Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...