Homeಮುಖಪುಟಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

- Advertisement -
- Advertisement -

ಹೊಸದಿಲ್ಲಿ: ಡಿಸೆಂಬರ್ 19ರಂದು ಗುರ್ಗಾಂವ್ ಕಾಮಿಡಿ ಫೆಸ್ಟಿವಲ್‌ನಲ್ಲಿ ನಿಗದಿಯಾಗಿದ್ದ ಹಾಸ್ಯನಟ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಲಾಗಿದೆ.

ಫಾರೂಖಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಹಲವಾರು ಕರೆಗಳು ಬಂದ ಬಳಿಕ ಕ್ರಮ ಜರುಗಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫಾರೂಖಿಯವರು ವೇದಿಕೆಗೆ ಬರದಂತೆ ತಡೆಯಲು ಹರಿಯಾಣದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ಪೊಲೀಸರನ್ನು ಸಂಪರ್ಕಿಸಿ ಒತ್ತಾಯಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಎಸಿಪಿ (ಸೋಹ್ನಾ) ಅವರಿಗೆ ನೀಡಿದ ದೂರಿನಲ್ಲಿ ಬಿಜೆಪಿಯ ಮುಖಂಡ ಅರುಣ್ ಯಾದವ್, ಫಾರೂಖಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದ ಸಂಘಟಕರಾದ ಎಂಟರ್‌ಟೈನ್‌ಮೆಂಟ್ ಫ್ಯಾಕ್ಟರಿ (TEF), ಫಾರೂಖಿ ಹೆಸರನ್ನು ಕೈಬಿಡಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದೆ.

ಪ್ರದರ್ಶನಕ್ಕೆ ಅಡ್ಡಿಯಾಗಲಿದೆ ಎಂದು ಸಂಘಟಕರಿಗೆ ಕರೆಗಳು ಬಂದಿದ್ದು, ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಪತ್ರಿಕೆಗೆ ತಿಳಿಸಿವೆ. “ಮುನಾವರ್ ಅವರನ್ನು ಡ್ರಾಪ್ ಮಾಡುವಂತೆ ನಿನ್ನೆಯಿಂದ (ಭಾನುವಾರ) ನಮಗೆ ಹಲವು ಕರೆಗಳು ಬಂದಿದ್ದವು. ನಮ್ಮ ಕೆಲಸ ಜನರನ್ನು ರಂಜಿಸುವುದು ಮತ್ತು ನಾವು ಯಾವುದೇ ವಿವಾದವನ್ನು ಬಯಸುವುದಿಲ್ಲ. ಆದ್ದರಿಂದ, ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕ ಮುಬಿನ್ ಟಿಸೇಕರ್ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಫಾರೂಖಿ ಅವರ ಕಾರ್ಯಕ್ರಮವು ಸೆಕ್ಟರ್ 68ರ ಗುರುಗ್ರಾಮ್‌ನ ಏರಿಯಾ ಮಾಲ್‌ನಲ್ಲಿ ನಡೆಯಬೇಕಿತ್ತು. ಕಳೆದ ವಾರ, ಫಾರೂಖಿಯವರನ್ನು “ವಿವಾದಾತ್ಮಕ ವ್ಯಕ್ತಿ” ಎಂದು ಕರೆದು “ಕಾನೂನು ಮತ್ತು ಸುವ್ಯವಸ್ಥೆ” ನೆಪದಲ್ಲಿ ಪೊಲೀಸರು ಸಂಘಟಕರಿಗೆ ಪತ್ರ ಬರೆದ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು. ನಂತರ, ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫಾರೂಖಿ, ‘ನಫ್ರತ್ ಜೀತ್ ಗೈ, ಆರ್ಟಿಸ್ಟ್ ಹಾರ್ ಗಯಾ (ದ್ವೇಷ ಗೆದ್ದಿದೆ, ಕಲಾವಿದ ಸೋತಿದ್ದಾನೆ). ನಾನು ಮುಗಿಸಿದ್ದೇನೆ! ವಿದಾಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಶಾಸಕಿ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ ಏಕಲವ್ಯ ಸಿಂಗ್ ಗೌಡ್ ನೀಡಿದ ದೂರಿನ ಮೇರೆಗೆ ಜನವರಿ 1ರಂದು ಇಂದೋರ್‌ನ ಕೆಫೆಯಲ್ಲಿ ಫಾರೂಖಿಯವರನ್ನು ಬಂಧಿಸಲಾಗಿತ್ತು. ದೂರುದಾರರು ‘ಹಿಂದೂ ರಕ್ಷಕ ಸಂಘಟನೆ’ ಎಂಬುದರ ಮುಖ್ಯಸ್ಥರಾಗಿದ್ದರು.

ಫಾರೂಖಿ ಅವರು ತಮ್ಮ ಕಾರ್ಯಕ್ರಮದ ಪೂರ್ವಾಭ್ಯಾಸದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ, ಹಿಂದೂ ದೇವರುಗಳು ವಿರುದ್ಧ ಹಾಸ್ಯ ಮಾಡಿದ್ದಾರೆ ಎಂದು ಗೌಡ್ ಆರೋಪಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಫಾರೂಖಿ ವಿರುದ್ಧ ಐಪಿಸಿ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

“ಇದು ಫಾರೂಖಿ ಅವರ ವಾಕ್ ಸ್ವಾತಂತ್ರ್ಯದ ಮೇಲೆ ಮಾತ್ರವಲ್ಲ, ಎಲ್ಲ ಹಾಸ್ಯ ಕಲಾವಿದರ ಸ್ವಾತಂತ್ರ್ಯದ ಮೇಲೆ ನಡೆದ ನೇರ ದಾಳಿಯಾಗಿದೆ” ಎಂದು ಸುಪ್ರೀಂ ಕೋರ್ಟ್ ವಕೀಲ ವೃಂದಾ ಗ್ರೋವರ್ ಆರೋಪಿಸಿದ್ದಾರೆ.

ಫಾರೂಖಿ ಜಾಮೀನು ಅರ್ಜಿಯನ್ನು ಇಂದೋರ್ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ತಿರಸ್ಕರಿಸಿತು. ಅಂತಿಮವಾಗಿ ಫೆಬ್ರವರಿ 7ರಂದು, ಅಂದರೆ ಬಂಧಿಸಲ್ಪಟ್ಟ 36 ದಿನಗಳ ನಂತರ ಮಧ್ಯಂತರ ಜಾಮೀನು ನೀಡಲಾಯಿತು.

ಮುಂಬೈನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ನಂತರ, ಫಾರೂಖಿ NDTV ಜೊತೆಗೆ ಮಾತನಾಡುತ್ತಾ, “ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ, ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಯಿತು. ನನ್ನ ಮೊಬೈಲ್‌ ನಂಬರ್‌‌ ಸೋರಿಕೆಯಾದಾಗ, ಜನರು ಕರೆ ಮಾಡಿ ನನ್ನನ್ನು ನಿಂದಿಸುತ್ತಾರೆ. ನನ್ನ ವಿಷಯದಲ್ಲಿ, ಅವರು ನನ್ನ ಧರ್ಮವನ್ನು ಬಳಸುತ್ತಾರೆ” ಎಂದು ಆರೋಪಿಸಿದ್ದರು.


ತಪ್ಪದೇ ಓದಿರಿ: ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...