Homeಮುಖಪುಟಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

- Advertisement -
- Advertisement -

ನಿನ್ನೆಯ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್‌ರವರ ಮಗನ ಅರ್ಜುನ್ ತೆಂಡೂಲ್ಕರ್‌ರವರನ್ನು 20 ಲಕ್ಷ ಮೂಲಬೆಲೆಗೆ ಖರೀದಿಸಿದೆ. ಈ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಇದು ಸ್ವಜನಪಕ್ಷಪಾತವಲ್ಲವೇ? ಆತನಿಗಿಂತಲೂ ಪ್ರತಿಭಾವಂತರು ಇದ್ದರೂ ಅವರನ್ನೇಕೆ ಖರೀದಿಸಿಲ್ಲ? ಸಚಿನ್ ಪ್ರತಿನಿಧಿಸುತ್ತಿದ್ದ ಮುಂಬೈ ತಂಡವೇ ಆತನನ್ನು ಕೊಳ್ಳಲು ಕಾರಣವೇನು? ಇದು ಮ್ಯಾಜೇನ್‌ಮೆಂಟ್ ಕೋಟಾದಲ್ಲಿ ಸೇರಿಸಿಕೊಂಡಂತೆ ಅಲ್ಲವೇ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಅದೇ ರೀತಿ ಅರ್ಜುನ್ ತೆಂಡೂಲ್ಕರ್ ನಿಜಕ್ಕೂ ಪ್ರತಿಭಾವಂತ ಎಂದಿರುವ ಹಲವರು ಆತನ ಪ್ರದರ್ಶನದ ವಿಡಿಯೋಗಳನ್ನು ಹಾಕಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಸಾಕಷ್ಟು ಟ್ರೋಲ್‌ಗಳು ವ್ಯಕ್ತವಾದ ಬೆನ್ನಲ್ಲೆ ಮುಂಬೈ ಇಂಡಿಯನ್ಸ್ ತಂಡದ ಕೋಚ್ ಮಹೇಲ ಜಯವರ್ಧನೆ ಸ್ಪಷ್ಟನೆ ನೀಡಿದ್ದು, “ಆತನ ಕೌಶಲ್ಯ ಮತ್ತು ಪ್ರತಿಭೆಯ ಆಧಾರದಲ್ಲಿಯೇ ಅರ್ಜುನ್‌ ಕೊಂಡುಕೊಳ್ಳಲಾಗಿದೆ. ಇದು ಅರ್ಜುನ್‌ಗೆ ಕಲಿಕೆಯ ಪ್ರಕ್ರಿಯೆಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಆತ ಮುಂಬೈ ಪರವಾಗಿ ಆಡಲು ಆರಂಭಿಸಿದ ಮತ್ತು ಈಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಪಾಲಾಗಿದ್ದಾನೆ. ಆತ ವಿಕಾಸಗೊಳ್ಳುತ್ತಾನೆ, ಇನ್ನು ಚಿಕ್ಕ ವಯಸ್ಸಾದರೂ, ಫೋಕಸ್ ಉಳ್ಳವನಾಗಿದ್ದಾನೆ” ಎಂದಿದ್ದಾರೆ.

ಆದರೆ ಟ್ವಿಟರ್‌ನಲ್ಲಿ ಮಾತ್ರ ಅರ್ಜುನ್ ಕಾಲೆಳೆದು ಟ್ರೋಲ್ ಮಾಡಲಾಗುತ್ತಿದೆ. ಇತ್ತೀಚೆಗೆ ರೈತ ಹೋರಾಟದ ವಿರುದ್ಧ ಮತ್ತು ಬಿಜೆಪಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳಲ್ಲಿ ಸಚಿನ್ ಕೂಡ ಒಬ್ಬರಾಗಿದ್ದರು. ಈ ಹಿನ್ನೆಲೆಯಲ್ಲಿಯೂ ಸಹ ಅವರ ಮಗನನ್ನು ಟ್ರೋಲ್ ಮಾಡಲಾಗುತ್ತಿದೆ. ಅವುಗಳಲ್ಲಿ ಕೆಲವನ್ನು ಇಲ್ಲಿ ನೀಡಲಾಗಿದೆ. ಅಜಯ್ ಧುಮಲ್ ಎಂಬುವವರು ಟ್ವೀಟ್ ಮಾಡಿ ನೀವು ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದರೆ ಹೇಗೆ ಎಂದು ಅರ್ಜುನ್ ತೆಂಡೂಲ್ಕರ್‌ರವರನ್ನು ಉಲ್ಲೇಖಸಿದ್ದಾರೆ.

“ಅರ್ಜುನ್ ತೆಂಡೂಲ್ಕರ್ ಸ್ವಜನಪಕ್ಷಪಾತತ ಅತಿ ಕೆಟ್ಟ ಉತ್ಪನ್ನ ಎಂದು ಈಗ ಕಂಗನಾ ಕರೆಯುತ್ತಾರೆಯೇ? ಅವರಿನ್ನು ಜಯ್ ಶಾ ಕುರಿತು ಮಾತನಾಡಬೇಕಿದೆ” ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ ಶ್ರೀವತ್ಸ ಟ್ವೀಟ್ ಮಾಡಿದ್ದಾರೆ.

ಸಚಿನ್ ತೆಂಡೂಲ್ಕರ್‌ರನ್ನು ಬಿಜೆಪಿ ಖರೀದಿಸಿದೆ, ಅವರ ಮಗನನ್ನು ಅಂಬಾನಿ ಖರೀದಿಸಿದ್ದಾರೆ ಎಂದು ದಿ ಬ್ಯಾಡ್ ಇಂಜಿನಿಯರ್ ಎಂಬುವವರು ಟ್ರೋಲ್ ಮಾಡಿದ್ದಾರೆ.

ಸ್ವಜನಪಕ್ಷಪಾತ ಎಂದು ಕಿರುಚುತ್ತಿದ್ದವರು ಈಗ ಎಲ್ಲಿದ್ದಾರೆ? ಎಂದು ರಿಯಾ ಆಂದೋಲನ್‌ಜೀವಿ ಟ್ವೀಟ್ ಮಾಡಿದ್ದಾರೆ.

ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ ಟ್ವೀಟ್ ಮಾಡಿ “ವಂಶಪಾರಂಪರ್ಯ ಅಥವಾ ರಕ್ತಗುಣದಿಂದ ಕ್ರಿಕೆಟ್ ಆಡಲಾಗುವುದಿಲ್ಲ, ಹಾಗಾಗಿ ನಾನು ಅರ್ಜುನ್ ತೆಂಡೂಲ್ಕರ್ ಪರ ತಿಂತುಕೊಳ್ಳುತ್ತೇನೆ. ಏಕೆಂದರೆ ಆತನನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿಲ್ಲ ಬದಲಿಗೆ ಮುಂಬೈ ಇಂಡಿಯನ್‌ನಂತಹ ಖಾಸಗಿ ತಂಡ ಕೊಂಡುಕೊಂಡಿದೆ. ಅಂತಿಮವಾಗಿ ಆತ ಮೈದಾನದಲ್ಲಿ ತನ್ನ ಸಾಮರ್ಥ್ಯ ಸಾಬೀತುಪಡಿಸಬೇಕಿದೆ. ಕ್ರೀಡೆಗಳಲ್ಲಿ ಶಾರ್ಟ್‌ಕಟ್ ಇರುವುದಿಲ್ಲ, ಅಂತಿಮವಾಗಿ ಪ್ರತಿಭೆಯೊಂದೇ ಉಳಿಯುವುದು” ಎಂದಿದ್ದಾರೆ.


ಇದನ್ನೂ ಓದಿ: ಕನ್ನಡದ ಹುಡುಗನಿಗೆ ಅಚ್ಚರಿಯ ಡಿಮ್ಯಾಂಡ್: ಐಪಿಎಲ್‌ನಲ್ಲಿ ಕೆ.ಗೌತಮ್ ಮೌಲ್ಯ 9.25 ಕೋಟಿ ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...