Homeಮುಖಪುಟಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ...

ಮದ್ರಸಾಗಳಿಗೆ ಧನ ಸಹಾಯ ನಿಲ್ಲಿಸುವಂತೆ ಮಕ್ಕಳ ಹಕ್ಕುಗಳ ಆಯೋಗ ಪತ್ರ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆಗಳು

- Advertisement -
- Advertisement -

ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ.

ಎನ್‌ಸಿಪಿಸಿಆರ್‌ ಮದ್ರಸಾ ಮಂಡಳಿಗಳನ್ನು ಸ್ಥಗಿತಗೊಳಿಸುವಂತೆ ಮತ್ತು ಮುಚ್ಚುವಂತೆಯೂ ಶಿಫಾರಸು ಮಾಡಿದೆ.

ದೇಶದ ವಿವಿಧ ಪ್ರಮುಖ ಮುಸ್ಲಿಂ ಸಂಘಟನೆಗಳು ಎನ್‌ಸಿಪಿಸಿಆರ್‌ ಶಿಫಾರಸನ್ನು ಕಟುವಾಗಿ ವಿರೋಧಿಸಿವೆ. ವಿಶೇಷವಾಗಿ ಕೇರಳದ ಪ್ರಭಾವಿ ಮುಸ್ಲಿಂ ಸಂಘಟನೆಗಳಾದ ಸಮಸ್ತ ಎಪಿ ಮತ್ತು ಇಕೆ ವಿಭಾಗ ವಿರೋಧ ವ್ಯಕ್ತಪಡಿಸಿವೆ.

ಕೇರಳದ ಇಸ್ಲಾಮಿಕ್ ವಿದ್ವಾಂಸರ ಅತಿದೊಡ್ಡ ಸಂಘಟನೆಯಾದ ಸಮಸ್ತ ಕೇರಳ ಜಂ-ಇಯತುಲ್ ಉಲಮಾ (ಸಮಸ್ತ) ಸದಸ್ಯರು ಎನ್‌ಸಿಪಿಸಿಆರ್ ಶಿಫಾರಸು ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಕಾರ್ಯಸೂಚಿಯ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಮಸ್ತ ಮುಶಾವರದ ಸದಸ್ಯ ಉಮರ್ ಫೈಝಿ ಮುಕ್ಕಂ ಮಾತನಾಡಿ, ಈ ಶಿಫಾರಸ್ಸು ಮುಸ್ಲಿಮರನ್ನು ಗುರಿಯಾಗಿಸುವ ದೊಡ್ಡ ಕಾರ್ಯಸೂಚಿಯ ಭಾಗವಾಗಿದೆ ಎಂದಿದ್ದಾರೆ. ಜಮಾತ್-ಎ-ಇಸ್ಲಾಮಿ ಹಿಂದ್‌ನ ಕೇರಳ ರಾಜ್ಯ ಅಮೀರ್ ಪಿ ಮುಜೀಬ್ ರೆಹಮಾನ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಸಿಪಿಎಂ ಮತ್ತು ಕಾಂಗ್ರೆಸ್ ನಾಯಕರು ಕೂಡ ಎನ್‌ಸಿಪಿಸಿಆರ್‌ ಪತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳದ ಮದ್ರಸಾಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಏಕೆಂದರೆ ರಾಜ್ಯ ಸರ್ಕಾರವು ಇಲ್ಲಿನ ಮದ್ರಸಗಳಿಗೆ ಯಾವುದೇ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಸಮಸ್ತದ ಯುವ ಘಟಕವಾದ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) ರಾಜ್ಯ ಕಾರ್ಯದರ್ಶಿ ಅಬ್ದುಸ್ಸಮದ್ ಪೂಕ್ಕೊಟೂರ್ ಹೇಳಿದ್ದಾರೆ.

ಎನ್‌ಸಿಪಿಸಿಆರ್‌ ಶಿಫಾರಸು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಅದನ್ನು ವಾಪಸ್ ಪಡೆಯಬೇಕು ಎಂದು ಸಮಸ್ತ ಎಪಿ ವಿಭಾಗದ ಮದ್ರಸಾ ಅಧ್ಯಾಪಕರ ಸಂಘಟನೆ ಸುನ್ನಿ ಜಂ-ಇಯತುಲ್ ಮುಅಲ್ಲಿಮೀನ್‌ (ಎಸ್‌ಜೆಎಂ) ಕೇರಳ ಮತ್ತು ಕರ್ನಾಟಕದ ರಾಜ್ಯ ಘಟಕ ಹೇಳಿದೆ.

ಎನ್‌ಸಿಪಿಸಿಆರ್‌ ಶಿಫಾರಸು ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗದ ಮದ್ರಸಾಗಳಿಗೆ ಸದ್ಯಕ್ಕೆ ಪರಿಣಾಮ ಬೀರುವುದಿಲ್ಲ. ಈ ಶಿಫಾರಸನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡರೆ ಉತ್ತರ ಭಾರತದ ಮದ್ರಸಾಗಳಿಗೆ ದೊಡ್ಡ ಮಟ್ಟಿನ ಪರಿಣಾಮ ಬೀರಬಹುದು. ಕರ್ನಾಟಕದಲ್ಲಿ ಉತ್ತರ ಕರ್ನಾಟಕದ ಮದ್ರಸಾಗಳಿಗೂ ಸಮಸ್ಯೆ ಆಗಬಹುದು. ಮುಂದೊಂದು ದಿನ ಕೇರಳ ಮತ್ತು ಕರ್ನಾಟಕ ಕರಾವಳಿಯ ಮದ್ರಸಾಗಳಿಗೂ ಸಮಸ್ಯೆ ಉಂಟು ಮಾಡಬಹುದು ಎಂಬುವುದು ಕೇರಳದ ಮುಸ್ಲಿಂ ಸಂಘಟನೆಗಳ ವಾದ.

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಮದ್ರಸಾಗಳೆಂದರೆ ಬೆಳಿಗ್ಗೆ ಮತ್ತು ಸಂಜೆ ಒಂದೆರಡು ಗಂಟೆಗಳ ಕಾಲ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರಗಳಾಗಿವೆ. ಮದ್ರಸಾದ ಅವಧಿಯ ಬಳಿಕ ಮಕ್ಕಳು ಶಾಲೆಗೆ ಹೋಗಿ ಶಿಕ್ಷಣ ಪಡೆಯುತ್ತಾರೆ. ಹತ್ತನೇ ತರಗತಿ ಬಳಿಕ ವಸತಿ ಸಹಿತ ಧಾರ್ಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು, ಅಲ್ಲೇ ಪಿಯುಸಿ, ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂಲಕ ಧಾರ್ಮಿಕ ಶಿಕ್ಷಣ ಕೇಂದ್ರಗಳು ಸಮನ್ವಯ ಶಿಕ್ಷಣ ಕೇಂದ್ರಗಳಾಗಿ ಗುರುತಿಸಿಕೊಂಡಿವೆ.

ಎನ್‌ಸಿಪಿಸಿಆರ್‌ ಪತ್ರದಲ್ಲಿ ಏನಿದೆ? 

“ಮುಸ್ಲಿಮರು ಅಥವಾ ಇನ್ಯಾರೆ ಆದರೂ, ಅವರೆಲ್ಲರೂ 2009ರ ಶಿಕ್ಷಣದ ಹಕ್ಕು ಕಾಯ್ದೆಯಡಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರವೇ ದಾಖಲಾಗಿರಬೇಕೆಂದು” ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಪತ್ರದಲ್ಲಿ ತಿಳಿಸಿದ್ದಾರೆ.

“ಆರ್‌ಟಿಇ ಕಾಯ್ದೆ-2009ರಿಂದ ಧಾರ್ಮಿಕ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿರುವುದು, ಕೇವಲ ಧಾರ್ಮಿಕ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹಾಜರಾಗುತ್ತಿರುವ ಮಕ್ಕಳನ್ನು ಸಾಮಾನ್ಯ ಶಿಕ್ಷಣ ವ್ಯವಸ್ಥೆಯಿಂದ ಹೊರಗಿಟ್ಟಂತಾಗಿದೆ. ಮಕ್ಕಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರೂಪಿಸಲಾದ ಕಾಯ್ದೆಯು ತಪ್ಪು ವ್ಯಾಖ್ಯಾನದಿಂದಾಗಿ ಅವಕಾಶ ವಂಚಿತರಾಗುವ ಹಾಗೂ ತಾರತಮ್ಯದ ಹೊಸ ಪದರಗಳು ಸೃಷ್ಟಿಯಾಗಿವೆ” ಎಂದು ಅವರು ಹೇಳಿದ್ದಾರೆ.

‘ಧರ್ಮದ ಪಾಲಕರು ಅಥವಾ ಹಕ್ಕುಗಳ ದಮನಕಾರರು : ಮಕ್ಕಳ ಸಾಂವಿಧಾನಿಕ ಹಕ್ಕುಗಳ ವರ್ಸಸ್ ಮದ್ರಸಾಗಳು ’ಎಂಬ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ವರದಿಯನ್ನು ಆಧರಿಸಿ ಕಾನೂಂಗೊ ಅವರು ಈ ಪತ್ರವನ್ನು ಬರೆದಿದ್ದಾರೆ.

ಇದನ್ನೂ ಓದಿ : ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...