HomeUncategorizedಸಿಎಂಗೆ ಕೊಲೆ ಬೆದರಿಕೆ; ಹಿಂದೂ ಮಹಾಸಭಾ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲು

ಸಿಎಂಗೆ ಕೊಲೆ ಬೆದರಿಕೆ; ಹಿಂದೂ ಮಹಾಸಭಾ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲು

ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ಧರ್ಮೇಂದ್ರ, "ನಾನು ಕೊಲೆ ಬೆದರಿಕೆ ಹಾಕಿಲ್ಲ; ಮಾಧ್ಯಮಗಳಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ" ಎಂದು ಯೂಟರ್ನ್ ತೆಗೆದುಕೊಂಡಿದ್ದಾರೆ.

- Advertisement -
- Advertisement -

“ನಾವು ಗಾಂಧಿಯನ್ನೇ ಬಿಟ್ಟಿಲ್ಲ, ನೀವು ಯಾವ ಲೆಕ್ಕ ಸ್ವಾಮಿ?” ಎಂದು ಹೇಳಿಕೆ ನೀಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌‌ ನಿವಾಸಿ ಡಾ.ಲೋಹಿತ್‌ ಕುಮಾರ್‌ ಸುವರ್ಣ ಎಂಬವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌‌ಐಆರ್‌ ದಾಖಲಿಸಲಾಗಿದೆ.

“ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಗಾಂಧಿಯನ್ನು ಹತ್ಯೆ ಮಾಡಲು ಸಾಧ್ಯವಾಗುತ್ತೆ ಎಂದ ಮೇಲೆ, ನಿಮ್ಮ ವಿಚಾರದಲ್ಲಿ ನಾವು ಆಲೋಚನೆ ಮಾಡಲು ಸಾಧ್ಯವಿಲ್ಲ ಅಂತೀರಾ ನೀವು?” ಎಂದು ಮಂಗಳೂರಿನ ಖಾಸಗಿ ಹೋಟೆಲ್‌‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಧರ್ಮೇಂದ್ರ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದರು.

ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ಧರ್ಮೇಂದ್ರ, “ನಾನು ಕೊಲೆ ಬೆದರಿಕೆ ಹಾಕಿಲ್ಲ; ಮಾಧ್ಯಮಗಳಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದಿದ್ದಾರೆ.

“ಹಿಂದೂವಾಗಿ ನಮ್ಮ ಶ್ರದ್ಧೆಯ ಕೇಂದ್ರ ದೇವಸ್ಥಾನ ಧ್ವಂಸವಾದ ಬಗ್ಗೆ ಅಸಹನೆಯಿಂದ ಮಾತನಾಡಿದ್ದೇನೆ. ಇದರ ಹಿಂದೆ ಯಾವುದೇ ಬೆದರಿಕೆ ಹಾಕುವ ದುರುದ್ದೇಶ ಇಲ್ಲ. ಗಾಂಧೀಜಿ ಹತ್ಯೆಯ ಕಾರಣವನ್ನು ವಿವರಿಸುವ ಭರದಲ್ಲಿ ಈ ಹೇಳಿಕೆ ಬಂದಿದೆ. ಈ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ. ಗಾಂಧೀಜಿ ಹತ್ಯೆ ಕುರಿತಂತೆ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಿರುಚಲಾಗಿದ್ದು, ಹೇಳಿಕೆಯ ಉದ್ದೇಶವನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ” ಎಂದು ಯೂಟರ್ನ್‌ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...