Homeಮುಖಪುಟಮಹಾದೇವ್ ಬೆಟ್ಟಿಂಗ್ ಆಫ್ ಪ್ರಕರಣ: 32 ಮಂದಿ ವಿರುದ್ದ ಪ್ರಕರಣ ದಾಖಲು

ಮಹಾದೇವ್ ಬೆಟ್ಟಿಂಗ್ ಆಫ್ ಪ್ರಕರಣ: 32 ಮಂದಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಮುಂಬೈ ಪೊಲೀಸರು ವಿವಾದಿತ ಮಹಾದೇವ್ ಬೆಟ್ಟಿಂಗ್ ಆಪ್‌ನ ಅಂಗಸಂಸ್ಥೆಯಾದ ಖಿಲಾಡಿ ಆಪ್‌ನ ಸಂಸ್ಥಾಪಕ ಸೌರಭ್ ಚಂದ್ರಕರ್ ಸೇರಿದಂತೆ 32 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕುರ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾಟುಂಗಾ ಪೊಲೀಸ್ ಠಾಣೆಯಲ್ಲಿ  ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಮಾಟುಂಗಾದ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಬಣಕಾರ್ ಅವರು ದೂರು ನೀಡಿದ್ದು, 2019ರಿಂದ ಇಲ್ಲಿಯವರೆಗೆ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಸುಮಾರು 15,000 ಕೋಟಿ ರೂಪಾಯಿಗಳ ವಂಚನೆ ಮಾಡಲಾಗಿದೆ. ಇದಕ್ಕೆ ದೊಡ್ಡ ಸೆಲೆಬ್ರಿಟಿಗಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸೌರಭ್ ಚಂದ್ರಾಕರ್ ಛತ್ತೀಸ್‌ಗಢದ ಭಿಲಾಯಿ ಮೂಲದವರು. ಜಾರಿ ನಿರ್ದೇಶನಾಲಯ ಸೇರಿದಂತೆ ಹಲವು ಏಜೆನ್ಸಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳನ್ನು ವಿಚಾರಣೆಗೆ ಕರೆಸಿದ್ದಾರೆ.

ದೂರುದಾರರು, ನಾಗರಿಕರಿಗೆ ಮೋಸ ಮಾಡಲಾಗಿದೆ. ಕ್ರಿಕೆಟ್, ಟೆನಿಸ್, ಟೀನ್ ಪ್ಯಾಟಿ, ಫುಟ್‌ಬಾಲ್ ಮುಂತಾದ ವಿವಿಧ ಆಟಗಳ ಮೂಲಕ ಬೆಟ್ಟಿಂಗ್‌ಗೆ ಮಾಡಲು ಪ್ರೋತ್ಸಾಹಿಸಲಾಗಿದೆ. ಈ ಲಾಭಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹವಾಲಾ ವ್ಯವಹಾರದಲ್ಲಿ ಕಾನೂನುಬಾಹಿರ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಒಟ್ಟು 32 ಜನರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ ಎಂದು ಮಾಟುಂಗಾ ಪೊಲೀಸ್ ಠಾಣೆಯ ಅಧಿಕಾರಿಗಳು ಹೇಳಿದ್ದಾರೆ. ಪಂಜಾಬ್‌ನ ರೋಹಿತ್‌ಕುಮಾರ್ ಮುರ್ಗೈ, ದುಬೈನ ಕುಮಾರ್ ರಾಠಿ, ಛತ್ತೀಸ್‌ಗಢದ ಶುಭಂ ಸೋನಿ, ಛತ್ತೀಸ್‌ಗಢದ ಅತುಲ್ ಅಗರ್ವಾಲ, ಪಶ್ಚಿಮ ಬಂಗಾಳದ ವಿಕಾಸ್ ಚಪಾರಿಯಾ, ಮುಂಬೈನ ಅಮಿತ್, ದುಬೈನ ಲಾಲಾ ರಾಠಿ, ಛತ್ತೀಸ್‌ಗಢದ ಅಭಿಷೇಕ್ ರಾಠಿ, ಮುಂಬೈನ ಖಂಜಾಮ್ ಠಕ್ಕರ್, ಮುಂಬೈನ ಅಮಿತ್ ಜಿಂದಾಲ್ ಸೇರಿ 32 ಜನರ ಹೆಸರನ್ನು ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ ಮುಂಬೈ, ರಾಯ್‌ಪುರ ಮತ್ತು ಕೋಲ್ಕತ್ತಾ ಸೇರಿದಂತೆ ಹಲವು ರಾಜ್ಯಗಳಲ್ಲಿ 39 ಸ್ಥಳಗಳಲ್ಲಿ ಇಡಿ ಶೋಧನೆ ನಡೆಸಿದ್ದು 417 ಕೋಟಿ ರೂ.ಗಳನ್ನು ಜಫ್ತಿ ಮಾಡಿದೆ.

ಆರೋಪಿಗಳ ವಿರುದ್ಧ ಮಹಾರಾಷ್ಟ್ರದ ಜೂಜು ತಡೆ ಕಾಯಿದೆ ಸೆಕ್ಷನ್ 12(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಲ್ಲದೆ ವಂಚನೆ, ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ಸಿ ಮತ್ತು 66 (ಎಫ್) ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಟುಂಗಾದಲ್ಲಿ ದಾಖಲಾದ ಪ್ರಕರಣವನ್ನು ಶೀಘ್ರದಲ್ಲೇ ಆರ್ಥಿಕ ಅಪರಾಧ ವಿಭಾಗಕ್ಕೆ  ವರ್ಗಾಯಿಸಲಾಗುವುದು. ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಸೌಜನ್ಯ ಪ್ರಕರಣ: ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...