HomeUncategorizedSIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ‘SIR ವಿರೋಧಿ ಕರ್ನಾಟಕ’, ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ‘SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸ’ಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಲಕ್ಷಾಂತರ ಬಡವರು ಹಾಗೂ ಮೂಲವಾಸಿಗಳು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಈ ಜಾಗೃತಿ ಹಾಗೂ ಪ್ರತಿರೋಧ ಜಾಥಾ ಆರಂಭಗೊಂಡಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸ’ಕ್ಕೆ ಚಾಲನೆ

ಪ್ರವಾಸದ ಮೊದಲ ದಿನವೇ ಮುಖಂಡರು ಮುಂಡಗೋಡು ತಾಲೂಕಿನ ಮೈನಳ್ಳಿಗೆ ಭೇಟಿ ನೀಡಿ, ಆದಿವಾಸಿ ಬುಡಕಟ್ಟು ಸಮುದಾಯಗಳಾದ ಸಿದ್ದಿ ಮತ್ತು ಗೌಳಿ ಜನರನ್ನು ಪ್ರತ್ಯಕ್ಷವಾಗಿ ಭೇಟಿಯಾದರು. ಮೈನಳ್ಳಿಯ ಸಿದ್ದಿ ಮತ್ತು ಗೌಳಿ ಸಮುದಾಯದ ಬಾಂಧವರು ತಮ್ಮದೇ ವಿಶಿಷ್ಟ ಶೈಲಿಯ ಜನಪದ ನೃತ್ಯ ಹಾಗೂ ಹಾಡುಗಳ ಮೂಲಕ ಮುಖಂಡರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರೊಡನೆ ಸುದೀರ್ಘ ಸಂವಾದ ನಡೆಸಿದ ಪ್ರಮುಖರು, SIR ಪ್ರಕ್ರಿಯೆಯಿಂದ ಸ್ಥಳೀಯರು ಎದುರಿಸುತ್ತಿರುವ ತಾಂತ್ರಿಕ ತೊಡಕುಗಳು, ದಾಖಲಾತಿಗಳ ಕೊರತೆ ಹಾಗೂ ಮತದಾರರ ಪಟ್ಟಿಯಿಂದ ಹೆಸರು ಗಾಯಬ್ ಆಗಿರುವ ಕುರಿತು ಪ್ರತ್ಯಕ್ಷ ಮಾಹಿತಿ ಮತ್ತು ಅಹವಾಲುಗಳನ್ನು ಸ್ವೀಕರಿಸಿದರು.

ಮೈನಳ್ಳಿಯ ಸಿದ್ದಿ ಮತ್ತು ಗೌಳಿ ಸಮುದಾಯದಿಂದ ಜನಪದ ನೃತ್ಯ

ಕರ್ನಾಟಕದಲ್ಲಿ ಜಾರಿಯಾಗಿರುವ SIR ಪ್ರಕ್ರಿಯೆಯು ಬೃಹತ್ ಅವಾಂತರಗಳನ್ನು ಸೃಷ್ಟಿಸಿದ್ದು, ರಾಜ್ಯದಲ್ಲಿ ಸುಮಾರು 1.8 ಕೋಟಿ ಜನರು ASDDO ಪಟ್ಟಿಯಲ್ಲಿದ್ದರೆ, ಇನ್ನು ಸುಮಾರು 43 ಲಕ್ಷಕ್ಕೂ ಹೆಚ್ಚು ಜನರಿಗೆ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಈ ಎರಡು ಪಟ್ಟಿಗಳಿಂದಾಗಿ ಲಕ್ಷಾಂತರ ಬಡ, ದಲಿತ ಮತ್ತು ಶೋಷಿತ ನಾಗರಿಕರು ತಮ್ಮ ಮೂಲಭೂತ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ದಾಖಲೆಗಳ ಹುಡುಕಾಟದಲ್ಲಿ ಪರದಾಡುವಂತಾಗಿದೆ. ಈ ದೋಷಪೂರಿತ ಪ್ರಕ್ರಿಯೆಯ ವಿರುದ್ಧ ಜನಪರ ಸಂಘಟನೆಗಳ ಜೊತೆಗೆ ಖ್ಯಾತ ನಟ, ಪ್ರಗತಿಪರ ಚಿಂತಕ ಪ್ರಕಾಶ್ ರಾಜ್, ನಟ ಕಿಶೋರ್ ಸೇರಿದಂತೆ ನಾಡಿನ ಸಾಹಿತಿ ಹಾಗೂ ಕಲಾವಿದರು ಹೋರಾಟದ ಭಾಗವಾಗಿದ್ದಾರೆ.

ಸಿಪಿಐ(ಎಂ) ನಿಂದ ಬೆಂಬಲ:

ಸಿಪಿಐ(ಎಂ) (CPIM) ರಾಜ್ಯ ಸಮಿತಿಯು ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 22 ರಿಂದ 30 ರವರೆಗೆ ರಾಜ್ಯದ ಸುಮಾರು 14 ಜಿಲ್ಲಾ ಕೇಂದ್ರಗಳು ಹಾಗೂ ವಿವಿಧ ತಾಲೂಕುಗಳಲ್ಲಿ ನಡೆಯಲಿರುವ ಪ್ರಕಾಶ್ ರಾಜ್ ನೇತೃತ್ವದ ಈ ಜಾಗೃತಿ ಪ್ರವಾಸಕ್ಕೆ ಅಗತ್ಯ ನೆರವು ಮತ್ತು ಸಹಕಾರ ನೀಡುವಂತೆ ತಮ್ಮ ಎಲ್ಲಾ ಜಿಲ್ಲಾ ಮತ್ತು ತಾಲೂಕು ಘಟಕಗಳಿಗೆ ನಿರ್ದೇಶನ ನೀಡಿದೆ. ವಿಶೇಷವಾಗಿ ಕಲಬುರಗಿ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಈ ತಂಡದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ. ಸಂವಿಧಾನದ ಅಡಿಪಾಯವಾದ ‘ಒಬ್ಬ ವ್ಯಕ್ತಿ – ಒಂದು ಮತ’ ಎಂಬ ಹಕ್ಕನ್ನು ರಕ್ಷಿಸಲು ಈ ‘ಪರಿಶೋಧ ಮತ್ತು ಪ್ರತಿರೋಧ ಪ್ರವಾಸ’ ರಾಜ್ಯಾದ್ಯಂತ ಕಾವು ಪಡೆದುಕೊಳ್ಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...

ಹಮೀದ್ ಅನ್ಸಾರಿ ಅವರಿಗೆ ನೀಡಿರುವ ಪದ್ಮಶ್ರೀ ಹಿಂಪಡೆಯುವಂತೆ ಹಿಂದೂ ಸೇನಾ ಆಗ್ರಹ

ಮಾಜಿ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಬಲಪಂಥೀಯ ರಾಷ್ಟ್ರೀಯತಾವಾದಿ ಸಂಘಟನೆ ಹಿಂದೂ ಸೇನಾ ಆಗ್ರಹಿಸಿದೆ. ಸೋಮವಾರ (ಸೆ. 21) ಕೇಂದ್ರ...