Homeಮುಖಪುಟಕೊರೊನಾದಿಂದ ಸತ್ತವರ ಸಮಾಧಿ ಮಾಡಬಾರದೆಂಬ ಅರ್ಜಿಗೆ ಸುಪ್ರೀಂನಲ್ಲಿ ತಕರಾರು

ಕೊರೊನಾದಿಂದ ಸತ್ತವರ ಸಮಾಧಿ ಮಾಡಬಾರದೆಂಬ ಅರ್ಜಿಗೆ ಸುಪ್ರೀಂನಲ್ಲಿ ತಕರಾರು

- Advertisement -
- Advertisement -

ಕೊರೊನಾ ವೈರಸ್ ಗೆ ಬಲಿಯಾದ ಜನರನ್ನು ತನ್ನ ನಿವಾಸದ ಬಳಿಯಿರುವ ಸ್ಮಶಾನದಲ್ಲಿ ಸಮಾಧಿ ಮಾಡುವುದನ್ನು ವಿರೋಧಿಸಿ ಮುಂಬೈ ನಿವಾಸಿ ಹಾಕಿದ್ದ ಮನವಿಯಲ್ಲಿ ಮಧ್ಯಪ್ರವೇಶಿಸಲು ಕೋರಿ ಜಮಿಯತ್ ಉಲಾಮಾ-ಇ-ಹಿಂದ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ತನ್ನ ಮನೆಯ ಪಕ್ಕದಲ್ಲಿರುವ ಸ್ಮಶಾನದಲ್ಲಿ ಕೊರೊನಾ ವೈರಸಿನಿಂದ ಮೃತಪಟ್ಟವರನ್ನು ಸಮಾಧಿ ಮಾಡಬಾರದು ಎಂದು ಕೋರಿ ಬಾಂಬೆ ಹೈಕೋರ್ಟಿಗೆ ಸ್ಥಳೀಯ ನಿವಾಸಿ ಪ್ರದೀಪ್ ಘಾಂಡಿ ಅರ್ಜಿ ಸಲ್ಲಿಸಿದ್ದರು. ಇದನ್ನು ಏಪ್ರಿಲ್ 27 ರಂದು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ಪ್ರದೀಪ್  ಸುಪ್ರೀಂಕೋರ್ಟಿಗೆ ತೆರಳಿದ್ದರು. ಅವರು ಬಾಂದ್ರಾ ವೆಸ್ಟ್ ನ ಸ್ಮಶಾನದಲ್ಲಿ ಕೊರೊನಾ ರೋಗಿಗಳ ಸಮಾಧಿ ಮಾಡುವುದರಿಂದ ಪಕ್ಕದ ಪ್ರದೇಶಗಳಿಗೂ ಹರಡುತ್ತದೆ ಎಂದು ವಾದಿಸಿದ್ದರು.

ಮೇ 4 ರಂದು ಹೈಕೋರ್ಟ್ ಆದೇಶದ ವಿರುದ್ಧ ಪ್ರದೀಪ್ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಲಾಗಿದೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿರುವ ಜಮಿಯತ್ ಉಲಾಮಾ-ಇ-ಹಿಂದ್ ಕೊರೊನಾ ಸೋಂಕಿತರ ಶವಗಳನ್ನು ಹೂಳುವುದರಿಂದ ವೈರಸ್ ಹರಡುತ್ತದೆ ಎಂಬ ಆತಂಕವು ಆಧಾರರಹಿತವಾಗಿದೆ. ಸಮಾಧಿ ಮಾಡುವುದರಿಂದ ಯಾವುದೇ ಅಪಾಯವಿಲ್ಲ ಎಂದು ಹೇಳಿದೆ.

ಮೃತ ದೇಹಗಳನ್ನು ಸಮಾಧಿ ಮಾಡುವುದು ಇಸ್ಲಾಂ ಧರ್ಮದ ಆಚರಣೆಯಾಗಿದೆ. ಅದರಂತೆ ಕ್ರಿಶ್ಚಿಯನ್ ಧರ್ಮದಂತೆ ಇತರ ಧರ್ಮಗಳಲ್ಲೂ ಇದನ್ನು ಆಚರಿಸಲಾಗುತ್ತದೆ. ಇದು ಸಂವಿಧಾನ ನೀಡುವ ಹಕ್ಕಾಗಿದ್ದು, ಸಂವಿಧಾನದ 25 ನೇ ಪರಿಚ್ಛೇದದ ಅಡಿಯಲ್ಲಿ ಬರುವ ಧರ್ಮವನ್ನು ಆಚರಿಸುವ ಹಕ್ಕಿನ ಭಾಗವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೊರನಾದಿಂದ ಸಾವನ್ನಪ್ಪಿದ ವ್ಯಕ್ತಿಗಳ ದೇಹಗಳಿಂದ ಸೋಂಕು ಹರಡುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಮನವಿಯಲ್ಲಿ ವಾದಿಸಲಾಗಿದೆ. ಅಲ್ಲದೆ ಕೊರೊನಾ ಸೋಂಕಿತ ವ್ಯಕ್ತಿಗಳ ಸಮಾಧಿ ಮಾಡಿರುವುದರಿಂದ ಅರ್ಜಿದಾರರ ನಿವಾಸವನ್ನು ಒಳಗೊಂಡಿರುವ ನೆರೆಯ ಪ್ರದೇಶಗಳಲ್ಲಿ ವೈರಲ್ ಸೋಂಕಿನ ಹರಡಿದೆ ಎಂಬುದಕ್ಕೆ ಕೂಡಾ ಯಾವುದೇ ಪುರಾವೆಗಳಿಲ್ಲ ಎಂದು ಜಮಿಯತ್ ಉಲಾಮಾ-ಇ-ಹಿಂದ್ ತನ್ನ ಮನವಿಯಲ್ಲಿ ತಿಳಿಸಿದೆ.

ಜಮಿಯತ್ ಉಲಾಮಾ-ಇ-ಹಿಂದ್ ಸಾಂಕ್ರಾಮಿಕ ಕಾಯಿಲೆಗೆ ಬಲಿಯಾದ ವ್ಯಕ್ತಿಗಳನ್ನು ದಹನ ಮಾಡಬೇಕು ಎಂಬುದು ಕಟ್ಟುಕತೆಯಲ್ಲದೆ ಮತ್ತೇನಲ್ಲ ಎಂದು ವಾದಿಸಿದೆ.


ಇದನ್ನೂ ಓದಿ: ಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ಏನಾಗಿದೆ  ನನ್ನ ಮಂಗಳೂರಿಗೆ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...