Homeಕರ್ನಾಟಕದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ: ಓರ್ವ ಆರೋಪಿಯ ಬಂಧನ

ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ: ಓರ್ವ ಆರೋಪಿಯ ಬಂಧನ

ದ.ಕ. ದ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರನ್ನು ನಿನ್ನೆಯಷ್ಟೇ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ. 

- Advertisement -
- Advertisement -

ದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ವಾಟ್ಸಪ್‌ ಗ್ರೂಪಿನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧಿಸಿದಂತೆ ಮೂಡಬಿದಿರೆ ಪೊಲೀಸರು ಸ್ವಯಂ ಪ್ರೇರಿತ ಪ್ರಕಣರಣ ದಾಖಲಿಸಿ, ಮಂಗಳೂರಿನ ಬಜ್ಪೆ ಸಮೀಪದ ನಿವಾಸಿ ರಂಜಿತ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ದ.ಕ. ದ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರನ್ನು ನಿನ್ನೆಯಷ್ಟೇ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.


ಇದನ್ನೂ ಓದಿ: ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೊಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಜಾನುವಾರು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದರು.

ಜಿಲ್ಲಾಧಿಕಾರಿಯ ಈ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಮಾದ್ಯಮ ವರದಿಯ ಪೋಸ್ಟ್‌ಗೆ ಸಂಬಂಧಿಸಿ “ರಾಮ್ ಸೇನಾ” ಎಂಬ ವಾಟ್ಸಪ್ ಗುಂಪಿನಲ್ಲಿ ತುಳು ಭಾಷೆಯಲ್ಲಿ ಜಿಲ್ಲಾಧಿಕಾರಿಗಳನ್ನು ಕಡಿದು ಕೊಲೆ ಮಾಡಬೇಕು ಎಂಬ ಅರ್ಥ ಬರುವ ಸಂದೇಶವನ್ನು ಹಾಕಲಾಗಿತ್ತು.


ಓದಿ:ದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು…?


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

0
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ದೇಶದ 107...