Homeಮುಖಪುಟಇಸ್ರೇಲ್-ಹಮಾಸ್ ಸಂಘರ್ಷದ ಪರಿಣಾಮ ಮುಸ್ಲಿಂ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಅಮೆರಿಕ ವ್ಯಕ್ತಿ

ಇಸ್ರೇಲ್-ಹಮಾಸ್ ಸಂಘರ್ಷದ ಪರಿಣಾಮ ಮುಸ್ಲಿಂ ಬಾಲಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಅಮೆರಿಕ ವ್ಯಕ್ತಿ

- Advertisement -
- Advertisement -

ಇಸ್ರೇಲ್ ಹಾಗೂ ಹಮಾಸ್​ ನಡುವಿನ ಸಂಘರ್ಷದ ಪರಿಣಾಮ ವ್ಯಕ್ತಿಯೊಬ್ಬರು ಮುಸ್ಲಿಂ ಬಾಲಕನನ್ನು 26 ಬಾರಿ ತಿವಿದು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

6 ವರ್ಷದ ಬಾಲಕನಿಗೆ 26 ಬಾರಿ ಇರಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ, ಆತನ ತಾಯಿ (32) ಮೇಲೂ ಕೂಡ ಹಲ್ಲೆ ನಡೆಸಲಾಗಿದೆ, ಬದುಕುಳಿಯುವ ನಿರೀಕ್ಷೆಯಿದೆ ಎಂದು ವಿಲ್ ಕೌಂಟಿ ಶೆರಿಫ್ ಕಚೇರಿಯ ಹೇಳಿಕೆ ತಿಳಿಸಿದೆ.

71 ವರ್ಷದ ಇಲಿನಾಯ್ಸ್ ನಗರದ ವ್ಯಕ್ತಿಯ ಮೇಲೆ ಭಾನುವಾರ ದ್ವೇಷದ ಅಪರಾಧದ ಆರೋಪ ಹೊರಿಸಲಾಯಿತು. ಇಸ್ಲಾಮಿಕ್ ನಂಬಿಕೆ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧಕ್ಕೆ ಪ್ರತಿಕ್ರಿಯೆಯಾಗಿ ಈ ಘಟನೆ ನಡೆದಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಬಾಲಕನ ಮನೆಯಲ್ಲೇ ಈ ದಾಳಿ ನಡೆದಿದ್ದು, ಎದೆ, ತಲೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿಯಲಾಗಿತ್ತು. ಶವ ಪರೀಕ್ಷೆಯ ಸಮಯದಲ್ಲಿ ಬಾಲಕನ ಹೊಟ್ಟೆಯಿಂದ 7 ಇಂಚಿನ ಬ್ಲೇಡ್ ಮಾದರಿಯ ಚಾಕುವನ್ನು ಹೊರ ತೆಗೆಯಲಾಗಿದೆ.

ಪೊಲೀಸರು ಆಗಮಿಸಿದಾಗ ಮಹಿಳೆಯ ಹಣೆಗೆ ಗಂಭೀರವಾಗಿ ಗಾಯವಾಗಿತ್ತು, ಪ್ರಕರಣ ದಾಖಲಿಸುವ ಮೊದಲು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಬೆಂಬಲ ಸೂಚಿಸಿದ್ದಾರೆ. ಗಾಜಾದ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಹಮಾಸ್​ನ ಇಸ್ರೇಲ್​ ಮೇಲಿನ ದಾಳಿಯ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ದಾಳಿ ನಡೆಸುತ್ತಿದೆ. ಗಾಜಾದಲ್ಲಿರುವ ಜನರಿಗೆ ದಕ್ಷಿಣ ಭಾಗಕ್ಕೆ ತೆರಳುವಂತೆ 3 ಗಂಟೆಗಳ ಗಡುವು ನೀಡಿತ್ತು. ಗಡುವು ಮುಕ್ತಾಯವಾಗುತ್ತಿದ್ದಂತೆ 1 ಮಿಲಿಯನ್ ಮಂದಿ ಗಾಜಾದಿಂದ ಪಲಾಯನ ಮಾಡಿದ್ದಾರೆ.

ತಾವು ವಾಯು, ಸಮುದ್ರ, ಭೂಮಿ ಮೂಲಕ ದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಕೆಯನ್ನು ನೀಡಿತ್ತು. ಈ ಕಾರಿಡಾರ್​ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಾವುದೇ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿತ್ತು.

ಗಾಜಾ ನಗರ ಹಾಗೂ ಉತ್ತರ ಗಾಜಾದ ಜನರಿಗೆ ದಕ್ಷಿಣ ಭಾಗಕ್ಕೆ ತೆರಳಲು ಮುಂಚೆಯೇ ಎಚ್ಚರಿಕೆ ನೀಡಲಾಗಿದೆ ಎಂದು ಸೇನೆ ಹೇಳಿದೆ. ಗಾಜಾದಲ್ಲಿ 2.3 ಮಿಲಿಯನ್ ನಾಗರಿಕರು ಆಹಾರ, ನೀರು, ಭದ್ರತೆ ವಿಚಾರದಲ್ಲಿ ಹೋರಾಟವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...