Homeಮುಖಪುಟಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಅರ್ನಾಬ್‌ಗೆ ನೋಟಿಸ್‌ ನೀಡಿದ ಮುಂಬೈ ಪೊಲೀಸ್‌

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

- Advertisement -
- Advertisement -

ಕೋಮು ದ್ವೇಷ ಪ್ರಚೋದನಾಕಾರಿ ಸುದ್ದಿ ಪ್ರಕಟಿಸಿದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್‌ ಟಿ.ವಿ ಮ್ಯಾನೇಜಿಂಗ್‌ ಡೈರೆಕ್ಟರ್‌ ಅರ್ನಾಬ್‌ ಗೋಸ್ವಾಮಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಮುಂಬೈನ ಬಾಂದ್ರಾದ ರೈಲು ನಿಲ್ದಾಣದ ಎದುರು ಏಪ್ರಿಲ್ 14 ರಂದು ವಲಸೆ ಕಾರ್ಮಿಕರು ದೊಡ್ಡ ಪ್ರಮಾಣದಲ್ಲಿ ಒಟ್ಟುಗೂಡಿದ್ದನ್ನು, ಮಸೀದಿ ಎದುರು ಗುಂಪುಗೂಡಿದ್ದಾರೆ ಎಂದು ತನ್ನ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸಿದ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಮುಂಬೈ ಪೊಲೀಸರು ಮೇ 2ರ ಶನಿವಾರ ಹೊಸ ಎಫ್ಐಆರ್ ದಾಖಲಿಸಿದ್ದಾರೆ.

ಅರ್ನಾಬ್‌ ವಿರುದ್ಧ ಪ್ಯಾಡೋನಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಐಪಿಸಿ 153, 153ಎ, 295ಎ, 500, 505(2), 501(1)(ಬಿ)(ಸಿ), 511, 120(ಬಿ) ಸೆಕ್ಷನ್‌ಗಳ ಕುರಿತು ಹೆಚ್ಚಿನ ವಿಚಾರಣೆಗಾಗಿ ತನಿಖಾಧಿಕಾರಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಸುರೇಶ್‌ ಗಾಯಕ್‌ವಾಡ್‌ರವರ ಎದುರು ಜೂನ್‌ 10ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಮೊದಲು ಪಾಲ್ಘಾರ್‌ ಲಿಂಚಿಂಗ್‌ ಪ್ರಕರಣದಲ್ಲಿ ಪ್ರಚೋದನಾಕಾರಿ ಸುದ್ದಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸಿದ ಕಾರಣಕ್ಕಾಗಿ ಅರ್ನಾಬ್‌ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗಿದ್ದವು.

ಏಪ್ರಿಲ್ 24 ರಂದು, ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಮೂರು ವಾರಗಳ ಕಾಲ ಬಂಧನದಿಂದ ರಕ್ಷಣೆ ನೀಡಿತು ಮತ್ತು ಇತರ ರಾಜ್ಯಗಳಲ್ಲಿ ಎಫ್‌ಐಆರ್‌ಗಳು ದಾಖಲಾಗದಂತೆ ತಡೆಹಿಡಿದಿತ್ತು.

ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ತನ್ನ ಚಾನೆಲ್‌ ಕಾರ್ಯಕ್ರಮಗಳಲ್ಲಿ ಪೊಲೀಸರನ್ನು ದಬಾಯಿಸುವ ಮೂಲಕ ‘ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಮುಂಬೈ ಪೊಲೀಸ್ ಉಪ ಆಯುಕ್ತರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ಗೆ ಮುಂಬೈ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಗೋಸ್ವಾಮಿ ಅವರು ತಮ್ಮ ವಿರುದ್ಧ ಪೊಲೀಸರು ಪಕ್ಷಪಾತ ನಡೆಸುತ್ತಿದ್ದಾರೆಂದು ಹೇಳಲು ರಿಪಬ್ಲಿಕ್‌ನ ಟ್ವಿಟ್ಟರ್‌ ಹ್ಯಾಂಡಲ್‌ಗಳನ್ನು ಬಳಸಿದ್ದಾರೆ.  ಅವರ ‘ಪುಚ್ತಾ ಹೈ ಭಾರತ್’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರು ಇಂಡಿಯಾಬುಲ್ಸ್‌ಗೆ ಸಂಬಂಧಿಸಿದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಗೋಸ್ವಾಮಿ ಅವರು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ದಿನ, ಅವರು ತಮ್ಮ ಮಾಧ್ಯಮ ತಂಡವನ್ನು ತೊಂದರೆ ಸೃಷ್ಟಿಸಲು ಬಳಸಿದರು. ತಮ್ಮ ಪ್ರಭಾವವನ್ನು ಪೊಲೀಸ್ ಠಾಣೆಯಲ್ಲಿ ಬಳಸಲು ಪ್ರಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಅರ್ನಾಬ್‌ ವರದಿಗಾರರು, ಕ್ಯಾಮೆರಾಮನ್ ಮುಂತಾದವರನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು ತನ್ನ ಕಥೆಯನ್ನು ವಿವರಿಸುತ್ತಾ ಪ್ರಸಾರ ಮಾಡುತ್ತಿದ್ದರು. ಅಲ್ಲಿ ಅವರು ಕೆಲವು ನಿರ್ದಿಷ್ಟ ಕೆಲಸಗಳನ್ನು ಮಾಡಲು ಮತ್ತು ನಿರ್ದಿಷ್ಟ ರೀತಿಯಲ್ಲಿ ವರ್ತಿಸುವಂತೆ ಪೊಲೀಸರಿಗೆ ಆಜ್ಞಾಪಿಸಿದನು. ಪ್ರಕರಣ ಸಂಭವಿಸಿದ ಮತ್ತು ನೋಂದಾಯಿಸಿದಾಗಿನಿಂದ, ಅರ್ಜಿದಾರನು ಪ್ರತಿ ಹಂತದಲ್ಲೂ ಇಡೀ ಘಟನೆಯನ್ನು ತನ್ನ ಮಾಧ್ಯಮದಲ್ಲಿ  ಪ್ರದರ್ಶಿಸಿದ್ದಾನೆ” ಎಂದು ಮಹಾರಾಷ್ಟ್ರ ಸರ್ಕಾರ ಆರೋಪಿಸಿದೆ.

ಗೋಸ್ವಾಮಿ ಅವರು ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಸಂಪಾದಕರಾಗಿ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಈ ಆಧಾರದ ಮೇಲೆ, ಅರ್ನಾಬ್ ಅವರಿಗೆ ನ್ಯಾಯಾಲಯವು ನೀಡಿದ ಮಧ್ಯಂತರ ರಕ್ಷಣೆಯನ್ನು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಮತ್ತು ಅವರಿಂದ “ಯಾವುದೇ ಒತ್ತಡ, ಬೆದರಿಕೆ ಅಥವಾ ಬಲಾತ್ಕಾರದಿಂದ ತನಿಖೆಯನ್ನು ಕುಂಠಿತಗೊಳಿಸದಂತೆ” ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದರಿಂದ ತನಿಖೆಯನ್ನು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬಹುದು ಎಂದು ತಿಳಿಸಿದೆ.

ಇನ್ನು ಜೂನ್‌ 06 ರಂದು ಅರ್ನಾಬ್‌ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ನಿಯಂತ್ರಣ) ಕಾಯ್ದೆ 1995 ರ ಅಡಿಯಲ್ಲಿ ಪುಣೆ ಮೂಲದ ಕಾರ್ಯಕರ್ತ ನಿಲೇಶ್ ನವಲಖಾ ಎಂಬುವವರು ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

14 ಪುಟಗಳ ದೂರಿನಲ್ಲಿ ಪಾಲ್ಗರ್ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೈಮ್‌ಟೈಮ್ ಶೋನಲ್ಲಿ ಗೋಸ್ವಾಮಿ ಸೋನಿಯಾ ಗಾಂಧಿ ಮೇಲೆ ಆಧಾರ ರಹಿತ ಆರೋಪ ಹೊರಿಸಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...