Homeಮುಖಪುಟಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

ಮುರ್ಷಿದಾಬಾದ್ ಕೋಮು ಹಿಂಸಾಚಾರ: ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯದ ಆರೋಪ ಮಾಡಿದ ಸತ್ಯಶೋಧನಾ ಸಮಿತಿ

- Advertisement -
- Advertisement -

ಮುರ್ಷಿದಾಬಾದ್: ಏಪ್ರಿಲ್ 11 ಮತ್ತು 12 ರಂದು ಮುರ್ಷಿದಾಬಾದ್‌ನ ಸಮ್‌ಶೇರ್‌ಗಂಜ್‌ನಲ್ಲಿ ನಡೆದ ಕೋಮು ಹಿಂಸಾಚಾರದ ನಂತರ ಭಾರೀ ಪೊಲೀಸ್ ನಿರ್ಲಕ್ಷ್ಯ, ಕೋಮು ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳು ನಡೆದಿವೆ ಎಂದು  ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಮತ್ತು ಬಂದಿ ಮುಕ್ತಿ ಸಮಿತಿ ಜಂಟಿಯಾಗಿ ನಡೆಸಿದ ಸತ್ಯಶೋಧನಾ ಸಮಿತಿಯು ಆರೋಪಿಸಿದೆ.

ವಕ್ಫ್ ಚಳುವಳಿಯ ಸುತ್ತಲಿನ ವಿವಾದದಿಂದ ಈ ಹಿಂಸಾಚಾರ ಹುಟ್ಟಿಕೊಂಡಿತು ಎನ್ನಲಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಗಲಭೆ ಸಂದರ್ಭದಲ್ಲಿ ಅಂಗಡಿ ಮುಗ್ಗಟ್ಟುಗಳಿಗೆ, ವಾಹನಗಳಿಗೆ ವ್ಯಾಪಕವಾಗಿ ಬೆಂಕಿ ಹಚ್ಚುವಿಕೆ, ಲೂಟಿ, ಮತ್ತು ಹಲವರಿಗೆ ಗಾಯಗಳಾಗಿವೆ ಎಂದು ಈ ಸತ್ಯಶೋಧನಾ ಸಮಿತಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಪೊಲೀಸರು ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಿದ್ದರೆ ಹಿಂಸಾಚಾರದ ವಿಸ್ತರಣೆಯನ್ನು ತಡೆಯಬಹುದಿತ್ತು ಎಂದು ಕಂಡುಬಂದಿದೆ. ಎಲ್ಲಾ ಸಮುದಾಯಗಳ ಸಂತ್ರಸ್ತರು, ಪೊಲೀಸರ ಆರಂಭಿಕ ಕ್ರಮವು ಹಿಂಸಾಚಾರವನ್ನು ತಡೆಯಬಹುದಿತ್ತು ಎಂದು ಒಕ್ಕೊರಲಿನಿಂದ ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹರ್ಗೋಬಿಂದ್ ದಾಸ್ ಮತ್ತು ಚಂದನ್ ದಾಸ್ ಎಂಬ ಇಬ್ಬರು ಸಂತ್ರಸ್ತರು ಮೂರು ಗಂಟೆಗಳಿಗೂ ಹೆಚ್ಚು ಕಾಲ ವೈದ್ಯಕೀಯ ನೆರವು ಸಿಗದೆ ಜಾಫರಾಬಾದ್‌ನಲ್ಲಿ ಮೃತಪಟ್ಟಿದ್ದಾರೆ ಎಂಬ ಆರೋಪವೂ ಇದೆ ಎಂದು ಸಮಿತಿ ಹೇಳಿದೆ.

ಗಡಿ ಭದ್ರತಾ ಪಡೆ (BSF) ಸಿಬ್ಬಂದಿಯ ಭಾಗವಹಿಸುವಿಕೆಯ ಬಗ್ಗೆಯೂ ಸಮಿತಿಯು ಗಂಭೀರ ಕಳವಳ ವ್ಯಕ್ತಪಡಿಸಿದೆ. ಇಜಾಜ್ ಅಹ್ಮದ್ ಎಂಬುವವರು ಈ ಗಲಭೆಯಲ್ಲಿ ಕೊಲ್ಲಲ್ಪಟ್ಟರು ಮತ್ತು ಕನಿಷ್ಠ 13  ಮುಸ್ಲಿಂ ನಿವಾಸಿಗಳು ಗುಂಡೇಟುಗಳಿಂದ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ಕೆಲವು ಬಿಎಸ್‌ಎಫ್ ಪಡೆಗಳು ಚಪ್ಪಲಿಗಳನ್ನು ಧರಿಸಿದ್ದವು. ಇದು ಅಸಾಮಾನ್ಯ ದೃಶ್ಯವಾಗಿತ್ತು  ಮತ್ತು ಈ ರೀತಿ ಚಪ್ಪಲಿ ಧರಿಸಿದವರು ಬಲಪಂಥೀಯ ಉಗ್ರಗಾಮಿ ಸದಸ್ಯರಾಗಿದ್ದು ಅವರು ಬಿಎಸ್‌ಎಫ್ ಸಿಬ್ಬಂದಿಯಂತೆ ನಟಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಮುಸ್ಲಿಂ ನಾಗರಿಕರನ್ನು ಮತ್ತು ಅಪ್ರಾಪ್ತ ವಯಸ್ಕರರನ್ನು ಸರಿಯಾದ ಕಾನೂನು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ ಎಂದು ಸತ್ಯಶೋಧನಾ ಸಮಿತಿ ಆರೋಪಿಸಿದೆ. ರಾತ್ರಿ ವೇಳೆ ದಾಳಿಗಳನ್ನು ನಡೆಸಲಾಗಿದ್ದು ಆರೆಸ್ಟ್ ವಾರೆಂಟ್ ಗಳನ್ನು ನೀಡಲಾಗಿಲ್ಲ ಮತ್ತು ಬಂಧಿತರನ್ನು 24 ಗಂಟೆಗಳ ಕಾನೂನು ಮಿತಿಗಿಂತ ಹೆಚ್ಚು ಕಾಲ ಪೊಲೀಸ್ ವಶದಲ್ಲಿ ಇರಿಸಿ,  ಹಿಂಸಾಚಾರಕ್ಕೆ ಒಳಪಡಿಸಲಾಗಿದೆ ಎಂದೂ ಆರೋಪಿಸಲಾಗಿದೆ.

ಸುಮಾರು 300 ದೂರುಗಳ (FIRs) ಪರಿಶೀಲನೆ ಮಾಡಿದಾಗ ಪ್ರತಿ ದೂರಿನಲ್ಲಿ “ಕಾಪಿ-ಪೇಸ್ಟ್” ಮಾಡಲಾಗಿದೆ. ಕೇವಲ ಹೆಸರುಗಳನ್ನು ಮಾತ್ರ ಬದಲಾಯಿಸಲಾಗಿದೆ ಎಂದು ಸಮಿತಿ ಹೇಳಿದೆ.  ಇದು ಸುಳ್ಳು ಮತ್ತು ಇಸ್ಲಾಮೋಫೋಬಿಕ್ ದೂರುಗಳ ಸೂಚನೆಯಾಗಿದೆ ಎಂದು ಅದು ಹೇಳಿದೆ. ಎಫ್‌ಐಆರ್‌ನಲ್ಲಿನ ನಿರೂಪಣೆಗಳು ದಲಿತರು ಮತ್ತು ಮುಸ್ಲಿಮರ ನಡುವೆ ಭಿನ್ನಾಭಿಪ್ರಾಯ ಮೂಡಿಸುವ ಉದ್ದೇಶವನ್ನು ಸೂಚಿಸಿವೆ. ಇದು ಹಿಂದೂ ರಾಷ್ಟ್ರೀಯವಾದಿ ಸಂಘಟನೆಗಳ ತಂತ್ರ ಎಂದು ಸಮಿತಿಯು ಆರೋಪಿಸಿದೆ.

ಸತ್ಯಶೋಧನಾ ವರದಿಯು ಈ ಕೆಳಗಿನಂತೆ  ಶಿಫಾರಸ್ಸು ಮಾಡಿದೆ

1.ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ

2.ಬಿಎಸ್‌ಎಫ್ ಗುಂಡಿನ ದಾಳಿಗೆ ಬಲಿಯಾದವರಿಗೆ ಪರಿಹಾರ

3.ಸುಳ್ಳು ಆರೋಪಗಳ ಅಡಿಯಲ್ಲಿ ಬಂಧಿತರಾದವರ ಬಿಡುಗಡೆ

4.ಅನಿಯಂತ್ರಿತ ಪೊಲೀಸ್ ದಾಳಿಗಳನ್ನು ಕೊನೆಗೊಳಿಸುವುದು. ಜಿಲ್ಲಾಡಳಿತವು ಪ್ರಜಾಪ್ರಭುತ್ವ ಸಭೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು ಮತ್ತು ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದ ವಿಚಾರಣಾಧೀನ ಕೈದಿಗಳಿಗೆ ಕಾನೂನು ನೆರವು ಖಚಿತಪಡಿಸಬೇಕು ಎಂದು ಅದು ಒತ್ತಾಯಿಸಿದೆ.

ಇರಾನ್ ಅಣು ಸ್ಥಾವರಗಳ ವಿಕಿರಣ ಮಟ್ಟಗಳ ಮೇಲೆ ಭಾರತದ ಸೂಕ್ಷ್ಮ ನಿಗಾ: ಇರಾನ್‌ನಿಂದ ಭಾರತಕ್ಕೆ ಕೃತಜ್ಞತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...