Homeಕರ್ನಾಟಕ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

- Advertisement -
- Advertisement -

’ಬಲಿತವರು ದಲಿತರನ್ನು ತಾವು ಮೇಲೆತ್ತುತ್ತಿದ್ದೇವೆ ಎಂದು ಹೇಳಿ ಅವರ ಮನೆಗೆ ಹೋಗಿ ಊಟ ಮಾಡಿದರೆ ದಲಿತರ ಉದ್ದಾರ ಆಗುವುದಿಲ್ಲ’ ಎಂಬ ಅರ್ಥದಲ್ಲಿ ಮಾತನಾಡಿದ್ದ ಸಂಗೀತ ನಿರ್ದೇಶಕ ಡಾ.ಹಂಸಲೇಖ ಅವರ ಮೇಲೆ  ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಮಾನಸಿಕ ದಾಳಿ ನಡೆಸಿದ್ದರು. ಇದೇ ವೇಳೆ ಶನಿವಾರ (ನ.28) ನಡೆದ ಝೀ ಕನ್ನಡ ಚಾನೆಲ್‌ನ ಸರಿಗಮಪ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಸಾಮಾಜಿಕ ಜಾಲತಾಣಾದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಹಿತಿ ಹಂಸಲೇಖ ಅವರನ್ನು ಚಾನೆಲ್ ಕಾರ್ಯಕ್ರಮದಿಂದ ಹೊರಗಿಟ್ಟಿದೆ ಎಂದು ಖಂಡನೆ ವ್ಯಕ್ತವಾಗಿತ್ತು.

ರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ #boycottzeekannadatv ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅಭಿಯಾನ ಆರಂಭಿಸಲಾಗಿತ್ತು. ಇದಕ್ಕೆ ತ್ವರಿತವಾಗಿ ಸ್ಪಂಧಿಸಿರುವ ಝೀ ಕನ್ನಡದ ಕ್ರಿಯೇಟಿವ್ ಹೆಡ್ ರಾಘವೇಂದ್ರ ಹುಣಸೂರು, ಮುಂದಿನ ವಾರದಿಂದ ಮಹಾಗುರುಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದಿದ್ದಾರೆ.

ನಿರ್ದೇಶಕ ಡಾ.ಹಂಸಲೇಖ ಅವರು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ತಾವು ಮತ್ತೆ ಸರಿಗಮಪ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. “ಡಿಯರ್ ರಘು, ನನ್ನ ಆರೋಗ್ಯ ಸ್ಥಿರವಾಗಿದೆ. ಸರಿಗಮಪ ನನ್ನ ಪ್ರೀತಿಯ ಭೂಮಿಕೆ. ಅದು ಮನಸ್ಸು ಮನಸ್ಸುಗಳನ್ನು ನೇಯುವ ವೇದಿಕೆ. ಸುಧಾರಣೆಗಳ ಸುಂದರ ಕಥೆಗಳನ್ನು ಓದಿಕೊಳ್ಳುತ್ತಿದ್ದೇನೆ. ಬೇಗ ಬಂದು ಸೇರುತ್ತೇನೆ. ಸಂಗೀತ ಕದನಗಳನ್ನು ತಪ್ಪಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ

ಸಾಮಾಜಿಕ ಜಾಲತಾಣಗಳಲ್ಲಿ ಜನಪರ ಹೋರಾಟಗಾರರು ಝೀ ಕನ್ನಡ ಚಾನೆಲ್ ಮತ್ತು ರಾಘವೇಂದ್ರ ಹುಣಸೂರ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

“ನಾದಬ್ರಹ್ಮ ಇಲ್ಲದೇ ಹೋದರೆ ನಾವ್ಯಾರೂ ಝೀ ನೋಡುವುದಿಲ್ಲ ಎಂಬ ಟ್ರೋಲ್ ಮಾಡಬೇಕು. ಮೂರು ಪರ್ಸೆಂಟ್ ಬ್ರಾಹ್ಮಣರ ಮಕ್ಕಳು ಹಾಡೋದನ್ನ ನಾವಿಲ್ಲಿ ತೊಂಬತ್ತೇಳು ಪರ್ಸೆಂಟ್ ಜನ ಕೆಲಸ ಬಿಟ್ಟು ಗಂಟೆಗಟ್ಟಲೆ ಯಾಕೆ ನೋಡಿ, ಚಪ್ಪಾಳೆ ಹೊಡೆಯಬೇಕು..? ನಮ್ಮ ನಾದಬ್ರಹ್ಮ ಬಂದ ಮೇಲೆ ನಮ್ಮ ಹುಡುಗರು ಸಹ ವೇದಿಕೆಯಲ್ಲಿ ಹಾಡುತ್ತಿದ್ದರು, ಹನುಮಂತನಂತಹ ಹುಡುಗರು ಬ್ರಾಹ್ಮಣರನ್ನು ಮೀರಿಸಿ ಗೆದ್ದರು. ಈಗ ನಮ್ಮ ನಾದಬ್ರಹ್ಮ ಅವರೇ ಅಲ್ಲಿಲ್ಲ ಎಂದ ಮೇಲೆ ನಾವು ಝೀ ನೋಡುವುದನ್ನೇ ಬಾಯ್ಕಾಟ್ ಮಾಡೋಣ…ನೋಡೋಣ ಕೇವಲ ಮೂರು ಪರ್ಸೆಂಟ್ ಬ್ರಾಹ್ಮಣರು ಅದ್ಹೇಗೆ ಅವರಿಗೆ ಟಿ.ಆರ್.ಪಿ ಕೊಡುತ್ತಾರೆ! ಮಹಾನಾಯಕ ಸೀರಿಯಲ್ ನಿಂದಾಗಿ ಇಂದು ಝೀ ಟಿವಿಯ ಟಿಆರ್ಪಿ ಏರಿದೆ.‌ ಊರೂರಲ್ಲೂ ಸ್ವಪ್ರೇರಣೆಯಿಂದ ನಮ್ಮ ಜನ ಫ್ಲೆಕ್ಸ್ ಗಳನ್ನು ಹಾಕಿ, ಮೆರವಣಿಗೆ ಮಾಡಿ, ಬಿಟ್ಟಿ ಪ್ರಚಾರ ನೀಡಿ ಝೀ ಟಿವಿ ಬೆಳೆಸಿದ್ದಾರೆ. ಅದನ್ನು ಝೀ ಟಿವಿಗೆ ಅರ್ಥ ಮಾಡಿಸೋಣ. ನಾದಬ್ರಹ್ಮನಿಲ್ಲದಝೀಗೆ ಹೇಳಿ ಧಿಕ್ಕಾರ” ಎಂದು ’ಮೊದಲು ಮಾನವನಾಗು’ ಎಂಬ ಫೇಸ್‌ಬುಕ್‌ ಅಕೌಂಟ್‌ನಿಂದ ಪೋಸ್ಟ್ ಮಾಡಲಾಗಿತ್ತು.

ಹಲವು ಮಂದಿ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ರಾಘವೇಂದ್ರ ಹುಣಸೂರು ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ “ಮಹಾಗುರುಗಳು ತಮ್ಮ ಆರೋಗ್ಯ ಮತ್ತು ವೈಯಕ್ತಿಕ ಕಾರಣಗಳಿಂದ ಒಂದು ವಾರ ಹೊರಗುಳಿಯಲು ನಿರ್ಧರಿಸಿದರು. ನಾವು ಅವರ ನಿರ್ಧಾರವನ್ನು ಗೌರವಿಸಿ, ವಿರಾಮ ತೆಗೆದುಕೊಳ್ಳಲು ಒಪ್ಪಿದ್ದೇವೆ. ಮುಂದಿನ ವಾರದಿಂದ ಎಂದಿನಂತೆ ಗುರುಗಳು ನಮ್ಮೊಂದಿಗಿರುತ್ತಾರೆ” ಎಂದು ಹೇಳಿಕೆ ನೀಡಿದ್ದರು.

ಖ್ಯಾತ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಪರವಾಗಿ ಅವರ ಮೇಲೆ ನಡೆಯುತ್ತಿರುವ ಮಾನಸಿಕ ದಾಳಿಗಳನ್ನು ಖಂಡಿಸಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ಶುಕ್ರವಾರ ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ಯು ಈ ಜಾಥಾವನ್ನು ಆಯೋಜಿಸಿತ್ತು. ಜಾಥಾದಲ್ಲಿ ಹಲವಾರು ಸಾಹಿತಿಗಳು, ಹೋರಾಟಗಾರರು, ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.


ಇದನ್ನೂ ಓದಿ: ಇದು ಆಹಾರದ ಪ್ರಶ್ನೆಯಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ: ಹಂಸಲೇಖರ ಪರ ನಿಂತ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Naadabrahma Games Lekha never commit any mistake it is the Illusion of the Interpreters it is really very disastrous development. Let our Literate argue in this matter irrespective of caste and creed.

  2. The hashtag shows the low mentality of people. Are they don’t understand other side people can also start against taking Hamsalekha…? But they don’t hurt the interest of a channel or a musician. I think he learnt the lesson.

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...