ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಶನಿವಾರ ಸಂಜೆ ಬಾಂದ್ರಾದ ನಿರ್ಮಲ್ ನಗರದಲ್ಲಿರುವ ಅವರ ಪುತ್ರ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ದಿಕ್ ಅವರ ಮೇಲೆ ಮೂವರು ಅಪರಿಚಿತ ದಾಳಿಕೋರರು ಆರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ವರದಿ ಹೇಳಿದೆ. ಮುಂಬೈ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ದಾಳಿ ನಡೆದ ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಅಲ್ಲಿ ಘೋಷಿಸಲಾಯಿತು. ದಾಳಿಕೋರರು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಶಂಕಿಸಲಾಗಿದೆ ಎಂದು ಹಲವು ವರದಿಗಳು ಉಲ್ಲೇಖಿಸಿವೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ.
ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿರುವ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರಿದ್ದರು. ಅವರ ಪುತ್ರ ಜೀಶನ್ ಸಿದ್ದಿಕ್ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.
Mumbai police sealed the spot where former minister Baba Siddique was shot dead by three unidentified gunmen. @NewIndianXpress pic.twitter.com/TdvFpMi45A
— Sudhir Suryawanshi (@ss_suryawanshi) October 12, 2024
ಇದನ್ನೂಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ
ಸಿದ್ದಿಕ್ ಮೇಲೆ ಒಟ್ಟು ಆರು ಸುತ್ತು ಗುಂಡು ಹಾರಿಸಲಾಗಿದ್ದು, ತಲೆ ಮತ್ತು ಎದೆಗೆ ಪೆಟ್ಟು ಬಿದ್ದಿದೆ ಎಂದು ವರದಿಯಾಗಿದೆ. ಕಳೆದ 15 ದಿನಗಳ ಹಿಂದಿನಿಂದ ಅವರಿಗೆ ಜೀವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ವರದಿಯಾಗಿದೆ. ಹಾಗಾಗಿ ಅವರಿಗೆ ವೈ ಭದ್ರತೆ ಒದಗಿಸಿಸಲಾಗಿತ್ತು. ಮುಂಬೈ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ದುರಂತ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದು “ಅತ್ಯಂತ ದುರದೃಷ್ಟಕರ” ಎಂದು ಬಣ್ಣಿಸಿದ್ದಾರೆ. ಬಾಬಾ ಸಿದ್ದಿಕ್ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮತ್ತು ಹರಿಯಾಣ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ.
ಮೂರನೇ ದಾಳಿಕೋರ ಪರಾರಿಯಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಒತ್ತಿ ಹೇಳಿದ ಶಿಂಧೆ ಹೇಳಿದ್ದಾರೆ. ಶೀಘ್ರ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.
ಇದನ್ನೂಓದಿ: ವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!
ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರು ದಾಳಿಯನ್ನು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ಬಣ್ಣಿಸಿದ್ದಾರೆ. “ಈ ಘಟನೆಯಲ್ಲಿ ಅವರು ಸಾವನ್ನಪ್ಪಿದ್ದಾರೆಂದು ತಿಳಿದ ನಂತರ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಅಜಿತ್ ಪವಾರ್ ಹೇಳಿದ್ದಾರೆ. ತಾನು ಉತ್ತಮ ಸ್ನೇಹಿತ ಮತ್ತು ಸಹೋದ್ಯೋಗಿಯನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಹೋರಾಡಿದ ಮತ್ತು ಜಾತ್ಯತೀತತೆಯನ್ನು ಪ್ರತಿಪಾದಿಸಿದ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ, ದಾಳಿಯ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿದ್ದು, ಸಿದ್ದಿಕಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಸಿದ್ದಿಕಿ ಅವರು ಆತ್ಮೀಯ ಸ್ನೇಹಿತನಾಗಿದ್ದು, ತಾನು ಮಾತುಗಳನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.
ಇದನ್ನೂಓದಿ: ಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ
ಮಾಜಿ ಕೇಂದ್ರ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಶರದ್ ಪವಾರ್ ಅವರು ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಸಾಮಾನ್ಯ ಜನರಿಗೆ ಆತಂಕಕಾರಿಯಾಗಿದೆ ಎಂದು ಬಣ್ಣಿಸಿದ್ದಾರೆ. ರಾಜ್ಯದ ಗೃಹ ಸಚಿವರು ಈ ಪರಿಸ್ಥಿತಿಯ ಹೊಣೆಗಾರರಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಾಬಾ ಸಿದ್ದಿಕ್ ಅವರು ಗ್ರ್ಯಾಂಡ್ ಇಫ್ತಾರ್ ಪಾರ್ಟಿಗಳನ್ನು ಆಯೋಜಿಸುವುದರಲ್ಲಿ ಹೆಸರುವಾಸಿಯಾಗಿದ್ದರು. ಅವರ ಇಫ್ತಾರ್ ಪಾರ್ಟಿಗಳಲ್ಲಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಸೇರಿದಂತೆ ಪ್ರಮುಖ ಬಾಲಿವುಡ್ ತಾರೆಯರು ಭಾಗವಹಿಸುತ್ತಿದ್ದರು.
ಅಕ್ಟೋಬರ್ 4 ರಂದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ಬೈಕುಲ್ಲಾ ತಾಲೂಕು ಅಧ್ಯಕ್ಷ ಸಚಿನ್ ಕುರ್ಮಿ ಅವರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಆಂತರಿಕ ಕಲಹದ ಪರಿಣಾಮವಾಗಿ ಅವರ ಮನೆಯ ಸಮೀಪವೇ ಚಾಕುವಿನಿಂದ ಇರಿಯಲಾಗಿತ್ತು. ಕುರ್ಮಿ ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.
ವಿಡಿಯೊ ನೋಡಿ: ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!


