Homeಕರ್ನಾಟಕಮಠದ ಆಸ್ತಿ, ಹಣ ದುರುಪಯೋಗ: ಮುರುಘಾ ಶರಣರಿಗೆ ಹೈಕೋರ್ಟ್‌ ನೋಟಿಸ್

ಮಠದ ಆಸ್ತಿ, ಹಣ ದುರುಪಯೋಗ: ಮುರುಘಾ ಶರಣರಿಗೆ ಹೈಕೋರ್ಟ್‌ ನೋಟಿಸ್

- Advertisement -
- Advertisement -

ಭಾರೀ ಪ್ರಮಾಣದ ಆಸ್ತಿ ಮತ್ತು ಹಣ ದುರುಪಯೋಗ ಆಗಿದೆ ಎನ್ನುವ ಆರೋಪದ ಮೇಲೆ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮಧ್ಯಂತರ ಅರ್ಜಿ ಸೇರ್ಪಡೆ ಮೇಲ್ಮನವಿ ಕುರಿತಂತೆ ವಿಜಯಕುಮಾರ್ ಎಸ್.ದುರ್ಗದ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಚಿತ್ರದುರ್ಗ ಮುರುಘಾ ಮಠದ ಕೋಟ್ಯಂತರ ರೂ. ಹಣ ಮತ್ತು ಭಾರೀ ಪ್ರಮಾಣದ ಸ್ಥಿರಾಸ್ತಿ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ರಿಟ್ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿರುವ ನ್ಯಾಯಪೀಠ, ಪ್ರತಿವಾದಿ ಮುರುಘಾ ಶರಣರು ಮತ್ತು ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಸೇರಿದಂತೆ ಏಳು ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ಈ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

ಚಿತ್ರದುರ್ಗದ ಮುರುಘಾ ಶರಣರು ಮಠದ ಹಣ, ಸ್ಥಿರಾಸ್ತಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ಅರ್ಜಿದಾರರ ಆರೋಪವಾಗಿದೆ. ಬೆಂಗಳೂರು ನಗರದ ಸಿಸಿಎಚ್ ಕೋರ್ಟ್-56ರಲ್ಲಿ ಶರಣರ ವಿರುದ್ಧದ ಈ ಆರೋಪಗಳಿಗೆ ಸಂಬಂಧಿಸಿದಂತೆ ಯೋಜನಾ ದೂರು (ಸ್ಕೀಮ್ ಸೂಟ್) ದಾಖಲಾಗಿದ್ದು, ಈ ಅಸಲು ದೂರಿನಲ್ಲಿ ನನ್ನನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಅಧೀನ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರ ವಿಜಯಕುಮಾರ್ ಕೋರಿದ್ದರು ಎಂದು ವಾರ್ತಾಭಾರತಿ ವರದಿ ಮಾಡಿದೆ.

ಈ ಅರ್ಜಿಯನ್ನು ಅಧೀನ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ವಿಜಯಕುಮಾರ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...