HomeUncategorizedಸಂಗೀತ ಸಂಯೋಜಕ, ಗಾಯಕ ಬಪ್ಪಿ ಲಾಹಿರಿ (69) ನಿಧನ

ಸಂಗೀತ ಸಂಯೋಜಕ, ಗಾಯಕ ಬಪ್ಪಿ ಲಾಹಿರಿ (69) ನಿಧನ

- Advertisement -
- Advertisement -

80 ಮತ್ತು 90 ರ ದಶಕಗಳಲ್ಲಿ ಭಾರತದಲ್ಲಿ ಡಿಸ್ಕೋ ಸಂಗೀತವನ್ನು ಜನಪ್ರಿಯಗೊಳಿಸಿದ ಸಂಗೀತ ಸಂಯೋಜಕ ಮತ್ತು ಗಾಯಕ ಬಪ್ಪಿ ಲಾಹಿರಿ ಅವರು ಮುಂಬೈನ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

“ಲಾಹಿರಿ ಅವರು ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರವಷ್ಟೇ ಡಿಸ್ಚಾರ್ಜ್ ಆಗಿದ್ದರು. ಆದರೆ ಮಂಗಳವಾರ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅವರ ಕುಟುಂಬವು ಮನೆಗೆ ವೈದ್ಯರನ್ನು ಕರೆದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಆಸ್ಪತ್ರೆಯಲ್ಲಿ ಅವರು ನಿಧನರಾದರು. ಅವರಿಗೆ ಹಲವಾರು ಆರೋಗ್ಯ ಸಮಸ್ಯೆಗಳಿದ್ದವು” ಎಂದು ಆಸ್ಪತ್ರೆಯ ನಿರ್ದೇಶಕರಾದ ಡಾ ದೀಪಕ್ ನಾಮಜೋಶಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ; ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪು ಧರಿಸಬಹುದು: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ಬಪ್ಪಿ ಲಾಹಿರಿ ಅವರು 1970-80 ರ ದಶಕದ ಉತ್ತರಾರ್ಧದಲ್ಲಿ ‘ಚಲ್ತೇ ಚಲ್ತೆ’, ‘ಡಿಸ್ಕೋ ಡ್ಯಾನ್ಸರ್’ ಮತ್ತು ‘ಶರಾಬಿ’ ನಂತಹ ಹಲವಾರು ಚಲನಚಿತ್ರಗಳಲ್ಲಿ ಜನಪ್ರಿಯ ಹಾಡುಗಳನ್ನು ನೀಡಿದ್ದರಯ. ಭಂಕಾಸ್ ಶೀರ್ಷಿಕೆಯ ಅವರ ಕೊನೆಯ ಬಾಲಿವುಡ್ ಹಾಡು 2020 ರ ಚಿತ್ರ ‘ಬಾಘಿ 3’ ಗಾಗಿ ಮಾಡಿದ್ದರು.

ಅವರು ತೆರೆಯ ಮೇಲೆ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದು ಸಲ್ಮಾನ್ ಖಾನ್‌ ಅವರೊಂದಿಗೆ ಬಿಗ್ ಬಾಸ್-15 ರಿಯಾಲಿಟಿ ಶೋನಲ್ಲಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಕೊರೊನಾ ಪಾಸಿಟಿವ್‌ ಆಗಿ, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ನಂತರ ಸೋಂಕಿನಿಂದ ಅವರು ಚೇತರಿಸಿಕೊಂಡಿದ್ದರು.

ಇದನ್ನೂ ಓದಿ: ಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...