Homeಕರ್ನಾಟಕಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? - ಸಚಿವ ಭೈರೆಗೌಡ ...

ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? – ಸಚಿವ ಭೈರೆಗೌಡ ಪ್ರಶ್ನೆ

- Advertisement -
- Advertisement -

ಶಾಸಕ ಮುನಿರತ್ನ ಅವರ ದುಷ್ಕೃತ್ಯವನ್ನು ಖಂಡಿಸದೆ ಆರ್. ಅಶೋಕ ಮತ್ತು ಎಚ್.ಡಿ. ಕುಮಾರಸ್ವಾಮಿ ಸುಮ್ಮನೆ ಇದ್ದಾರೆ. ಇವರ ಕುಮ್ಮಕ್ಕು ಇಲ್ಲದೆ ಇಷ್ಟೆಲ್ಲ ನಡೆಯುತ್ತದೆಯೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಮಾಡಿದ್ದು ತಪ್ಪು ಎಂದು ಇವರು ಎಲ್ಲಿಯೂ ಮಾತನಾಡಿಲ್ಲ. ಮುನಿರತ್ನ ಭ್ರಷ್ಟಾಚಾರಿ, ಮನೆಯಲ್ಲಿಯೇ ಬಿಬಿಎಂಪಿ ಬಿಲ್ ಬರೆಯುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಆದರೆ ಈಗ ಹನಿಟ್ರ್ಯಾಪ್ ನಡೆಸುತ್ತಾರೆ ಎನ್ನುವ ಆಘಾತಕಾರಿ ಅಂಶ ತಿಳಿದು ಬಂದಿದೆ ಎಂದು ಹೇಳಿದರು.

ಅಧಿಕಾರಿಗಳು, ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಇದಕ್ಕೆ ಏಡ್ಸ್ ಇರುವವರನ್ನೇ ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತೆಯೇ ದೂರು ನೀಡಿದ್ದಾರೆ. ಇಷ್ಟೆಲ್ಲ ಕಂಡು ಬಂದರೂ ಬಿಜೆಪಿಯವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂಓದಿ: ಫ್ಯಾಕ್ಟ್‌ಚೆಕ್‌ ಘಟಕ ಸ್ಥಾಪಿಸುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಬಾಂಬೆ ಹೈಕೋರ್ಟ್ ತಡೆ

ಕಾಂಗ್ರೆಸ್‌ನಲ್ಲಿ ಇದ್ದಾಗ ತಪ್ಪು ಮಾಡಿದ್ದರೆ ಕೇಳಬೇಕಾಗಿತ್ತು. ಬಿಜೆಪಿಯಲ್ಲಿ ಇದ್ದಾಗ ಕೇಳಬಾರದು ಎನ್ನುವ ಮನಸ್ಥಿತಿ ಆರ್.ಅಶೋಕ ಅವರದ್ದು. ಅಶೋಕ್ ಮತ್ತು ಕುಮಾರಸ್ವಾಮಿಗೆ ಮನುಷ್ಯತ್ವ ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೇ 100ರಷ್ಟು ಸಾಚ ಯಾರೂ ಇಲ್ಲ. ಎಲ್ಲರೂ ತಪ್ಪು ಮಾಡುತ್ತಾರೆ. ಆದರೆ ಮುನಿರತ್ನ ಮಾಡಿರುವುದು ಸರಿಯೇ ಎಂದು ಯೋಚಿಸಲಿ. ಇಷ್ಟೆಲ್ಲಾ ಹೊರ ಬಂದಿದ್ದರೂ ಬೆಂಬಲವಾಗಿ ನಿಂತವರೂ ಸಹ ಅಪರಾಧದ ಭಾಗವಾಗಿದ್ದಾರೆ ಎಂದು ಕಿಡಿಕಾರಿದರು.ಮುನಿರತ್ನ ಒಕ್ಕಲಿಗ ಸಮಾಜದ ಅವಹೇಳನ ಮಾಡಿದ್ದಾರೆ.

ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇವೆ. ಒಕ್ಕಲಿಗ ಸಮಾಜದ ಮೇಲೆ ದಾಳಿ ನಡೆದಾಗ ಸಮುದಾಯದ ಎಚ್ಚೆತ್ತುಕೊಂಡು ಒಂದು ಧ್ವನಿಯಲ್ಲಿ ಖಂಡಿಸಬೇಕು. ಸಮಾಜವು ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಗೌರವ ಕೊಡುತ್ತದೆ. ಅವರ ನೇತೃತ್ವದಲ್ಲಿ ಖಂಡನಾ ನಿರ್ಣಯ ಸಭೆ ಆಗಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಸ್ವಾಮೀಜಿ ಅವರ ತೀರ್ಮಾನವೇ ಅಂತಿಮ ಎಂದು ಸಚಿವರು ಹೇಳಿದ್ದಾರೆ.

ವಿಡಿಯೊ ನೋಡಿ: ನಂಗ ಜೇನು ಕುರುಬ ಮಕ್ಕಾಳು.. ದೂರಿ ದೂರಿ, ನಂಗ ಕಾಡಿನ ಅರಸಾರು.. ದೂರಿ ದೂರಿ – ಜೇನು ಕುರುಬರ ಹಾಡು ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...