Homeಮುಖಪುಟತಿಪ್ಪೂರಿನಲ್ಲಿ ಅಡಿಕೆ ತೆಂಗು ಮರ ಕಡಿದ ಪ್ರಕರಣ: ಗ್ರಾಮ ಲೆಕ್ಕಿಗ ಮುರಳಿ ಅಮಾನತು..

ತಿಪ್ಪೂರಿನಲ್ಲಿ ಅಡಿಕೆ ತೆಂಗು ಮರ ಕಡಿದ ಪ್ರಕರಣ: ಗ್ರಾಮ ಲೆಕ್ಕಿಗ ಮುರಳಿ ಅಮಾನತು..

- Advertisement -
- Advertisement -

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ತಿಪ್ಪೂರಿನಲ್ಲಿ ನಡೆದ ತೆಂಗು ಮತ್ತು ಅಡಿಕೆ ಮರಗಳ ಕಡಿದ ಪ್ರಕರಣ ಸಂಬಂಧ ಅಮ್ಮನಘಟ್ಟ ವೃತ್ತದ ಗ್ರಾಮ ಲೆಕ್ಕಿಗ ಮುರಳಿ ಅವರನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತೆಂಗು ಮತ್ತು ಅಡಿಕೆ ಗಿಡಗಳ ಕಡಿದ ಪ್ರಕರಣದ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಅಮ್ಮನಘಟ್ಟ ವೃತ್ತದ ಗ್ರಾಮ ಲೆಕ್ಕಿಗ ಮುರಳಿ ಅವರನ್ನು ಅಮಾನತುಗೊಳಿಸಲಾಗಿದೆ.

ಕೆಳಹಂತದ ನೌಕರನನ್ನು ಅಮಾನತು ಮಾಡುವ ಮೂಲಕ ಆದೇಶ ನೀಡಿದ ತಹಶೀಲ್ದಾರ್‌ ಮತ್ತು ಕಂದಾಯ ಅಧಿಕಾರಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ‍ ಎಂದು ಜಿಲ್ಲಾಧಿಕಾರಿಗಳ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಈ ನಡುವೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆಗಳು ತಿಪ್ಪೂರು ಮತ್ತು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿವೆ. ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿವೆ.

ತೆಂಗು ಮತ್ತು ಅಡಿಕೆ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಕೂಡಲೇ ಪರಿಹಾರ ಕೊಡಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...