Homeಕರ್ನಾಟಕಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

ಪೋಕ್ಸೋ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ ‘2261’ ನೀಡಲಾಗಿದೆ.

- Advertisement -
- Advertisement -

ಪೋಕ್ಸೋ ಹಾಗೂ ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ನೈಜ ವರದಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಸೂಚಿಸಿದೆ.

“ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿ ಮೇಲೆ ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ವರದಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಆಯೋಗವು ನಿರ್ದೇಶನ ನೀಡಿದೆ” ಎಂದು ‘ದಿ ಫೈಲ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶ್ರೀ ಮುರುಘ ರಾಜೇಂದ್ರ ಮಠದಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ಪ್ರಕರಣದಲ್ಲಿ ಮಠದ ಸ್ವಾಮೀಜಿ ಮತ್ತು ಇತರರ ವಿರುದ್ಧ ದೂರು ದಾಖಳಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದ್ದರಿಂದ ಈ ಕುರಿತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಾಗಿರುವ ಬಗ್ಗೆ ಕೈಗೊಂಡಿರುವ ನೈಜ ವರದಿಯನ್ನುಕೂಡಲೇ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನಸೂಚಿತ ಬುಡಕಟ್ಟುಗಳ ಆಯೋಗಕ್ಕೆ ತುರ್ತಾಗಿ ಸಲ್ಲಿಸಬೇಕು” ಎಂದು ಚಿತ್ರದುರ್ಗದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಸೆಪ್ಟೆಂಬರ್‌ 1ರಂದು ಆಯೋಗ ಸೂಚಿಸಿದೆ.

ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ನೋಟೀಸ್ ನೀಡಿತ್ತು. ನಂತರದಲ್ಲಿ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಕ್ರಮ ಜರುಗಿಸಲು ಮುಂದಾಗಿದೆ.

ವಿಚಾರಣಾಧೀನ ಕೈದಿ ನಂ. 2261

ಪೋಕ್ಸೋ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಯವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ. ಸೆಪ್ಟೆಂಬರ್‌ 1ರ ರಾತ್ರಿ 10.30ರ ಸುಮಾರಿಗೆ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದರು.

ಕಣ್ಣೀರಿಟ್ಟ ಆರೋಪಿ ಸ್ವಾಮೀಜಿ

ಮೂರು ದಿನಗಳ ಕಾಲ ಪೊಲೀಸ್ ವಶಕ್ಕೊಳಗಾದ ಮುರುಘಾ ಸ್ವಾಮೀಜಿ ಕೋರ್ಟ್ ವಿಚಾರಣೆಯ ವೇಳೆ ಕೋರ್ಟ್ ಅಂಗಳದಲ್ಲಿ ಕಣ್ಣಿರು ಹಾಕಿದರೆಂದು ವರದಿಯಾಗಿದೆ.

ಚಿತ್ರದುರ್ಗ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಯನ್ನು ಶುಕ್ರವಾರ ಬೆಳಗ್ಗೆ 11ಕ್ಕೆ ಹಾಜರು ಪಡಿಸಲು ಸೂಚಿಸಿತ್ತು. ಆದರೆ, ಗುರುವಾರ ರಾತ್ರಿ ಸ್ವಾಮೀಜಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಬಿ ಕೆ ಕೋಮಲ ನಡೆಸಿದರು. ಪೊಲೀಸರ ಅರ್ಜಿ ಪರಿಶೀಲನೆ ವೇಳೆ ಅಪರಾಧಿ ಬಗ್ಗೆ ನ್ಯಾಯಾಧೀಶರು ಮಾಹಿತಿ ಕೇಳಿದರು. ಈ ವೇಳೆ ಸ್ವಾಮೀಜಿ ಆರೋಗ್ಯ ಸಮಸ್ಯೆ ವಿಚಾರ ಮುಂದಿಡಲಾಗಿತ್ತು. ಈ ವೇಳೆ ಸಿಡಿಮಿಡಿಗೊಂಡ ನ್ಯಾಯಾಧೀಶರು, ಕೋರ್ಟ್ ಗಮನಕ್ಕೆ ತರದೆ ಹೇಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರನ್ನು ಪ್ರಶ್ನಿಸಿದರು.

ಇದನ್ನೂ ಓದಿರಿ: ಮನುಷ್ಯರಾದವರು ಈ ಕೆಲಸ ಮಾಡುವುದಿಲ್ಲ: ಬೆಂಗಳೂರಿನಲ್ಲಿ ಮುರುಘಾ ಶರಣರ ವಿರುದ್ಧ ಆಕ್ರೋಶ

ಇದಕ್ಕೆ ಉತ್ತರಿಸಿದ ಜೈಲು ಅಧೀಕ್ಷಕರ ಮಾತಿನಿಂದ ಸಂತೃಪ್ತಿಗೊಳ್ಳದ ನ್ಯಾಯಾಧೀಶರು ಅದರ ಸಲುವಾಗಿನ ಅಗತ್ಯ ದಾಖಲೆ, ವೈದ್ಯರ ವರದಿ ಸಲ್ಲಿಸುವಂತೆ ತಿಳಿಸಿದರು. ಆದರೆ ಸಕಾಲಕ್ಕೆ ಅದನ್ನು ಜೈಲು ಸಿಬ್ಬಂದಿಗಳು ಒದಗಿಸದಿದ್ದಾಗ, ದಾಖಲೆ ಕೊರತೆಯಿರುವ ಕಾರಣಕ್ಕೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅವರು ಆದೇಶಿಸಿದರು.

ಕೂಡಲೇ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿಯನ್ನು ಕೋರ್ಟ್‌ಗೆ ಕರೆತರಲಾಯಿತು. ಕೋರ್ಟ್‌ಗೆ ಬಂದ ಅವರನ್ನು ಕಟಕಟೆಯಲ್ಲಿ ನಿಲ್ಲುವಂತೆ ನ್ಯಾಯಾಧೀಶರು ಸೂಚಿಸಿದರು. ಮೊದಲು ಇದಕ್ಕೆ ಹಿಂದೇಟು ಹಾಕಿದ ಸ್ವಾಮೀಜಿ ಬಳಿಕ ಒಲ್ಲದ ಮನಸ್ಸಿನಿಂದಲೇ ಕಟಕಟೆ ಏರಿದರು. ಈ ವೇಳೆ ಮುರುಘಾ ಶರಣರು ಕಣ್ಣೀರು ಹಾಕಿ ತಲೆತಗ್ಗಿಸಿ ನಿಂತರು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...