Homeಮುಖಪುಟಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

- Advertisement -
- Advertisement -

ಹೊಸದಿಲ್ಲಿ: ಬಿಹಾರ ಸೇರಿದಂತೆ ದೇಶದ ಹಲವೆಡೆ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್ (AIMMM) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಸ್ಲಿಂ ಸಂಘಟನೆಗಳು ಮತ್ತು ಪ್ರಮುಖ ವ್ಯಕ್ತಿಗಳ ಒಕ್ಕೂಟವಾಗಿರುವ ಮುಶಾವರತ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೋಮು ಹಿಂಸಾಚಾರ ಮತ್ತು ದ್ವೇಷದ ಅಪರಾಧಗಳು ಅಪಾಯಕಾರಿ ಮಟ್ಟಕ್ಕೆ ಹೆಚ್ಚಿರುವುದನ್ನು ಖಂಡಿಸಿದೆ.

ಶನಿವಾರ ಇಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಮುಶಾವರತ್ ದೇಶದಲ್ಲಿ ಮುಸ್ಲಿಮರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿತು. ಅಸ್ಸಾಂನಲ್ಲಿ ಮುಸ್ಲಿಮರನ್ನು ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸುವುದು ಮತ್ತು ದೇಶದ ವಿವಿಧ ಭಾಗಗಳಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸುವುದು ಈ ಅಪಾಯಕಾರಿ ಪ್ರವೃತ್ತಿಗಳ ಭಾಗವಾಗಿದೆ ಎಂದು ಅದು ಹೇಳಿದೆ. ಈ ವಿದ್ಯಮಾನಗಳು ದೇಶದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ತಳಹದಿಗೆ ಗಂಭೀರ ಅಪಾಯವನ್ನು ತಂದೊಡ್ಡುತ್ತಿವೆ ಎಂದು ಸಭೆ ಎಚ್ಚರಿಸಿದೆ.

ಮತದಾರರ ಹಕ್ಕುಗಳ ದುರುಪಯೋಗ ಮತ್ತು ಕಾನೂನು ಸವಾಲುಗಳ ಕುರಿತು ಮುಶಾವರತ್‌ನ ಪತ್ರಿಕಾ ಪ್ರಕಟಣೆಯು ಗಂಭೀರ ಆತಂಕ ವ್ಯಕ್ತಪಡಿಸಿದೆ. ಮತದಾರರ ಪಟ್ಟಿಗಳಲ್ಲಿ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಯ್ದುಕೊಳ್ಳಲು ಜಾರಿಗೆ ತಂದ ‘ಎಸ್ಐಆರ್’ ಪ್ರಕ್ರಿಯೆಯು, ಇಂದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲರಾದ ಅಂಚಿನ ಸಮುದಾಯಗಳ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲು ದುರುಪಯೋಗವಾಗುತ್ತಿದೆ ಎಂದು ಅದು ಹೇಳಿದೆ. ಭಾರತದ ಸಂವಿಧಾನವು ಖಾತ್ರಿಪಡಿಸಿದ ಪ್ರಜಾಪ್ರಭುತ್ವದ ಹಕ್ಕುಗಳ ಮೇಲೆ ನಡೆಯುತ್ತಿರುವ ಈ ವ್ಯವಸ್ಥಿತ ದಾಳಿಯನ್ನು AIMMM ತೀವ್ರವಾಗಿ ವಿರೋಧಿಸಿದೆ

“ಮತದಾನದ ಹಕ್ಕು ಕೇವಲ ಸವಲತ್ತಲ್ಲ, ಅದು ಪೌರತ್ವದ ಮೂಲಭೂತ ಅಭಿವ್ಯಕ್ತಿ. ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವು ಭಾರತೀಯ ಪ್ರಜಾಪ್ರಭುತ್ವದ ಮೇಲೆ ನಡೆಯುವ ದಾಳಿಯಾಗಿದೆ” ಎಂದು ಮುಶಾವರತ್ ಪ್ರತಿಪಾದಿಸಿದೆ. ಸಭೆಯಲ್ಲಿ 2025ರ ವಕ್ಫ್ (ತಿದ್ದುಪಡಿ) ಕಾಯಿದೆಯ ಅಪಾಯಕಾರಿ ಪರಿಣಾಮ, ಮಲೆಗಾಂವ್ ಸ್ಫೋಟಗಳ ಆರೋಪಿಗಳ ಖುಲಾಸೆ ಮತ್ತು ಮಲೆಗಾಂವ್ ಹಾಗೂ ಮುಂಬೈ ರೈಲು ಸ್ಫೋಟಗಳ ತೀರ್ಪುಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಭಿನ್ನ ಪ್ರತಿಕ್ರಿಯೆಗಳ ಬಗ್ಗೆಯೂ ಆತಂಕ ವ್ಯಕ್ತಪಡಿಸಲಾಯಿತು.

ಅಮೆರಿಕ ಹೇರಿರುವ ಸುಂಕಗಳಿಂದಾಗಿ ಭಾರತೀಯ ರಫ್ತುದಾರರು, ಕೈಗಾರಿಕೆಗಳು ಮತ್ತು ಲಕ್ಷಾಂತರ ಕಾರ್ಮಿಕರ ಬದುಕು ಅಪಾಯಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರವು ಅಪಕ್ವತೆ ಮತ್ತು ದೂರದೃಷ್ಟಿಯ ಕೊರತೆಯನ್ನು ಪ್ರದರ್ಶಿಸಿದೆ. ಇದು ನಮ್ಮ ಕಾರ್ಯತಂತ್ರದ ಪಾಲುದಾರರನ್ನು ಮತ್ತಷ್ಟು ದೂರ ಮಾಡಿ, ಜಾಗತಿಕ ವ್ಯಾಪಾರದಲ್ಲಿ ಭಾರತದ ಸ್ಥಾನವನ್ನು ಕುಗ್ಗಿಸುತ್ತಿದೆ ಎಂದು AIMIM ಉಪಾಧ್ಯಕ್ಷ ನಾವಿದ್ ಹಮೀದ್ ಅವರು ಆಳವಾದ ಕಳವಳ ವ್ಯಕ್ತಪಡಿಸಿದರು.

ಇಸ್ರೇಲಿ ಸರ್ಕಾರವು ಪ್ಯಾಲೆಸ್ತೀನ್ ಜನರ ವಿರುದ್ಧ ನಡೆಸುತ್ತಿರುವ ನರಮೇಧ, ಯುದ್ಧ ಅಪರಾಧಗಳು ಮತ್ತು ದೌರ್ಜನ್ಯಗಳ ಬಗ್ಗೆಯೂ ಎಐಎಂಎಂ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಜಿನೀವಾ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅದು ಖಂಡಿಸಿದೆ. ಗಾಝಾದಲ್ಲಿ ಕದನ ವಿರಾಮ, ಮಾನವೀಯ ನೆರವಿನ ಪ್ರವೇಶ ಮತ್ತು ದಿಗ್ಬಂಧನವನ್ನು ಕೊನೆಗೊಳಿಸಲು ತಕ್ಷಣದ ಅಂತರರಾಷ್ಟ್ರೀಯ ಹಸ್ತಕ್ಷೇಪಕ್ಕೆ ಮುಶಾವರತ್ ಕರೆ ನೀಡಿದೆ.

ಬೇಡಿಕೆಗಳು ಮತ್ತು ಭವಿಷ್ಯದ ಕಾರ್ಯತಂತ್ರ ಮುಶಾವರತ್‌ನ ಅಧ್ಯಕ್ಷ ಫಿರೋಜ್ ಅಹ್ಮದ್ ಅಡ್ವೊಕೇಟ್ ಅವರು ಸಂಸ್ಥೆಯ ಬದ್ಧತೆಗಳನ್ನು ಪುನರುಚ್ಚರಿಸಿದರು. ಮತದಾರರ ಹಕ್ಕುಗಳ ಕಸಿದುಕೊಳ್ಳುವಿಕೆ, ಕೋಮು ಹಿಂಸಾಚಾರ, ಸಾಂಸ್ಥಿಕ ಪಕ್ಷಪಾತ ಮತ್ತು ದಬ್ಬಾಳಿಕೆಗೆ ಕಾನೂನು, ರಾಜಕೀಯ ಮತ್ತು ನೈತಿಕ ಪ್ರತಿರೋಧವನ್ನು ನೀಡುವುದಾಗಿ ಅವರು ಪ್ರತಿಜ್ಞೆ ಮಾಡಿದರು. ಅಲ್ಲದೆ, ಮುಶಾವರತ್ ಶೀಘ್ರದಲ್ಲೇ ದೆಹಲಿಯಲ್ಲಿ ಈ ವಿಷಯಗಳ ಕುರಿತು ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುವುದಾಗಿ ಘೋಷಿಸಿದರು.

ಮುಶಾವರತ್‌ನ ಪ್ರಮುಖ ಬೇಡಿಕೆಗಳು ಹೀಗಿವೆ:

ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವುದು: ಅದರ ಪ್ರಸ್ತುತ ದೋಷಪೂರಿತ ರೂಪದಲ್ಲಿ ನಡೆಯುತ್ತಿರುವ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಿ, ಇದುವರೆಗೆ ಅಳಿಸಿಹಾಕಿರುವ ಹೆಸರುಗಳ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ಪರಿಶೀಲನೆ ನಡೆಸಬೇಕು.

ಅಸ್ಸಾಂ ಒಕ್ಕಲೆಬ್ಬಿಸುವಿಕೆ ನಿಲ್ಲಿಸುವುದು: ಸೂಕ್ತ ಪುನರ್ವಸತಿ ಮತ್ತು ಕಾನೂನು ಪ್ರಕ್ರಿಯೆಯಿಲ್ಲದೆ ಅಸ್ಸಾಂನಲ್ಲಿನ ಒಕ್ಕಲೆಬ್ಬಿಸುವಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಬಾಧಿತ ಸಮುದಾಯಗಳಿಗೆ ರಕ್ಷಣೆ ನೀಡಿ, ಪೌರತ್ವ ಮತ್ತು ಭೂ ದಾಖಲೆಗಳ ಪಾರದರ್ಶಕ ಪರಿಶೀಲನೆ ನಡೆಸಬೇಕು.

ಪ್ಯಾಲೆಸ್ತೀನ್‌ಗೆ ಬೆಂಬಲ: ಭಾರತ ಸರ್ಕಾರವು ಪ್ಯಾಲೆಸ್ತೀನ್ ಪರ ತನ್ನ ಐತಿಹಾಸಿಕ ನಿಲುವನ್ನು ಎತ್ತಿ ಹಿಡಿದು, ಇಸ್ರೇಲಿ ಯುದ್ಧ ಅಪರಾಧಗಳ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು.

ದೇಶೀಯ ಮತ್ತು ಜಾಗತಿಕ ಬಿಕ್ಕಟ್ಟುಗಳು ಪರಸ್ಪರ ಸಂಬಂಧ ಹೊಂದಿದ್ದು, ನ್ಯಾಯ, ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮೇಲೆ ನಡೆಯುತ್ತಿರುವ ದಾಳಿಗಳೆಂದು ನಾವೈದ್ ಹಮೀದ್ ಹೇಳಿದರು. ಈ ಸವಾಲುಗಳನ್ನು ಎದುರಿಸಲು ಮುಶಾವರತ್ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಉತ್ತರಾಖಂಡ: ರಾಮನಗರದಲ್ಲಿ ಸರ್ಕಾರಿ ಶಾಲಾ ಆವರಣದಲ್ಲಿದ್ದ ದಶಕಗಳ ಹಳೆಯ ಸಮಾಧಿ ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...