Homeಮುಖಪುಟ‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

‘ಕೊಲೆ ಪ್ರಕರಣ’- ವರದಿ ನಿಲ್ಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ!

- Advertisement -
- Advertisement -

ಕೊರೊನಾ ಸಮಯದಲ್ಲಿ ರಾಜಕೀಯ ರ್‍ಯಾಲಿಗಳನ್ನು ನಿಲ್ಲಿಸದ ಕಾರಣ ಚುನಾವಣಾ ಆಯೋಗದ ಮೇಲೆ “ಕೊಲೆ ಆರೋಪದ ಪ್ರಕರಣದ ದಾಖಲಿಸಬೇಕು” ಎಂದು ನ್ಯಾಯಾಲಯವು ತೀಕ್ಷ್ಣವಾದ ಹೇಳಿಕೆಗಳನ್ನು ನೀಡಿತ್ತು. ನ್ಯಾಯಾಲಯವು ನೀಡಿದ್ದ ಈ ಮೌಖಿಕ ಹೇಳಿಕಗಳ ಬಗ್ಗೆ ಮಾಧ್ಯಮಗಳು ವರದಿ ಮಾಡುವುದನ್ನು ತಡೆಯುವಂತೆ ಚುನಾವಣಾ ಆಯೋಗವು ಮದ್ರಾಸ್ ಹೈಕೋರ್ಟ್‌ಗೆ ವಿನಂತಿಸಿದೆ.

ಮದ್ರಾಸ್ ಹೈಕೋರ್ಟ್‌ನ ನೀಡಿದ್ದ ಮೌಖಿಕ ಹೇಳಿಕೆಗಳನ್ನು, ಮಾಧ್ಯಮಗಳು “ಪ್ರಸ್ತುತ ದೇಶದಲ್ಲಿರುವ ಪರಿಸ್ಥಿತಿಗೆ ಚುನಾವಣ ಆಯೋಗವೆ ಏಕೈಕ ಕಾರಣ. ಚುನಾವಣಾ ಆಯೋಗವು ಕೊಲೆ ಆರೋಪಗಳನ್ನು ಎದುರಿಸಬೇಕಾಗುತ್ತದೆ” ಎಂದು ವರದಿ ಮಾಡುತ್ತಿದೆ ಎಂದು ಚುನಾವಣಾ ಆಯೋಗ ತನ್ನ ಅರ್ಜಿಯಲ್ಲಿ ಹೇಳಿದೆ.

ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

“ಈ ವರದಿಗಳು ಚುನಾವಣೆಗಳನ್ನು ನಡೆಸುವ ಸಾಂವಿಧಾನಿಕ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಭಾರತದ ಚುನಾವಣಾ ಆಯೋಗದ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯ ಚಿತ್ರಣವನ್ನು ಕಳಂಕಿತಗೊಳಿಸಿವೆ” ಎಂದು ಆಯೋಗವು ತಿಳಿಸಿದೆ.

ಮೌಖಿಕ ಹೇಳಿಕೆಗಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಕೊಲೆ ಆರೋಪ ಹೊರಿಸಿ ಉಪ ಚುನಾವಣಾ ಆಯುಕ್ತರ ವಿರುದ್ಧ ಪೊಲೀಸ್ ದೂರು ಕೂಡಾ ದಾಖಲಿಸಲಾಗಿದೆ ಎಂದು ಆಯೋಗವು ಅರ್ಜಿಯಲ್ಲಿ ಹೇಳಿದೆ.

ಸೋಮವಾರದಂದು, ವಿಚಾರಣೆಯ ಸಮಯದಲ್ಲಿ, ಮದ್ರಾಸ್ ಹೈಕೋರ್ಟ್, “ಚುನಾವಣಾ ಆಯೋಗವೆ ಕೊರೊನಾ ಎರಡನೇ ಅಲೆಗೆ ಏಕೈಕ ಕಾರಣ. ನಿಮ್ಮ ಅಧಿಕಾರಿಗಳ ಮೇಲೆ ಕೊಲೆ ಆರೋಪದ ಮೇಲೆ ಪ್ರಕರಣ ದಾಖಲಿಸಬೇಕು… ಚುನಾವಣಾ ರ್‍ಯಾಲಿಗಳು ನಡೆಯುತ್ತಿದ್ದಾಗ ನೀವು ಇನ್ನೊಂದು ಗ್ರಹದಲ್ಲಿದ್ದೀರಾ?” ಎಂದು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...