Homeಮುಖಪುಟಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

- Advertisement -
- Advertisement -

ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ. ಇವರ ವಿರುದ್ಧ ಸಹ ಕುಸ್ತಿಪಟು ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪವಿದ್ದು, ಪರಾರಿಯಾಗಿದ್ದರು.

ಬಂಧಿತ ಸುಶೀಲ್ ಕುಮಾರ್ ಜೊತೆಗೆ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ವಾಯುವ್ಯ ದೆಹಲಿಯ ಮುಂಡ್ಕಾದ ಇತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಕ್ರೀಡಾಂಗಣವೊಂದರಲ್ಲಿ 23 ವರ್ಷದ ಕುಸ್ತಿಪಟು ಸಾವನ್ನಪ್ಪಿದ್ದರು. ಇವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಲ್ಲಿ ಸುಶೀಲ್ ಕುಮಾರ್ ಅವರನ್ನು ಪೊಲೀಸರು ಹುಡುಕುತ್ತಿದ್ದರು.

ಇದನ್ನೂ ಓದಿ: ಮೇ 24 ರೊಳಗೆ ಭಾರತಕ್ಕೆ ಅಪ್ಪಳಿಸಲಿದೆ ‘ಯಾಸ್‌ ಚಂಡಮಾರುತ’ – ಹವಾಮಾನ ಇಲಾಖೆ ಎಚ್ಚರಿಕೆ

” ಎಸಿಪಿ ಅತ್ತಾರ್ ಸಿಂಗ್ ಮೇಲ್ವಿಚಾರಣೆಯಲ್ಲಿ ಇನ್ಸ್‌ಪೆಕ್ಟರ್ ಶಿವ್‌ಕುಮಾರ್, ಇನ್ಸ್‌ಪೆಕ್ಟರ್ ಕರಮ್‌ಬೀರ್ ನೇತೃತ್ವದ ವಿಶೇಷ ಎಸ್‌ಆರ್ ತಂಡ,  ದೆಹಲಿಯ ಮುಂಡ್ಕಾ ಪ್ರದೇಶದ ಸುಶೀಲ್ ಕುಮಾರ್ ಮತ್ತು ಅಜಯ್ ಅವರನ್ನು ಛತ್ರಾಸಲ್ ಕ್ರೀಡಾಂಗಣದಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮುಂಡ್ಕಾ ಪ್ರದೇಶದಿಂದ ಬಂಧಿಸಲಾಗಿದೆ” ಎಂದು ವಿಶೇಷ ಘಟಕದ ಸಿಪಿ ನೀರಜ್ ಠಾಕೂರ್ ಮಾಹಿತಿ ನೀಡಿದ್ದಾರೆ.

’ಸುಶೀಲ್ ಕುಮಾರ್ ಮತ್ತು ಅವರ ಸಹಚರರು ಮೇ 4 ರಂದು ರಾಷ್ಟ್ರ ರಾಜಧಾನಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಹ ಕುಸ್ತಿಪಟು 23 ವರ್ಷದ ಸಾಗರ್ ರಾಣಾ ಮತ್ತು ಆತನ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳಯಗಳು ಆಸ್ಪತ್ರೆಗೆ ದಾಖಲಾಗಿದ್ದರು ಇದರಲ್ಲಿ ಸಾಗರ್‌ ರಾಣಾ ತೀವ್ರ ಗಾಯಗಳಿಂದ, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆ ನಡೆಸಿದ ನಂತರ ಸುಶೀಲ್ ಕುಮಾರ್ ಮತ್ತು ಅಜಯ್ ಸ್ಥಳದಿಂದ ಪರಾರಿಯಾಗಿದ್ದಾರೆ. ಅಂದಿನಿಂದ  ಇಬ್ಬರು ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದರು.

ಇದನ್ನೂ ಓದಿ: ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ  ಒಂದು ಲಕ್ಷ ರೂಪಾಯಿ ಮತ್ತು ಅಜಯ್ ಕುಮಾರ್ ಬಗೆಗಿನ ಮಾಹಿತಿಗೆ 50,000 ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದರು.

ಮೇ 18 ರಂದು ಸುಶೀಲ್ ಕುಮಾರ್ ಬಂಧನದಿಂದ ರಕ್ಷಣೆ ಕೋರಿ ರೋಹಿಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.  ಆದರೆ, ನ್ಯಾಯಾಲಯವು ನಿರೀಕ್ಷಿತ ಜಾಮೀನು ಅರ್ಜಿಯನ್ನು ವಜಾಗೊಳಿಸಿ, ಆರೋಪಿಯ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಎಂದು ಹೇಳಿದೆ.

ಸುಶೀಲ್ ಕುಮಾರ್‌ ಮತ್ತು ಇತರ ಆರು ಜನರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

ಕುಸ್ತಿಪಟು ಸುಶೀಲ್ ಕುಮಾರ್ 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಮತ್ತು 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.


ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...