Homeಮುಖಪುಟಮುಂಬೈ| 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; ಅದೃಷ್ಟವಶಾತ್ ಪ್ರಾಣಹಾನಿಯಿಲ್ಲ

ಮುಂಬೈ| 6 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; ಅದೃಷ್ಟವಶಾತ್ ಪ್ರಾಣಹಾನಿಯಿಲ್ಲ

- Advertisement -
- Advertisement -

ಮುಂಬೈನ ಅಂಧೇರಿ ಪ್ರದೇಶದ ವೀರ ದೇಸಾಯಿ ರಸ್ತೆಯಲ್ಲಿರುವ ಆರು ಅಂತಸ್ತಿನ ವಸತಿ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಕಟ್ಟಡದಲ್ಲಿದ್ದ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಈ ಬೆಂಕಿಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ, ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಅಧಿಕಾರಿಗಳ ಪ್ರಕಾರ, ಅಂಧೇರಿ (ಪಶ್ಚಿಮ) ದಲ್ಲಿರುವ ಚಿಂಚನ್ ಕಟ್ಟಡದ ಫ್ಲಾಟ್‌ನಲ್ಲಿ ಬೆಳಿಗ್ಗೆ 8.42 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲಿ ಕೂಲಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ನವೆಂಬರ್ 26 ರಂದು ಥಾಣೆಯ ಕಲ್ಯಾಣ್‌ನಲ್ಲಿರುವ 18 ಅಂತಸ್ತಿನ ವರ್ಟೆಕ್ಸ್ ಸೊಲೈಯರ್ ಕಟ್ಟಡದ 16 ನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಥಾಣೆ ಹೆಚ್ಚುವರಿ ಸಿಪಿ ಸಂಜಯ್ ಜಾಧವ್ ತಿಳಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದರ ಕಾರಣ ತಕ್ಷಣವೇ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

16ನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಸತಿ ಕಟ್ಟಡದ 17 ಮತ್ತು 18ನೇ ಹಂತಗಳಿಗೆ ಬೆಂಕಿ ವ್ಯಾಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಉಪಕರಣಗಳು ಮತ್ತು ವಾಹನಗಳೊಂದಿಗೆ ಸಂಜೆ 6. 30 ರ ಸುಮಾರಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು ಎಂದು ಅವರು ಹೇಳಿದರು.

ಇದನ್ನೂ ಓದಿ; ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...