Homeಮುಖಪುಟಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ಉತ್ತರಪ್ರದೇಶ: ಮುಸ್ಲಿಂ ಬಾಲಕನಿಗೆ ಕಪಾಳಮೋಕ್ಷ ಪ್ರಕರಣ; ಸರಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

- Advertisement -
- Advertisement -

ಶಿಕ್ಷಕಿಯೋರ್ವರು ಮುಸ್ಲಿಂ ವಿದ್ಯಾರ್ಥಿಗೆ ಕಾಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಆದೇಶ ಪಾಲಿಸದ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್‌ ತರಾಟಗೆ ತೆಗೆದುಕೊಂಡಿದೆ.

ಸಂತ್ರಸ್ತ ವಿದ್ಯಾರ್ಥಿ ಮತ್ತು ಕಪಾಳಕ್ಕೆ ಹೊಡಿದಿದ್ದ ಸಹಪಾಠಿಗೆ ಆಪ್ತ ಸಮಾಲೋಚನೆ ನಡೆಸಲು ಏಜೆನ್ಸಿಯನ್ನು ನೇಮಿಸುವಂತೆ ಸುಪ್ರೀಂಕೋರ್ಟ್‌ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿತ್ತು. ಆದರೆ ಆದೇಶವನ್ನು ಸರ್ಕಾರ ಪಾಲಿಸಿಲ್ಲ.

ಆದೇಶ ಪಾಲನೆಯಲ್ಲಿ ಲೋಪವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಅಭಯ್‌ ಎಸ್‌ ಓಕಾ ಮತ್ತು ಪಂಕಜ್‌ ಮಿತ್ತಲ್‌ ಅವರಿದ್ದ ಪೀಠ, ನ್ಯಾಯಾಲಯ ಕಠಿಣ ಕ್ರಮ ಕೈಗೊಳ್ಳಬಾರದು ಎಂದಾದರೆ ಮುಂದಿನ ವಿಚಾರಣೆಗೆ ‌ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಿದೆ.

ಸಂತ್ರಸ್ತ ವಿದ್ಯಾರ್ಥಿ ಮತ್ತು ಸಹಪಾಠಿಗಳಿಗೆ ಆಪ್ತ ಸಮಾಲೋಚನೆ ಒದಗಿಸುವ ಕಾರ್ಯ ವಿಧಾನವನ್ನು ರೂಪಿಸಲು ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸ್‌ (ಟಿಐಎಸ್‌ಎಸ್‌)ನ್ನು ಕೋರ್ಟ್‌ ಇದೇ ವೇಳೆ ನೇಮಿಸಿದೆ.

ಉತ್ತರಪ್ರದೇಶ ಸರ್ಕಾರ ಮತ್ತು ನಿರ್ದಿಷ್ಟವಾಗಿ ಶಿಕ್ಷಣ ಇಲಾಖೆಯು ಈ ಕುರಿತು ನ್ಯಾಯಾಲಯ ಕಾಲಕಾಲಕ್ಕೆ ಹೊರಡಿಸಿದ ವಿವಿಧ ಆದೇಶಗಳನ್ನು ಪಾಲಿಸಿಲ್ಲ. ಸಂತ್ರಸ್ತ ಮಗು ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಇತರ ಮಕ್ಕಳಿಗೆ ಸರಿಯಾದ ಕೌನ್ಸೆಲಿಂಗ್ ನಡೆಸಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ನಾವು ಮುಂಬೈ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ಸ್ ಸಂಸ್ಥೆಯನ್ನು ನೇಮಿಸಿದ್ದೇವೆ.  ಟಿಐಎಸ್‌ಎಸ್‌ನ ಮೇಲ್ವಿಚಾರಣೆಯಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ಸಂಸ್ಥೆಗೆ ಎಲ್ಲಾ ಮೂಲಸೌಕರ್ಯ, ನೆರವು ಮತ್ತು ಬೆಂಬಲವನ್ನು ಒದಗಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಮತ್ತು ಮುಂದಿನ ವಿಚಾರಣೆಯ ಡಿ. 11 ರ ಮೊದಲು ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.

ನ್ಯಾಯಾಲಯದ ಯಾವುದೇ ಬಲವಾದ ಕ್ರಮವನ್ನು ತಪ್ಪಿಸಲು ನಾವು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ವೈಯಕ್ತಿಕವಾಗಿ ಹಾಜರಾಗುವಂತೆ ನಿರ್ದೇಶಿಸುತ್ತೇವೆ. ಅವರು ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಾರೆ ಮತ್ತು ನಿರ್ದೇಶನಗಳನ್ನು ಅನುಸರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಪೀಠ ಹೇಳಿದೆ.

ಈ ಪ್ರಕರಣದ ತ್ವರಿತ ವಿಚಾರಣೆಗೆ ಮಹಾತ್ಮಾ ಗಾಂಧೀಜಿ ಅವರ ಮರಿಮೊಮ್ಮಗ ತುಷಾರ್‌ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.

ಮುಸ್ಲಿಂ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಸೂಚಿಸಿದ್ದರು. ತ್ಯಾಗಿ 7 ವರ್ಷದ ಬಾಲಕನಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದು, ಕೋಮುವಾದಿ ಟೀಕೆ ಮಾಡಿದ್ದು ಬಾಲಕನು ಕಣ್ಣೀರು ಸುರಿಸುತ್ತಾ ಅಸಹಾಯಕರಾಗಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು. ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಮೂಡಿಸಿತ್ತು. ಬಳಿಕ ಶಿಕ್ಷಕಿಯ ವಿರುದ್ಧ ಮುಜಪ್ಫರನಗರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...