Homeಮುಖಪುಟಉತ್ತರ ಪ್ರದೇಶದಲ್ಲಿ ಇಬ್ಬರು ಸಾಧುಗಳ ಹತ್ಯೆ: ಆರೋಪಿ ಬಂಧನ

ಉತ್ತರ ಪ್ರದೇಶದಲ್ಲಿ ಇಬ್ಬರು ಸಾಧುಗಳ ಹತ್ಯೆ: ಆರೋಪಿ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ದೇವಸ್ಥಾನವೊಂದರಲ್ಲಿ ಸೋಮವಾರ ರಾತ್ರಿ ಇಬ್ಬರು ಸಾಧುಗಳನ್ನು ಹತ್ಯೆ ಮಾಡಲಾಗಿದೆ.

55 ಮತ್ತು 35 ವರ್ಷದ ಸಾಧುಗಳನ್ನು ತಾತ್ಕಾಲಿಕವಾಗಿ ತಂಗಿದ್ದ ಸಣ್ಣ ದೇವಸ್ಥಾನವೊಂದರಲ್ಲಿ ನಿನ್ನೆ ಸಂಜೆ ಕತ್ತಿಯಿಂದ ಕೊಲ್ಲಲಾಯಿತು. ರಾಜು ಎಂಬ ವ್ಯಕ್ತಿಯನ್ನು ಬಂಧಿಸಿ ಆತನ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ.

ಕೊಲೆಗಾರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೋರಿದ್ದಾರೆ.

ಪೊಲೀಸರ ಪ್ರಕಾರ, ಇಬ್ಬರು ಸಾಧುಗಳನ್ನು ಕೊಂದಾಗ ಆರೋಪಿ “ಹೆಚ್ಚು ಮಾದಕ ವಸ್ತುಗಳನ್ನು ಸೇವಿಸಿದ್ದನು”. ಈಗಲೂ ಆತ ಡ್ರಗ್ಸ್ ಅಮಲಿನಲ್ಲಿದ್ದು ಅದು ಇಳಿದ ತಕ್ಷಣ ಆತನನ್ನು ಪ್ರಶ್ನಿಸಲಾಗುವುದು. ಆದರೆ ಇದರಲ್ಲಿ ಯಾವುದೇ ಕೋಮುವಾದದ ಅಂಶಗಳಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಇಬ್ಬರು ಸಾಧುಗಳು ಇಲ್ಲಿ ದೇವಸ್ಥಾನದಲ್ಲಿ ವಾಸಿಸುತ್ತಿದ್ದರು. ಮುರೈ ಅಲಿಯಾಸ್ ರಾಜು ಎಂಬ ವ್ಯಕ್ತಿಯು ಇಕ್ಕುಳವನ್ನು ತೆಗೆದುಕೊಂಡು ಹೋಗಿದ್ದನು. ಇದಕ್ಕಾಗಿ ಅವನನ್ನು ಪುರೋಹಿತರು ಗದರಿಸಿದರು ಮತ್ತು ನಿಂದಿಸಿದರು. ಕೊಲೆಯ ನಂತರ, ಗ್ರಾಮಸ್ಥರು ಆತನನ್ನು ಹುಡುಕುತ್ತಿದ್ದರು. ಆತ ಕನಿಷ್ಠ ಬಟ್ಟೆ ಧರಿಸಿ, ತೀವ್ರ  ಮಾದಕ ದ್ರವ್ಯವನ್ನು ಸೇವಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಪುರೋಹಿತರು ಕಳ್ಳತನದ ಆರೋಪ ಮಾಡಿದಾಗಿನಿಂದ ಆ ವ್ಯಕ್ತಿ ಕೆರಳಿದನೆಂದು ಆರೋಪಿಸಲಾಗಿದೆ. ಹಾಗಾಗಿ ಆತ ಗಾಂಜಾ ತೆಗೆದುಕೊಂಡ ನಂತರ, ದೇವಸ್ಥಾನಕ್ಕೆ ಹೋಗಿ ಇಬ್ಬರನ್ನು ಕತ್ತಿಯಿಂದ ಕೊಂದಿದ್ದಾನೆ ಎನ್ನಲಾಗಿದೆ.

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿಯೂ ಸಹ ಇಬ್ಬರು ಸಾಧುಗಳನ್ನು ಮತ್ತು ಅವರ ಕಾರಿನ ಡ್ರೈವರ್‌ನನ್ನು ಮಕ್ಕಳ ಕಳ್ಳರೆಂಬ ಆರೋಪದಲ್ಲಿ ಗುಂಪು ಥಳಿತ ಮಾಡಿ ಹತ್ಯೆ ಮಾಡಲಾಗಿತ್ತು. ಇದನ್ನು ಮುಸ್ಲಿಮರು ಮಾಡಿದ್ದಾರೆ ಎಂದು ಕೋಮುವಾದಿ ಆಯಾಮ ನೀಡಲು ಬಿಜೆಪಿ ಮುಖಂಡರು ಪ್ರಯತ್ನಿಸಿದ್ದರು. ಆದರೆ ಅಲ್ಲಿನ ಬುಡಕಟ್ಟು ಜನರೇ ಕೊಂದಿದ್ದರು ಎಂದು ಸರ್ಕಾರ ಸ್ಪಷ್ಟನೆ ನೀಡಿತ್ತು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...