ಚುನಾವಣಾ ಆಯೋಗದ ಅಧಿಕಾರಿಗಳು ಭಾನುವಾರ ಬಿಹಾರದ ಸಮಸ್ತಿಪುರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ನ್ನು ಶೋಧ ನಡೆಸಿದ್ದು, ಇದನ್ನು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಹಾರದ ಸಮಷ್ಠಿಪುರದಲ್ಲಿ ಚುನಾವಣಾ ಸಮಾವೇಶಕ್ಕೆ ಹೆಲಿಕಾಪ್ಟರ್ ಮೂಲಕ ಖರ್ಗೆ ಆಗಮಿಸಿದ್ದರು. ಈ ವೇಳೆ ಹೆಲಿಕಾಪ್ಟರ್‌ನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಅಧಿಕಾರಿಗಳು ಹೆಲಿಕಾಪ್ಟರ್ ತಪಾಸಣೆ ಮಾಡುವ ವಿಡಿಯೊವನ್ನು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಈ ಕುರಿತು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಬಿಹಾರದ ಸಮಸ್ತಿಪುರದಲ್ಲಿ ಚುನಾವಣಾ ಆಯೋಗ ಮತ್ತು ಪೊಲೀಸರು ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ನ್ನು ಶೋಧ ನಡೆಸಿರುವುದು ಪ್ರತಿಪಕ್ಷಗಳ ವಿರುದ್ಧ ಚುನಾವಣಾ ಆಯೋಗದ ದುರುದ್ದೇಶಪೂರಿತ ವರ್ತನೆಯನ್ನು ತೋರಿಸುತ್ತದೆ, ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಬರೆದುಕೊಂಡಿದ್ದಾರೆ.
श्री @RahulGandhi जी के बाद अब @INCIndia अध्यक्ष श्री @kharge जी का हेलीकॉप्टर की तलाशी बिहार के समस्तीपुर में सभा के दौरान चुनाव आयोग और पुलिसकर्मियों द्वारा करना चुनाव आयोग का दुर्भावना पूर्ण व्यवहार प्रतिपक्षों के लिए दर्शाता है यह लोकतंत्र की हत्या है l pic.twitter.com/tk1SUqcj5P
— Rajesh Rathorre (@RajeshRathorre1) May 11, 2024
ಇತ್ತೀಚೆಗೆ ತಮಿಳುನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ರಾಹುಲ್ ಅವರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಕೇರಳದ ವಯನಾಡ್‌ಗೆ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ನ್ನು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಮಿಳುನಾಡಿನಲ್ಲಿ ತಪಾಸಣೆ ನಡೆಸಿದ್ದರು.
ಇದಲ್ಲದೆ ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರು, ಇದು ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಬಳಸುವ ಹೆಲಿಕಾಪ್ಟರ್‌ಗಳನ್ನು ತಪಾಸಣೆಗೆ ಒಳಪಡಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸವಾಲು ಹಾಕಿದ್ದರು.
ಇದನ್ನು ಓದಿ: ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ


