Homeಕರ್ನಾಟಕಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ...

ಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ ಉದ್ಯಮಿ ವಶಕ್ಕೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಜಿ. ಅಮೃತಗೌಡ ಅವರಿಗೆ ದೂರವಾಣಿ ಮೂಲಕ ಧಮ್ಕಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜೀವ್‌ ಗೌಡ ಅವರನ್ನು ಪೊಲೀಸರು ಸೋಮವಾರ (ಜ.26) ಕರ್ನಾಟಕ-ಕೇರಳ ಗಡಿ ಸಮೀಪ ಕೇರಳ ರಾಜ್ಯದ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.

ರಾಜೀವ್‌ ಗೌಡ ಅವರು ಕಳೆದ 12-13 ದಿನಗಳಿಂದ ತಲೆಮರೆಸಿಕೊಂಡಿದ್ದರು. ಎಫ್‌ಐಆರ್‌ ರದ್ದತಿ ಮತ್ತು ನಿರೀಕ್ಷಣಾ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 22ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ಜನವರಿ 24ರಂದು ಅವರನ್ನು ಕೆಪಿಸಿಸಿ ಶಿಸ್ತುಸಮಿತಿ ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಇದಕ್ಕೂ ಮುನ್ನ ರಾಜೀವ್‌ಗೌಡ ಕೆಪಿಸಿಸಿ ಸಂಯೋಜಕರಾಗಿದ್ದರು.

ರಾಜೀವ್ ಗೌಡ ಅವರನ್ನು ಕೇರಳ ಗಡಿ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕುಶಾಲ್ ಚೌಕ್ಸೆ ಸೋಮವಾರ (ಜ.26) ದೃಢಪಡಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮಂಗಳವಾರ (ಜ.27) ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

ಕೇರಳಕ್ಕೆ ಪ್ರಯಾಣಿಸುವ ಮೊದಲು, ರಾಜೀವ್ ಗೌಡ ಮೂರು ದಿನಗಳ ಕಾಲ ಮಂಗಳೂರಿನ ರೆಸಾರ್ಟ್‌ನಲ್ಲಿ ತಂಗಿದ್ದರು. ಅವರು ಸಂಬಂಧಿಕರ ಕಾರಿನಲ್ಲಿ ಮಂಗಳೂರಿಗೆ ತೆರಳಿದ್ದರು. ಈ ಸಂಬಂಧ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ತಡರಾತ್ರಿ ಈ ಇಬ್ಬರನ್ನು ಕರೆತಂದು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಬಳಿಯ ಅತಿಥಿ ಗೃಹದಲ್ಲಿ ಇರಿಸಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಎಎಸ್‌ಪಿ ಜಗನ್ನಾಥ ರೈ, ಡಿವೈಎಸ್‌ಪಿ ರವಿಕುಮಾರ್, ತನಿಖಾಧಿಕಾರಿ ಇನ್‌ಸ್ಪೆಕ್ಟರ್ ಆನಂದ್ ವಿಚಾರಣೆ ನಡೆಸುತ್ತಿದ್ದಾರೆ. ಸೋಕೊ ತಂಡ ಕೂಡ ವಿಚಾರಣೆಯಲ್ಲಿ ಭಾಗಿಯಾಗಿದೆ ಎಂದು ವರದಿಯಾಗಿದೆ.

ವರದಿಯೊಂದರ ಪ್ರಕಾರ, ಪೊಲೀಸರ ಕಣ್ತಪ್ಪಿಸಲು ಯತ್ನಿಸಿದ್ದ ರಾಜೀವ್‌ ಗೌಡ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಬಳಿ ಕಾರು ನಿಲ್ಲಿಸಿ, ಉದ್ಯಮಿಯ ಕಾರಿನಲ್ಲಿ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ.

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿದ್ದರು.

ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಅಳವಂಡಿ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...