Homeಕರ್ನಾಟಕಗೋರಕ್ಷಣೆ ಹೆಸರಲ್ಲಿ ಪುನಿತ್ ಕೆರೆಹಳ್ಳಿಯಿಂದ ಮುಸ್ಲಿಂ ವ್ಯಕ್ತಿಯ ಕೊಲೆ: ಕುಟುಂಬಸ್ಥರ ಆರೋಪ

ಗೋರಕ್ಷಣೆ ಹೆಸರಲ್ಲಿ ಪುನಿತ್ ಕೆರೆಹಳ್ಳಿಯಿಂದ ಮುಸ್ಲಿಂ ವ್ಯಕ್ತಿಯ ಕೊಲೆ: ಕುಟುಂಬಸ್ಥರ ಆರೋಪ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗೋರಕ್ಷಕರೇ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದ್ರೀಸ್ ಪಾಷ ಎನ್ನುವ 39 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ಮಂಡ್ಯ ಮೂಲದವರಾಗಿದ್ದು, ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದರು. ಈ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ ನೇತೃತ್ವದ ತಂಡ ಕ್ಯಾಂಟರ್ ಮೇಲೆ ದಾಳಿ ಮಾಡಿದೆ. ಈ ವಾಹನದಲ್ಲಿ ಜಾನುವಾರು ಸಾಗಾಟ ನಡೆಯುತ್ತಿರುವುದರ ಬಗ್ಗೆ ಮೊದಲೇ ಮಾಹಿತಿ ಪಡೆದಿದ್ದ ತಂಡ ತಡರಾತ್ರಿ ಕಾದು ಕುಳಿತು ಆಕ್ರಮಣ ನಡೆಸಿದೆ ಎನ್ನಲಾಗಿದೆ.

ಮೃತಪಟ್ಟಿರುವ ಇರ್ಗೀಷ್‌ ಪಾಷ

ಕ್ಯಾಂಟರ್‌ನಲ್ಲಿದ್ದ 16 ಜಾನುವಾರುಗಳನ್ನು ಪುನೀತ್ ಕೆರೆಹಳ್ಳಿ ತಂಡ ತಮ್ಮ ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭ ವಾಹನದಿಂದ ಇಳಿದು ಇದ್ರೀಸ್ ಪಾಷ ಅವರು ಓಡಿಹೋಗಿದ್ದರು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇದ್ರೀಸ್ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

”ಇದ್ರೀಸ್ ಅವರನ್ನು ಪುನೀತ್‌ ಕೆರೆಹಳ್ಳಿ ಹಾಗೂ ಮತ್ತಿತರರೇ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ. ಅವರನ್ನು ಬಂಧಿಸಬೇಕು” ಎಂದು ಆರೋಪಿಸಿ ಅವರ ಕುಟುಂಬಸ್ಥರು ಶನಿವಾರ ಸಾತನೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಸ್ಥಳಕ್ಕಾಗಮಿಸಿದ ಪೊಲೀಸರು ಆಕ್ರೋಶಗೊಂಡ ಕುಟುಂಬಸ್ಥರನ್ನು ಸಮಾಧಾನಪಡಿಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 302, 341 (ತಪ್ಪಾದ ನಿರ್ಬಂಧ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ಪ್ರತಿ:

‘ಇದ್ರೀಸ್ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಲಿದೆ. ಅದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಸದ್ಯ ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ರಹಸ್ಯ ಸ್ಥಳದಲ್ಲಿರಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...