Homeಮುಖಪುಟಮುಂಬೈ | ಆಡಳಿತರೂಢ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕ್ ಹತ್ಯೆ!

ಮುಂಬೈ | ಆಡಳಿತರೂಢ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕ್ ಹತ್ಯೆ!

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಶನಿವಾರ ಸಂಜೆ ಬಾಂದ್ರಾದ ನಿರ್ಮಲ್ ನಗರದಲ್ಲಿರುವ ಅವರ ಪುತ್ರ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ದಿಕ್ ಅವರ ಮೇಲೆ ಮೂವರು ಅಪರಿಚಿತ ದಾಳಿಕೋರರು ಆರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ವರದಿ ಹೇಳಿದೆ. ಮುಂಬೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಾಳಿ ನಡೆದ ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ಅಲ್ಲಿ ಘೋಷಿಸಲಾಯಿತು. ದಾಳಿಕೋರರು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಶಂಕಿಸಲಾಗಿದೆ ಎಂದು ಹಲವು ವರದಿಗಳು ಉಲ್ಲೇಖಿಸಿವೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ.

ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿರುವ ಸಿದ್ದಿಕ್ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಲೋಕಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರಿದ್ದರು. ಅವರ ಪುತ್ರ ಜೀಶನ್ ಸಿದ್ದಿಕ್ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.

ಇದನ್ನೂಓದಿ: ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಸಿದ್ದಿಕ್ ಮೇಲೆ ಒಟ್ಟು ಆರು ಸುತ್ತು ಗುಂಡು ಹಾರಿಸಲಾಗಿದ್ದು, ತಲೆ ಮತ್ತು ಎದೆಗೆ ಪೆಟ್ಟು ಬಿದ್ದಿದೆ ಎಂದು ವರದಿಯಾಗಿದೆ. ಕಳೆದ 15 ದಿನಗಳ ಹಿಂದಿನಿಂದ ಅವರಿಗೆ ಜೀವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ವರದಿಯಾಗಿದೆ. ಹಾಗಾಗಿ ಅವರಿಗೆ ವೈ ಭದ್ರತೆ ಒದಗಿಸಿಸಲಾಗಿತ್ತು. ಮುಂಬೈ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ದುರಂತ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದು “ಅತ್ಯಂತ ದುರದೃಷ್ಟಕರ” ಎಂದು ಬಣ್ಣಿಸಿದ್ದಾರೆ. ಬಾಬಾ ಸಿದ್ದಿಕ್ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮತ್ತು ಹರಿಯಾಣ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ.

ಮೂರನೇ ದಾಳಿಕೋರ ಪರಾರಿಯಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಒತ್ತಿ ಹೇಳಿದ ಶಿಂಧೆ ಹೇಳಿದ್ದಾರೆ. ಶೀಘ್ರ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

ಇದನ್ನೂಓದಿ: ವೈದ್ಯರ ಸಾಮೂಹಿಕ ರಾಜೀನಾಮೆ ತಿರಸ್ಕರಿಸಿದ ಬಂಗಾಳ ಸರ್ಕಾರ!

ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಅಜಿತ್ ಪವಾರ್ ಅವರು ದಾಳಿಯನ್ನು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ಬಣ್ಣಿಸಿದ್ದಾರೆ. “ಈ ಘಟನೆಯಲ್ಲಿ ಅವರು ಸಾವನ್ನಪ್ಪಿದ್ದಾರೆಂದು ತಿಳಿದ ನಂತರ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಅಜಿತ್ ಪವಾರ್ ಹೇಳಿದ್ದಾರೆ. ತಾನು ಉತ್ತಮ ಸ್ನೇಹಿತ ಮತ್ತು ಸಹೋದ್ಯೋಗಿಯನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಹೋರಾಡಿದ ಮತ್ತು ಜಾತ್ಯತೀತತೆಯನ್ನು ಪ್ರತಿಪಾದಿಸಿದ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ, ದಾಳಿಯ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿದ್ದು, ಸಿದ್ದಿಕಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಅವರು ಸಿದ್ದಿಕಿ ಅವರು ಆತ್ಮೀಯ ಸ್ನೇಹಿತನಾಗಿದ್ದು, ತಾನು ಮಾತುಗಳನ್ನು ಕಳೆದುಕೊಂಡಿದ್ದಾಗಿ ಹೇಳಿದ್ದಾರೆ.

ಇದನ್ನೂಓದಿ: ಬಾಂಗ್ಲಾದೇಶ | ಪ್ರಧಾನಿ ಮೋದಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳ್ಳತನ

ಮಾಜಿ ಕೇಂದ್ರ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಶರದ್ ಪವಾರ್ ಅವರು ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಸಾಮಾನ್ಯ ಜನರಿಗೆ ಆತಂಕಕಾರಿಯಾಗಿದೆ ಎಂದು ಬಣ್ಣಿಸಿದ್ದಾರೆ. ರಾಜ್ಯದ ಗೃಹ ಸಚಿವರು ಈ ಪರಿಸ್ಥಿತಿಯ ಹೊಣೆಗಾರರಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಾಬಾ ಸಿದ್ದಿಕ್ ಅವರು ಗ್ರ್ಯಾಂಡ್ ಇಫ್ತಾರ್ ಪಾರ್ಟಿಗಳನ್ನು ಆಯೋಜಿಸುವುದರಲ್ಲಿ ಹೆಸರುವಾಸಿಯಾಗಿದ್ದರು. ಅವರ ಇಫ್ತಾರ್ ಪಾರ್ಟಿಗಳಲ್ಲಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಸೇರಿದಂತೆ ಪ್ರಮುಖ ಬಾಲಿವುಡ್ ತಾರೆಯರು ಭಾಗವಹಿಸುತ್ತಿದ್ದರು.

ಅಕ್ಟೋಬರ್ 4 ರಂದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ಬೈಕುಲ್ಲಾ ತಾಲೂಕು ಅಧ್ಯಕ್ಷ ಸಚಿನ್ ಕುರ್ಮಿ ​​ಅವರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಆಂತರಿಕ ಕಲಹದ ಪರಿಣಾಮವಾಗಿ ಅವರ ಮನೆಯ ಸಮೀಪವೇ ಚಾಕುವಿನಿಂದ ಇರಿಯಲಾಗಿತ್ತು. ಕುರ್ಮಿ ​​ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ವಿಡಿಯೊ ನೋಡಿ: ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...