PC: PTI

ಯುಕೆ, ಯುರೋಪ್, ಮಧ್ಯಪ್ರಾಚ್ಯ, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್‌ನ ಅಂತರರಾಷ್ಟ್ರೀಯ ಪ್ರಯಾಣಿಕರು ಮುಂಬೈಗೆ ಬಂದು ಒಂದು ವಾರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಾಗಿತ್ತು. ಆದರೆ ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವವರು ಇನ್ನು ಮುಂದೆ ಕ್ವಾರಂಟೈನ್‌ನಲ್ಲಿ ಇರಬೇಕಾಗಿಲ್ಲ ಎಂದು ಬಿಎಂಸಿ ತಿಳಿಸಿದೆ.

ಮುಂಬೈನ ನಾಗರಿಕ ಸಂಸ್ಥೆ ಬಿಎಂಸಿ ತನ್ನ ಹೊಸ ಸಲಹಾ ಸಮಿತಿಯ ಮಾರ್ಗ ಸೂಚಿಯಲ್ಲಿ, 65 ವರ್ಷಕ್ಕಿಂತ ಮೇಲ್ಪಟ್ಟ ಪ್ರಯಾಣಿಕರಿಗೆ, ಗರ್ಭಣಿಯರಿಗೆ, ಐದು ವರ್ಷದೊಳಗಿನ ಮಕ್ಕಳೊಂದಿಗೆ ಇರುವ ಪೋಷಕರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿದೆ.

ಇದಕ್ಕೂ ಮೊದಲು, ಈ ದೇಶಗಳಿಂದ ಅಂತರರಾಷ್ಟ್ರೀಯ ವಿಮಾನಗಳ ಮೂಲಕ ಮುಂಬೈಗೆ ಬರುವ ಅಥವಾ ಹೋಗುವ ಪ್ರಯಾಣಿಕರು ವಿಮಾನ ಹತ್ತುವ ಮೊದಲು ಕೊರೊನಾ ನೆಗೆಟಿವ್ ವರದಿಯನ್ನು ತೆಗೆದುಕೊಳ್ಳಬೇಕಿತ್ತು. ಸರ್ಕಾರ ನಿಗದಿ ಪಡಿಸಿದ ಕೊರೊನಾ ಆರೈಕೆ ಕೇಂದ್ರದಲ್ಲಿ 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಾಗಿತ್ತು.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ಕ್ಯಾನ್ಸರ್, ತೀವ್ರ ದೈಹಿಕ ಅಂಗವೈಕಲ್ಯ, ಮಾನಸಿಕ ಅಸ್ವಸ್ಥತೆ ಮತ್ತು ಸೆರೆಬ್ರಲ್ ಪಾಲ್ಸಿ ಮುಂತಾದ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುವ ಗಂಭೀರ ಕಾಯಿಲೆಗಳನ್ನು ಹೊಂದಿರುವ ಪ್ರಯಾಣಿಕರು ವೈದ್ಯಕೀಯ ದಾಖಲೆಗಳನ್ನು ನೀಡಿದರೇ ಅವರಿಗೂ ಕ್ವಾರಂಟೈನ್ ರದ್ದು ಪಡಿಸಲಾಗುತ್ತದೆ.

ಶಸ್ತ್ರಚಿಕಿತ್ಸೆ ನಡೆಸಲು ಪ್ರಯಾಣಿಸುವವರು ಅಥವಾ ತುರ್ತು ಚಿಕಿತ್ಸೆ ನೀಡುವ ಉದ್ದೇಶದಿಂದ ಹೊರಡುವ ವೈದ್ಯಕೀಯ ವೃತ್ತಿಪರರು ಸೂಕ್ತ ದಾಖಲೆ ನೀಡಿದರೇ, ಅವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ಇದೆ.

ಇವರುಗಳನ್ನು ಬಿಟ್ಟು ಉಳಿದ ಪ್ರಯಾಣಿಕರು ಏಳು ದಿನಗಳವರೆಗೆ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಏಳು ದಿನಗಳ ನಂತರ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆಯೂ ಹೊಸ ಮಾರ್ಗಸೂಚಿಗಳನ್ನು ಸರ್ಕಾರ ಜಾರಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳಿಂದಾಗಿ ನಾಗ್ಪುರವನ್ನು ಮಾರ್ಚ್ 15 ರಿಂದ ಇಂದಿನವರೆಗೆ (ಮಾರ್ಚ್ 21) ರವರೆಗೆ ಒಂದು ವಾರ ಲಾಕ್ ಡೌನ್ ಮಾಡಿ ಸರ್ಕಾರ ಆದೇಶಿಸಿತ್ತು. ಅಗತ್ಯ ಸೇವೆಗಳಾದ ತರಕಾರಿ, ಹಣ್ಣಿನ ಅಂಗಡಿಗಳು ಮತ್ತು ಹಾಲಿನ ಡೈರಿಗಳು ಕಾರ್ಯನಿರ್ವಹಿಸಿದ್ದವು.


ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

1 COMMENT

  1. ಈ online ಪತ್ರಿಕೆ ತುಂಬಾ ಮಾಹಿತಿ ಮತ್ತು ಪ್ರಚಲಿತಾ ವಿದ್ಯಾಮನಗಳೊಂದಿಗೆ ನಮ್ಮನ್ನು ಜಾಗೃತಿ ಗೊಳಿಸಿದ್ದಾಕ್ಕಾಗಿ ಧನ್ಯವಾದಗಳು

LEAVE A REPLY

Please enter your comment!
Please enter your name here