ಆಟೋರಿಕ್ಷಾ ಚಾಲಕನೊಬ್ಬ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಅವರ ಖಾಸಗಿ ಭಾಗಗಳಿಗೆ ಸರ್ಜಿಕಲ್ ಬ್ಲೇಡ್ ಮತ್ತು ಕಲ್ಲುಗಳು ಸೇರಿದಂತೆ ಇತರೆ ವಸ್ತುಗಳನ್ನು ತುರುಕಿಸಿ ಯುವತಿಗೆ ತೀವ್ರ ದೈಹಿಕ ಹಾನಿ ಮಾಡಿರುವ ಅಘಾತಕಾರಿ ಘಟನೆ ಮುಂಬೈಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಮುಂಬೈ
ಮುಂಬೈನ ವಸಾಯಿಯಲ್ಲಿ ಅಪರಾಧ ನಡೆದಿದ್ದು, ಆರೋಪಿ ಆರಂಭದಲ್ಲಿ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಅವರನ್ನು ತನ್ನ ಆಟೋರಿಕ್ಷಾದಲ್ಲಿ ಮುಂಬೈಗೆ ಕರೆದೊಯ್ದು, ರಾಮ ಮಂದಿರ ಬಳಿ ಪ್ರಜ್ಞಾಹೀನಳಾಗಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಮುಂಬೈ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ದಾರಿಹೋಕರು ಮಹಿಳೆಯನ್ನು ಪತ್ತೆ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಯುವತಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ವೈದ್ಯಕೀಯ ಪರೀಕ್ಷೆ ನಡೆಸಿ ಅವರ ಖಾಸಗಿ ಭಾಗಗಳಿಗೆ ತುರುಕಿಸಿದ ವಸ್ತುಗಳನ್ನು ಯಶಸ್ವಿಯಾಗಿ ಹೊರತೆಗೆದರು ಎಂದು ವರದಿಯಾಗಿದೆ. ಸಂತ್ರಸ್ತೆ ಪ್ರಸ್ತುತ ವೈದ್ಯಕೀಯ ಆರೈಕೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಸ್ಮಿತಾ ಪಾಟೀಲ್ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ದೃಢಪಡಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂಓದಿ: ಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ ಬಂಧನ
ಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ ಬಂಧನ


