Homeಮುಖಪುಟಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯ ಕೊಲೆ: ಡೈರಿ ಬಿಟ್ಟು ಹೋದ ಶಂಕಿತ ಆರೋಪಿ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯ ಕೊಲೆ: ಡೈರಿ ಬಿಟ್ಟು ಹೋದ ಶಂಕಿತ ಆರೋಪಿ

- Advertisement -
- Advertisement -

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ಕುಮಾರ್ ಲೋಹಿಯಾ ಅವರನ್ನು ಸ್ನೇಹಿತರ ಮನೆಯಲ್ಲಿ ಕೊಲೆಗೈಯಲಾಗಿದೆ. ಅವರ ಕುತ್ತಿಗೆ ಸೀಳಿ, ದೇಹಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದ ಕಾರಾಗೃಹಗಳ ಉಸ್ತುವಾರಿ ಅಧಿಕಾರಿಯಾಗಿದ್ದ ಅವರು ತಮ್ಮ ಮನೆಯನ್ನು ರಿಪೇರಿ ಮಾಡಿಸುತ್ತಿದ್ದ ಕಾರಣ ಜಮ್ಮು ಹೊರವಲಯದ ಸ್ನೇಹಿತರ ಮನೆಯಲ್ಲಿ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರ ಸಹಾಯಕ ಕೊಲೆಗೈದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಜಮ್ಮು ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರವರೆ ಕೊಲೆಯ ಹೊಣೆ ಹೊರಬೇಕೆಂದು ಪೀಪಲ್ಸ್ ಆಂಟಿ ಫ್ಯಾಸಿಸ್ಟ್ ಫ್ರಂಟ್ ಎಂಬ ತೀವ್ರವಾದಿ ಸಂಘಟನೆ ಹೇಳಿಕೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಾಥಮಿಕ ವಿಚಾರಣೆ ಮತ್ತು ಸಿಸಿಟಿವಿ ದಾಖಲೆಗಳ ಪ್ರಕಾರ 57 ವರ್ಷದ ಪೊಲೀಸ್ ಅಧಿಕಾರಿಯ ಸಹಾಯಕನಾಗಿದ್ದ 23 ವರ್ಷದ ಯಾಸಿರ್ ಅಹಮದ್ ಕಣ್ಮರೆಯಾಗಿದ್ದು, ಆತನೆ ಕೊಲೆಗೈದಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಕೊಲೆ ಹಿಂದೆ ಭಯೋತ್ಪಾದನಾ ನಂಟನ್ನು ತಳ್ಳಿ ಹಾಕಿದ್ದಾರೆ.

ಘಟನಾ ಸ್ಥಳದಲ್ಲಿ ಹೊಡೆದ ಕೆಚಪ್ ಬಾಟೆಲ್ ಪತ್ತೆಯಾಗಿದ್ದು, ಅದರಿಂದ ಕತ್ತು ಸೀಳಿರಬೇಕೆಂದು ಪೊಲೀಸರು ಊಹಿಸಿದ್ದಾರೆ. ಅಲ್ಲದೆ ಯಾಸಿರ್ ಅಹಮದ್‌ನ ಡೈರಿಯೊಂದು ದೊರಕಿದ್ದು ಆತ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಮುಖೇಶ್ ಸಿಂಗ್ ಎಂಬುವವರು ಮಾತನಾಡಿ, “ಲೋಹಿಯಾರವರ ಕಾಲಿಗೆ ಎಣ್ಣೆ ಹಚ್ಚುವಾಗ ಅವರ ಮೇಲೆ ದಾಳಿ ನಡೆದಿದೆ. ಕೆಚಪ್ ಬಾಟೆಲ್‌ನಿಂದ ಕತ್ತು ಸೀಳಿ ನಂತರ ಬೆಂಕಿ ಹಚ್ಚಲಾಗಿದೆ. ಲೋಹಿಯಾ ಇದ್ದ ಕೊಠಡಿಯು ಒಳಗಿನಿಂದ ಚಿಲಕ ಹಾಕಲಾಗಿತ್ತು. ಬೆಂಕಿ ಕಾಣಿಸಿಕೊಂಡ ನಂತರ ರಕ್ಷಣಾ ಸಿಬ್ಬಂದಿ ಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಯಾಸಿರ್ ಅಹಮದ್ ಆರು ತಿಂಗಳಿನಿಂದ ಲೋಹಿಯಾರವರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ. ಆತನು ಓಡಿ ಹೋಗಿರುವುದು ಸಿಸಿಟಿವಿ ಯಲ್ಲಿ ದಾಖಲಾಗಿದೆ. ಆತನ ಬಂಧನಕ್ಕಾಗಿ ಫೋಟೊವನ್ನು ಎಲ್ಲಾ ಕಡೆ ಕಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಶಪಡಿಸಿಕೊಂಡಿರುವ ಡೈರಿಯಲ್ಲಿ “ಆತ್ಮೀಯ ಸಾವೆ ನನ್ನ ಜೀವನದಲ್ಲಿಯೂ ಬಾ, ದಯವಿಟ್ಟು ಕ್ಷಮಿಸಿ, ಇದು ನನ್ನ ಕೆಟ್ಟ ದಿನ, ತಿಂಗಳು, ವರ್ಷ. ನನ್ನ ಜೀವನವನ್ನು ನಾನು ದ್ವೇಷಿಸುತ್ತೇನೆ. ನನ್ನ ಜೀವನ 1%, ಪ್ರೀತಿ 0%, ಒತ್ತಡ 90%, ದುಃಖ 99%, ನಾಟಕೀಯ ನಗು 100%” ಎಂದೆಲ್ಲ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...