Homeಮುಖಪುಟಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆ: ರೈತರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ

ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿ ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿತ್ತು. ಈಗ ಬಿಜೆಪಿ ತುರ್ತುಪರಿಸ್ಥಿತಿ ಘೋಷಿಸದೆ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ.

- Advertisement -
- Advertisement -

ಕೇಂದ್ರ-ರಾಜ್ಯ ಸರ್ಕಾರಗಳ ರೈತ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಹರಿಯಾಣ- ಪಂಜಾಬ್ ದಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆ ಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತ, ದಲಿತ ಮುಖಂಡರು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ರೈತರ ಪ್ರತಿಭಟನೆಗಳನ್ನು ಸರ್ಕಾರ ಹತ್ತಿಕ್ಕುತ್ತಿದೆ ಎಂದು ಕಿಡಿಕಾರಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಸಿ.ಯತಿರಾಜು “ಹಿಂದೆ ಕಾಂಗ್ರೆಸ್ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಿಸಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿತ್ತು. ಈಗ ಬಿಜೆಪಿ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಣೆ ಮಾಡದೆಯೇ ಪ್ರತಿಭಟನೆಗಳನ್ನು ನಿಯಂತ್ರಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಕಾಂಗ್ರೆಸ್‌ನ ತುರ್ತುಪರಿಸ್ಥಿತಿಯನ್ನು ಟೀಕಿಸುವ ಬಿಜೆಪಿ ಅದೇ ಕೆಲಸವನ್ನು ಮಾಡುತ್ತಿದೆ. ಬಿಜೆಪಿಯ ಕ್ರೂರ ನಡೆಗಳು ಜನವಿರೋಧಿಯಾಗಿವೆ” ಎಂದು ಆರೋಪಿಸಿದರು.

ಬಿಜೆಪಿ ಪಕ್ಷವು ರೈತರು ಮತ್ತು ಕಾರ್ಮಿಕರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸುಗ್ರೀವಾಜ್ಞೆಗಳನ್ನು, ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು. ಇಲ್ಲದೇ ಇದ್ದರೆ ಕಾಂಗ್ರೆಸ್ ಗೆ ಕಲಿಸಿದ ಪಾಠವನ್ನೇ ಬಿಜೆಪಿಗೂ ಕಲಿಸುತ್ತಾರೆ ಎಂಬುದನ್ನು ಮರೆಯಬಾರದು. ದೇಶದ ಜನ ಸರ್ಕಾರದ ನಡೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕೊಡುವುದಾಗಿ ಹೇಳುತ್ತಿದೆ. ಇದು ಕೇವಲ ಶೇ.6ರಷ್ಟು ರೈತರಿಗೆ ಮಾತ್ರ ಸಿಗುತ್ತಿದೆ. ಉಳಿದ 94ರಷ್ಟು ಮಂದಿ ರೈತರಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ದೊರೆಯುತ್ತಿಲ್ಲ. ಅಷ್ಟೇ ಅಲ್ಲ ಕೇವಲ 24ರಷ್ಟು ಬೆಳೆಗಳಿಗೆ ಮಾತ್ರ ಬೆಂಬಲ ಬೆಲೆ ನಿಗದಿ ಮಾಡಿದೆ. ಉಳಿದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿಲ್ಲ ಎಂದು ದೂರಿದರು.

ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಿಂದ ಧಾನ್ಯಗಳನ್ನು ತಂದು ಮಾರಾಟ ಮಾಡಲಾಗುತ್ತಿದೆ. ವ್ಯಾಪಾರಿಗಳು ಕೇವಲ 800 ರೂಪಾಯಿಗೆ ಕ್ವಿಂಟಾಲ್ ಭತ್ತವನ್ನು ಖರೀಧಿ ಮಾಡುತ್ತಿದ್ದು ಸಾಕಷ್ಟು ಲಾಭ ಗಳಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಒಂದು ಕ್ವಿಂಟಾಲ್ ಭತ್ತದ ಬೆಂಬಲ ಬೆಲೆ 1880 ರೂಪಾಯಿ ನಿಗದಿ ಮಾಡಿದೆ. ಆದರೆ ಭತ್ತವನ್ನು ಬೆಂಬಲ ಬೆಲೆಗೆ ಖರೀದಿ ಮಾಡದೇ ಇರುವುದರಿಂದ ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳಿಗೆ ಲಾಭದ ಅಂಶ ಹೋಗುತ್ತಿದೆ. ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

“ಕೇಂದ್ರ ಸರ್ಕಾರ ರೈತ-ದಲಿತ ಪರ ಇದ್ದೇವೆಂದು ಅಧಿಕಾರಕ್ಕೆ ಬಂದವು. ಅಧಿಕಾರ ಭದ್ರಪಡಿಸಿಕೊಂಡ ಮೇಲೆ ರೈತರು ಮತ್ತು ದಲಿತರಿಗೆ ದ್ರೋಹ ಬಗೆಯುತ್ತಿವೆ. ರೈತರಿಗೆ ಸಂಕಷ್ಟ ತರುವ ಕಾನೂನುಗಳನ್ನು ಜಾರಿಗೆ ತರುತ್ತಿದೆ. ವಿದ್ಯುತ್, ವಿಮಾನ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಖಾಸಗೀಕರಣ ಮಾಡಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಬಂಡವಾಳಗಾರರು ರೈತರ ತಲೆಯ ಮೇಲೆ ಕಾಲಿಟ್ಟು ತುಳಿಯುತ್ತಿದ್ದಾರೆ. ಇದನ್ನು ತಡೆಯಲು ಹೋರಾಟ ಅನಿವಾರ್ಯವಾಗಿದೆ ಎಂದರು.


ಇದನ್ನೂ ಓದಿ: ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...