Homeಕರ್ನಾಟಕಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಬಸನಗೌಡ ತುರುವಿಹಾಳ ತುಂಗಭದ್ರಾ ಕಾಲುವೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ

- Advertisement -
- Advertisement -

ರಾಯಚೂನರಿನ ಮಸ್ಕಿಯ ಬಿಜೆಪಿ ಮುಖಂಡ ಬಸವನಗೌಡ ತುರುವಿನಹಾಳ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಲಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಸಿದ್ದರಾಮಯ್ಯನವರೇ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್‌ನತ್ತ ವಲಸೆ ಹೊರಟಿರುವ ಬಸನಗೌಡ ತುರುವಿಹಾಳ ತುಂಗಭದ್ರಾ ಕಾಲುವೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

2019 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ 213 ಮತಗಳ ಅಂತರದಿಂದ ಸೋತಿದ್ದರು. ಮುಂದಿನ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಸಿಗುವುದಿಲ್ಲ ಎನ್ನುವ ಸುಳಿವಿನಿಂದ ಬಿಜೆಪಿ ಪಕ್ಷ ಬಿಡಲು ಸಜ್ಜಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಅಧಿಕೃಕವಾಗಿ ಕಾಂಗ್ರೆಸ್‌ ಸೇರಲಿದ್ದು, ಬೆಂಬಲಿಗರು 50 ಕ್ಕೂ ಹೆಚ್ಚು ವಾಹನಗಳಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ತೆರಳಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...