Homeಮುಖಪುಟಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

- Advertisement -
- Advertisement -

ಬಜರಂಗದಳ ಮುಖಂಡನಿಂದ ಹತ್ಯೆಗೊಳಗಾದ ದಲಿತ ಯುವಕನಿಗೆ ನ್ಯಾಯ ಸಿಗಬೇಕು ಮತ್ತು ಆರೋಪಿ ಕೃಷ್ಣನನ್ನು ಬಂಧಿಸಬೇಕೆಂದು ಎಂದು ಒತ್ತಾಯಿಸಿ ಬೆಳ್ತಂಗಡಿಯಿಂದ ಧರ್ಮಸ್ಥಳದ ಕನ್ಯಾಡಿವರೆಗೆ ಶುಕ್ರವಾರ ಸಂಜೆ 7 ಗಂಟೆಗೆ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಮತ್ತು ಪ್ರಗತಿಪರ ಸಂಘಟನೆಗಳು ನಿರ್ಧರಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ತೀವ್ರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಆತ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರದಲ್ಲಿ ಸೆರಯಾಗಿವೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಫೆಬ್ರವರಿ 24 ರಂದು ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದೆ. ಆದರೆ ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

“ಬೆಳ್ತಂಗಡಿಯ ಸಾಮಾಜಿಕ ಹೋರಾಟಗಾರ ಶೇಖರ್‌ ಲಾಯಿಲರವರು ನಾನುಗೌರಿ ಜೊತೆಗೆ ಮಾತನಾಡಿ, “ಆರೋಪಿಗಳು ಪ್ರಬಲ ರಾಜಕೀಯ ಬೆಂಬಲ ಹೊಂದಿರುವ ಕಾರಣಕ್ಕೆ ಅವರನ್ನು ಇನ್ನೂ ಬಂಧಿಸಿಲ್ಲ. ಇದು ಕೊಲೆ ಪ್ರಕರಣವಾಗಿದೆ ಮತ್ತು ಎಸ್‌ಸಿ, ಎಸ್ಟಿ ಅಟ್ರಾಸಿಟಿ ಕಾಯ್ದೆಯಡಿ ಬರುತ್ತದೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ. ಹಾಗಾಗಿ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಪ್ರಗತಿಪರ ಸಂಘಟನಗಳು ಬೆಳ್ತಂಗಡಿಯಿಂದ ಧರ್ಮಸ್ಥಳ ಕನ್ಯಾಡಿವರೆಗೂ ಪಾದಯಾತ್ರೆ ನಡೆಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...