Homeಚಳವಳಿಮುಂಬೈನಲ್ಲಿ ಕೇವಲ 4 ಕಿ.ಮೀ ಅಂತರದಲ್ಲಿ CAA ಪರ ಮತ್ತು ವಿರುದ್ಧ ಜರುಗಿದ ಬೃಹತ್‌ ಶಾಂತಿಯುತ...

ಮುಂಬೈನಲ್ಲಿ ಕೇವಲ 4 ಕಿ.ಮೀ ಅಂತರದಲ್ಲಿ CAA ಪರ ಮತ್ತು ವಿರುದ್ಧ ಜರುಗಿದ ಬೃಹತ್‌ ಶಾಂತಿಯುತ ಪ್ರತಿಭಟನೆಗಳು!

- Advertisement -
- Advertisement -

ಮುಂಬೈನಲ್ಲಿ ಇಂದು ಆಶ್ಚರ್‍ಯವೊಂದು ಜರುಗಿದೆ. ಒಂದೇ ದಿನ ಪೌರತ್ವ ಕಾಯ್ದೆಯ ಪರ ಮತ್ತು ವಿರುದ್ಧ ಬೃಹತ್‌ ಪ್ರತಿಭಟನೆಗಳಿಗೆ ಸರ್ಕಾರ ಅನುಮತಿ ನೀಡಿದೆ. ಅದೂ ಕೇವಲ ನಾಲ್ಕು ಕಿ.ಮೀ ಅಂತರದಲ್ಲಿರುವ ಮೈದಾನಗಳಲ್ಲಿ ಬೃಹತ್‌ ಪ್ರತಿಭಟನೆಗಳು ಜರುಗಿವೆ. ಇಷ್ಟಾದರೂ ಯಾವುದೇ ಹಿಂಸಾತ್ಮಕ ಘಟನೆಗಳು ನಡೆದ ವರದಿಯಾಗಿಲ್ಲ.

CAA ಪರ ಪ್ರತಿಭಟನೆ, ಆಗಸ್ಟ್ ಕ್ರಾಂತಿ ಮೈದಾನ

ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಪರವಾಗಿ ಮಾಜಿ ಮುಖ್ಯಮಂತ್ರಿಯ ದೇವೇಂದ್ರ ಫಡ್ನವಿಸ್‌ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ ಅಲ್ಲಿಂದ ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಅಜಾದ್‌ ಮೈದಾನದಲ್ಲಿ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಜರುಗಿದೆ.

ಪೌರತ್ವ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ಸಂಯೋಜನೆಯು ನೋಟು ರದ್ಧತಿಯ ಪುನರಾವರ್ತನೆಯಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಕೇವಲ ಧಾರ್ಮಿಕ ವಿಷಯವಲ್ಲ, ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ. ನೋಟು ರದ್ಧತಿಯ ಭಾಗ 2 ನಮಗೆ ಬೇಡ” ಎಂದು ಕಾರ್ಯಕರ್ತರು ಆಜಾದ್ ಮೈದಾನದಲ್ಲಿ ಸಾರಿ ಹೇಳಿದ್ದಾರೆ.

“ಎನ್‌ಪಿಆರ್ ಎನ್‌ಆರ್‌ಸಿಗೆ ಮೊದಲ ಹೆಜ್ಜೆಯಾಗಿದೆ. ಸರ್ಕಾರ ನಮ್ಮನ್ನು ಮೂರ್ಖರನ್ನಾಗಿ ಮಾಡುತ್ತಿದೆ. ಈ ಪ್ರತಿಭಟನೆ ನಿಲ್ಲುವುದಿಲ್ಲ, ಕಾಯ್ದೆ ವಾಪಸ್‌ ತೆಗೆದುಕೊಳ್ಳುವವರೆಗೂ ಇದು ಮುಂದುವರಿಯುತ್ತದೆ” ಎಂದು ಮತ್ತೊಬ್ಬ ವಿದ್ಯಾರ್ಥಿ ಹೇಳಿದ್ದಾರೆ. “ಇದು ಸರ್ವಾಧಿಕಾರಿ ಆಡಳಿತ. ಅವರು ಏನು ಬೇಕಾದರೂ ಮಾಡಬಹುದು ಎಂದು ಅದು ಭಾವಿಸಿದಂತಿದೆ. ಸಂವಿಧಾನವನ್ನು ರಕ್ಷಿಸುವುದು ಈ ಸರ್ಕಾರದ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ. ಸ್ವರ ಭಾಸ್ಕರ್‌ ಸೇರಿದಂತೆ ಅನೇಕ ನಟರು ಮತ್ತು ಸೆಲೆಬ್ರಿಟಿಗಳು ಸಹ ಆಜಾದ್ ಮೈದಾನದ ಪ್ರತಿಭಟನಾ ಸ್ಥಳದಲ್ಲಿ ಹಾಜರಿದ್ದಾರೆ.

ಸಿಎಎ ವಿರುದ್ಧದ ಪ್ರತಿಭಟನೆ. ಅಜಾದ್‌ ಮೈದಾನ

ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆಯುತ್ತಿರುವ ಪೌರತ್ವ ಕಾಯ್ದೆ ಪರ ಇರುವ ವೇದಿಕೆಯಲ್ಲಿ, ಭಾರೀ ಭಾರತದ ಧ್ವಜ ಮತ್ತು ಸಾವರ್ಕರ್ ಅವರ ಪೋಸ್ಟರ್ ಇದೆ. ಪೌರತ್ವ ಪರ ಕಾಯ್ದೆ ರ್‍ಯಾಲಿಯಲ್ಲಿ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಉಪಸ್ಥಿತರಿದ್ದರು.

ಇಷ್ಟಾದರೂ ಸಹ ಹಿಂಸಾತ್ಮಕ ಘಟನೆಗಳು ನಡೆಯಲು ಮಹಾರಾಷ್ಟ್ರದ ನೂತನ ಸರ್ಕಾರ ಅವಕಾಶಕೊಟ್ಟಿಲ್ಲ. ಶಾಂತಿಯುತ ಪ್ರತಿಭಟನೆಗೆ ಅದು ಅನುವು ಮಾಡಿಕೊಡುವ ಮೂಲಕ ಮಾದರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...