Homeಮುಖಪುಟಬಿಜೆಪಿ ಸೆಮಿನಾರ್‌ಗೆ ಹಾಜರಾಗುವಂತೆ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯ

ಬಿಜೆಪಿ ಸೆಮಿನಾರ್‌ಗೆ ಹಾಜರಾಗುವಂತೆ ಕಾಲೇಜು ವಿದ್ಯಾರ್ಥಿಗಳಿಗೆ ಒತ್ತಾಯ

- Advertisement -
- Advertisement -

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪುತ್ರ ಧ್ರುವ್ ಗೋಯಲ್ ಅವರ ಸೆಮಿನಾರ್‌ಗೆ ಕಡ್ಡಾಯವಾಗಿ ಹಾಜರಾಗುವಂತೆ ಮಾಡಲು ಮುಂಬೈನ ಠಾಕೂರ್ ಕಾಲೇಜು ಆಡಳಿತ ವಿದ್ಯಾರ್ಥಿಗಳ ಗುರುತಿನ ಚೀಟಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ವರದಿಯಾಗಿದೆ.

ವರದಿಯ ಪ್ರಕಾರ, ಕಾಲೇಜು ಸಭಾಂಗಣದಲ್ಲಿ ಬಿಜೆಪಿ ಸದಸ್ಯರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹಾಜರಾಗಲು ಬಿಎಂಎಂ ಕೋರ್ಸ್‌ನ ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಕಾರ್ಯಕ್ರದಲ್ಲಿ ಪ್ರಮುಖ ಸ್ಪೀಕರ್ ಧ್ರುವ್ ಗೋಯಲ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಸಾಧನೆಗಳ ಬಗ್ಗೆ ಪ್ರಮುಖವಾಗಿ ಮಾತನಾಡಿದ್ದಾರೆ.

ಸೆಮಿನಾರ್‌ ಕಾರ್ಯಕ್ರಮದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ಕಾಲೇಜು ಆಡಳಿತವನ್ನು ಬಲವಾಗಿ ಟೀಕಿಸಿದ್ದಾರೆ. ಪ್ರತಿಪಕ್ಷಗಳ ನಾಯಕರು ಕೂಡ ಈ ಬಗ್ಗೆ ಬಿಜೆಪಿ ಮತ್ತು ಕಾಲೇಜು ಆಡಳಿತವನ್ನು ಟೀಕಿಸಿದ್ದಾರೆ.

ವಿದ್ಯಾರ್ಥಿಗಳು ರೆಕಾರ್ಡ್ ಮಾಡಿದ ಸಮಾವೇಶದ ವೈರಲ್ ವೀಡಿಯೊವನ್ನು ಶಿವಸೇನೆ ಉದ್ಧವ್‌ ಬಣದ ಪ್ರಿಯಾಂಕಾ ಚತುರ್ವೇದಿ ಎಕ್ಸ್‌ನಲ್ಲಿ ಮರುಹಂಚಿಕೆ ಮಾಡಿಕೊಂಡಿದ್ದು, ಮುಂಬೈನ ಠಾಕೂರ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪುತ್ರ ಧ್ರುವ್ ಗೋಯಲ್ ಸೆಮಿನಾರ್‌ಗೆ ಹಾಜರಾಗುವಂತೆ ಒತ್ತಾಯಿಸಲಾಗಿದೆ, ಅವರು ಮಾತನಾಡುವಾಗ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರುವುದನ್ನು ಖಚಿತಪಡಿಸಿಕೊಳ್ಳಲು ಅವರ ಗುರುತಿನ ಚೀಟಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ, ಇದು ಎಂತಹ ಅವಮಾನ! ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾತಿಯಾಗುವಂತೆ ವಿದ್ಯಾರ್ಥಿಗಳಿಗೆ ಒತ್ತಡ ಹೇರಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಅವರು ಈಗಾಗಲೇ ತಮ್ಮ ಪರೀಕ್ಷೆಗಳ ಬಗ್ಗೆ ಒತ್ತಡದಲ್ಲಿದ್ದರು. ಕಾರ್ಯಕ್ರಮವನ್ನು ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ವೀಡಿಯೊಗಳನ್ನು ಡಿಲಿಟ್‌ ಮಾಡುವಂತೆ ಒತ್ತಡ ಹೇರಲಾಗಿದೆ. ಈ ಬಗ್ಗೆ ಓರ್ವ ವಿದ್ಯಾರ್ಥಿ ಧ್ರುವ ಗೋಯಲ್ ಅವರ ಮುಂದೆ ತಮ್ಮ ಅಭಿಪ್ರಾಯವನ್ನು ಹೇಳಲು ಧೈರ್ಯ ಮಾಡಿದ್ದಾರೆ. ವಿಡಿಯೋದಲ್ಲಿ ವಿದ್ಯಾರ್ಥಿ ಐಡಿ ಕಾರ್ಡ್‌ ವಶಪಡಿಕೊಂಡಿರುವ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು.

ಕಾರ್ಯಕ್ರಮ ಮುಗಿದ ನಂತರ ಪ್ರಾಂಶುಪಾಲರು ವೇದಿಕೆ ಮೇಲೆ ಬಂದು ವಿದ್ಯಾರ್ಥಿ ಕಳವಳವನ್ನು ವ್ಯಕ್ತಪಡಿಸಿದ್ದಕ್ಕೆ ಟೀಕಿಸಿದ್ದಾರೆ. ಆದರೆ ಈ ಬಗ್ಗೆ ಕಾಲೇಜು ಈವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

 

ಇದನ್ನು ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...