Homeಮುಖಪುಟಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಭದ್ರತೆ ಹೆಚ್ಚಿಸಿದ ಪೊಲೀಸರು

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಭದ್ರತೆ ಹೆಚ್ಚಿಸಿದ ಪೊಲೀಸರು

- Advertisement -
- Advertisement -

ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್‌ ಅವರಿಗೆ ಜೀವ ಬೆದರಿಕೆ ಪತ್ರ ಬಂದಿರುವ ಹಿನ್ನೆಲೆ ಅವರ ಬಾಂದ್ರಾ ನಿವಾಸದ ಬಳಿ ಭದ್ರತೆ ಹೆಚ್ಚಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೀವ ಬೆದರಿಕೆ ಪತ್ರದಲ್ಲಿ ಚಿತ್ರ ಬರಹಗಾರ, ನಿರ್ಮಾಪಕ ಸಲೀಂ ಖಾನ್ ಮತ್ತು ನಟ ಸಲ್ಮಾನ್ ಖಾನ್ ಅವರ ಹೆಸರನ್ನು ಉಲ್ಲೇಖಿಸಿದ್ದು, ಇತ್ತೀಚೆಗೆ ಹತ್ಯೆಯಾದ ಕಾಂಗ್ರೆಸ್ ನಾಯಕ, ಗಾಯಕ ಸಿಧು ಮೂಸೆವಾಲಾ ರೀತಿಯಲ್ಲಿ ಕೊಲೆಯಾಗುತ್ತಿರಿ ಎಂದು ಹಿಂದಿಯಲ್ಲಿ ಪತ್ರ ಬರೆಯಲಾಗಿದೆ. ಸಲೀಂ ಖಾನ್ ಅವರು ಪ್ರತಿದಿನ ಜಾಗಿಂಗ್ ಮಾಡಿದ ನಂತರ ಕುಳಿತುಕೊಳ್ಳುವ ಬೆಂಚ್‌ ಮೇಲೆ ಪತ್ರ ದೊರೆತಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ಗ್ಯಾಂಗ್‌ ಸ್ಟಾರ್‌ ಲಾರೆನ್ಸ್ ಬಿಷ್ಣೋಯ್ ಅವರನ್ನು ನಟ ಸಲ್ಮಾನ್ ಖಾನ್ ಅವರಿಗೆ ಬಂದಿರುವ ಅನಾಮಿಕ ಜೀವ ಬೆದರಿಕೆ ಪತ್ರದ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 ಇದನ್ನೂ ಓದಿ: ಜನಪ್ರಿಯ ಸಿನಿಮಾಗಳ ಗುಣಮಟ್ಟದ ಜೊತೆಗೇ ಪಾತಾಳಕ್ಕೆ ಕುಸಿದ ಸಿನಿಮಾ ಬರೆಹಗಳು

“ನಾವು ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಟನ ಭದ್ರತೆಯ ಬಗ್ಗೆ ನಾವು ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಮುಂಬೈ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ಹೇಳಿದ್ದಾರೆ.

ಇನ್ನು, ಬೆದರಿಕೆ ಪತ್ರವನ್ನು ವಶಪಡಿಸಿಕೊಂಡ ನಂತರ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಬಲಪಡಿಸಲಾಗಿದೆ. ಅವರ ನಿವಾಸದ ಹೊರಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದು,  ಜೀವ ಬೆದರಿಕೆ ಪತ್ರವನ್ನು ಕಳುಹಿಸಿದ್ದಕ್ಕಾಗಿ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು (FIR) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಅವರ ‘ರೆಡಿ’ ಸಿನಿಮಾ ಚಿತ್ರೀಕರಣದ ಸಮಯದಲ್ಲಿಯೂ ಹತ್ಯೆಗೆ ಯೋಜಿಸಿದ್ದರು, ಆದರೆ ಶಸ್ತ್ರಾಸ್ತ್ರಗಳ ಸಮಸ್ಯೆಯಿಂದಾಗಿ ಅದು ವಿಫಲವಾಗಿತ್ತು ಎನ್ನಲಾಗಿದೆ. ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಬಿಷ್ಣೋಯ್ ಗ್ಯಾಂಗ್‌ನ ಮೂವರು ಶಾರ್ಪ್ ಶೂಟರ್‌ಗಳನ್ನು ಬಂಧಿಸಿದ್ದರು.


ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ಹುಳುಕು ಬಿಚ್ಚಿಡುತ್ತಿವೆ ತಮಿಳು, ಮಲಯಾಳಂ ಸಿನಿಮಾಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...