Homeಮುಖಪುಟನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಟೆನಿ, ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರರ ಮೇಲೆ ಕೊಲೆ ಮತ್ತು ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಲಖಿಂಪುರ್ ಖೇರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಧುಲ್ ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಕೊಲೆ, 120-ಬಿ ಕ್ರಿಮಿನಲ್ ಪಿತೂರಿ ಮತ್ತು ಟಿಕುನಿಯಾ ಪೊಲೀಸ್ ಠಾಣೆಯಲ್ಲಿ ಗಲಭೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವರ ಬೆಂಗಾವಲು, ಅವರ ಮಗ, ಚಿಕ್ಕಪ್ಪ ಮತ್ತು ಇತರ ಗೂಂಡಾಗಳು ವಾಹನ ಹರಿಸಿದ್ದಾರೆ. ಇದರಿಂದ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ನಂತರದ ಹಿಂಸಾಚಾರದಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದಾರೆ ಎನ್ನಲಾಗಿದೆ.

ಸರ್ಕಾರದ ಈ ಕೊಲೆಗಡುಕ ದಾಳಿಗಳನ್ನು ಸಂಯುಕ್ತ ಕಿಸಾನ್ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದಿರುವ ರೈತ ಸಂಘಟನೆ, ಘಟನೆಗೆ ಕಾರಣರಾದ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಅವರನ್ನು ಪದವಿಯಿಂದ  ತಕ್ಷಣವೇ ವಜಾಗೊಳಿಸಬೇಕು ಎಂದು ಆಗ್ರಹಿಸಿತ್ತು.

ಇಂದು ಮುಂಜಾನೆ ಹತ್ಯೆಯಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ಮಾತಿನ ಚಕಮಕಿ ನಡೆದಿದೆ.

“ನೀವು ಕೊಂದ ರೈತರಿಗಿಂತ ನಾನು ಮುಖ್ಯವಲ್ಲ. ಆದರೆ ನೀವು ಈ ಸರ್ಕಾರವನ್ನು ರಕ್ಷಿಸುತ್ತಿದ್ದೀರಿ. ನೀವು ನನಗೆ ಕಾನೂನು ವಾರಂಟ್, ಕಾನೂನು ಆಧಾರ ನೀಡಿ. ಇಲ್ಲವಾದರೆ ನಾನು ಇಲ್ಲಿಂದ ಕದಲುವುದಿಲ್ಲ ಮತ್ತು ನೀವು ನನ್ನನ್ನು ಮುಟ್ಟುವಂತಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಪೊಲೀಸರೊಡನೆ ವಾಗ್ವಾದ ಮಾಡುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿವೆ.

ಘಟನೆ ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾದ ಸಮಾಜವದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌ರವರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ: ಹತ್ಯೆಗೀಡಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಪ್ರಿಯಾಂಕ ಗಾಂಧಿ ವಶಕ್ಕೆ ಪಡೆದ ಪೊಲೀಸರು: ತೀವ್ರ ವಾಗ್ವಾದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...