾರೆ. 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮುಂಬೈನ ಘಾಟ್‌ಕೋಪರ್ ಪ್ರದೇಶದ ಚೆಡ್ಡಾನಗರದಲ್ಲಿ 100 ಅಡಿಯ ಜಾಹೀರಾತು ಫಲಕ ಭಾರೀ ಗಾಳಿಗೆ ಪಕ್ಕದ ಪೆಟ್ರೋಲ್ ಬಂಕ್ ಮೇಲೆ ಬಿದ್ದಿದೆ. ಇದರಿಂದ ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದು, ವಾಹನಗಳು ಜಖಂಗೊಂಡಿವೆ.

ಎರಡು ಎನ್‌ಡಿಆರ್‌ಎಫ್ ತಂಡಗಳು, ಮುಂಬೈ ಅಗ್ನಿಶಾಮಕದಳ ಮತ್ತು ಇತರ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದುವರೆಗೆ 14 ಮಂದಿ ಮೃತಪಟ್ಟಿರುವುದಾಗಿ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಅಧಿಕಾರಿಗಳು ಖಚಿತಪಡಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆಸ್ಪತ್ರೆಗೆ ದಾಖಲಾಗಿದ್ದ ಗಾಯಗಳುಗಳ ಪೈಕಿ ಇದುವರೆಗೆ 35 ಮಂದಿ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ ಸರ್ಕಾರದ ಪೊಲೀಸ್ ವಸತಿ ವಿಭಾಗವು ಪೊಲೀಸ್ ಕಲ್ಯಾಣ ನಿಗಮಕ್ಕೆ ಗುತ್ತಿಗೆ ಪಡೆದಿರುವ ಪ್ಲಾಟ್‌ನಲ್ಲಿ ‘ಈಗೋ ಮೀಡಿಯಾ’ ಎಂಬ ಸಂಸ್ಥೆ ಬೃಹತ್ ಜಾಹೀರಾತು ಫಲಕ ನಿರ್ಮಿಸಿತ್ತು. ಕಟ್ಟಡದ ಆವರಣದಲ್ಲಿ ಈಗೋ ಮೀಡಿಯಾದ ನಾಲ್ಕು ಜಾಹೀರಾತು ಫಲಕಗಳಿತ್ತು. ಈ ಪೈಕಿ ಸೋಮವಾರ ಸಂಜೆ ಒಂದು ಫಲಕ ಕುಸಿದಿದೆ. ಘಟನೆ ಸಂಬಂಧ ಈಗೋ ಮೀಡಿಯಾದ ಮಾಲೀಕರು ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಎಲ್ಲಾ ನಾಲ್ಕು ಜಾಹೀರಾತು ಫಲಕಗಳನ್ನು ಸ್ಥಾಪಿಸಲು ಈಗೋ ಮೀಡಿಯಾ ಸಹಾಯಕ ಪೊಲೀಸ್ ಆಯುಕ್ತರ (ರೈಲ್ವೆ) ಅನುಮತಿ ಪಡೆದಿತ್ತು. ಆದರೆ, ಫಲಕ ಸ್ಥಾಪಿಸುವ ಮುನ್ನ ಬಿಎಂಸಿಯಿಂದ ಯಾವುದೇ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‌ಒಸಿ) ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ರೈಲ್ವೆ ಪೊಲೀಸ್‌ನ ಎಸಿಪಿ ಮತ್ತು ರೈಲ್ವೆ ಕಮಿಷನರ್‌ಗೆ ಬಿಎಂಸಿ ನೋಟಿಸ್ ಜಾರಿ ಮಾಡಿದ್ದು, ರೈಲ್ವೇ ನೀಡಿರುವ ಎಲ್ಲಾ ಅನುಮತಿಗಳನ್ನು ರದ್ದುಗೊಳಿಸುವಂತೆ ಮತ್ತು ಜಾಹೀರಾತು ಫಲಕಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.

ಮುಂಬೈನಲ್ಲಿ ಸೋಮವಾರ ಸಂಜೆ ಹಠಾತ್ ಆಗಿ ಧೂಳು ಮಿಶ್ರಿತ ಗಾಳಿ ಬೀಸಿದ್ದು, ಅಲ್ಲಲ್ಲಿ ಜಾಹೀರಾತು ಫಲಕಗಳು, ಮರಗಳು ಮತ್ತು ಇತರ ನಿರ್ಮಾಣ ಕಾಮಗಾರಿಗಳು ಕುಸಿದು ಬಿದ್ದಿವೆ. ಬಳಿಕ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

Photo Courtesy: telegraphindia.com
ಇದನ್ನೂ ಓದಿ : ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...