Homeಮುಖಪುಟಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

ಧರ್ಮದ ಕಾರಣಕ್ಕೆ ಮುಸ್ಲಿಂ ಡೆಲಿವರಿ ಬಾಯ್‌ಗೆ ಹಲ್ಲೆ : ಆರೋಪ

- Advertisement -
- Advertisement -

ಮುಸ್ಲಿಂ ಎಂಬ ಕಾರಣಕ್ಕೆ ಝೊಮ್ಯಾಟೋ ಡೆಲಿವರಿ ಬಾಯ್‌ಗೆ ನಾಲ್ವರು ಥಳಿಸಿರುವ ಆರೋಪ ಉತ್ತರ ಪ್ರದೇಶದ ಲಕ್ನೋದಿಂದ ಕೇಳಿ ಬಂದಿದೆ.

ಅಸ್ಲಂ ಹಲ್ಲೆಗೊಳಗಾದ ಯುವಕ. ಈತ ರಾತ್ರಿ ಹೊತ್ತು ಆಹಾರ ತಲುಪಿಸುವ ಕೆಲಸ ಮಾಡುತ್ತಿದ್ದ. ಆಗಸ್ಟ್ 20ರಂದು ರಾತ್ರಿ ಬಂದ ಆರ್ಡರ್ ಅನುಸರಿಸಿ ಆಹಾರ ಕೊಂಡೊಯ್ದಾಗ ನಾಲ್ವರು ವ್ಯಕ್ತಿಗಳು ಅಸ್ಲಂ ಮೇಲೆ ಹಲ್ಲೆ ನಡೆಸಿ, ಮೈಮೇಲೆ ಮದ್ಯ ಸುರಿದು, ಧರ್ಮ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ರಾತ್ರಿ ಅಸ್ಲಂಗೆ ಎರಡು ಆರ್ಡರ್ ಬಂದಿತ್ತು. ಈ ಪೈಕಿ ಒಂದು ಲಕ್ನೋದ ಗೋಮತಿ ನಗರದ ವಿನೀತ್ ಖಂಡ್ ಪ್ರದೇಶದಿಂದಾಗಿತ್ತು. ಆಹಾರ ಹೊತ್ತು ಮನೆ ಬಳಿ ತಲುಪಿದ ಅಸ್ಲಂ, ಆರ್ಡರ್ ಮಾಡಿದವರಿಗೆ ಕರೆ ಮಾಡಿದ್ದ. ಈ ವೇಳೆ ಆ ಕಡೆಯಿಂದ ಮಾತನಾಡಿದ ವ್ಯಕ್ತಿ ಮನೆಯ ಮೇಲಂತಸ್ತಿಗೆ ಬಂದು ಕೊಟ್ಟು ಹೋಗುವಂತೆ ಸೂಚಿಸಿದ್ದಾರೆ. ಇನ್ನೊಂದು ಆರ್ಡರ್ ತಲುಪಿಸಲು ಇದ್ದ ಕಾರಣ, ನೀವೆ ಕೆಳಗೆ ಬಂದು ತೆಗೆದುಕೊಂಡು ಹೋಗಿ ಎಂದು ಅಸ್ಲಂ ಹೇಳಿದ್ದಾನೆ. ಈ ವೇಳೆ ಆ ಕಡೆಯವರು, ನಾವು ಊಟ ಮಾಡುತಿದ್ದೇವೆ. ನೀನೆ ತಂದು ಕೊಟ್ಟು ಹೋಗು ಎಂದಿದ್ದಾರೆ. ಕೊನೆಗೆ ಅಸ್ಲಂ ಆಹಾರ ಹಿಡಿದು ಮನೆಯ ಮೇಲಂತಸ್ತಿಗೆ ತೆರಳಿದ್ದಾನೆ. ಈ ವೇಳೆ ಅಲ್ಲಿ ನಾಲ್ವರು ಮದ್ಯಪಾನ ಮಾಡುತಿದ್ದರು ಎಂದು ದಿ ವೈರ್ ವರದಿ ಮಾಡಿದೆ.

ಅಸ್ಲಂ ಅನ್ನು ನೋಡಿದ ಓರ್ವ ಆರಂಭದಲ್ಲಿ ಮೇಲೆ ಬರಲು ಏಕೆ ನಿರಾಕರಿಸಿದೆ? ಎಂದು ನಿಂದಿಸಿದ್ದಾನೆ. ಈ ವೇಳೆ ಮತ್ತೋರ್ವ ಅಸ್ಲಂನ ಕಾಲರ್ ಹಿಡಿದು ಮನೆಯೊಳಗೆ ಎಳೆದೊಯ್ದು ಥಳಿಸಿದ್ದಾನೆ. ನಿನ್ನ ಹೆಸರು ಹೇಳು ಎಂದಿದ್ದಾನೆ. ಅಸ್ಲಂ ಹೆಸರು ಹೇಳಿದಾಗ ಮುಸ್ಲಿಂ ಎಂದು ಗೊತ್ತಾಗಿ ಮತ್ತಷ್ಟು ಹಲ್ಲೆ ನಡೆಸಿದ್ದಾರೆ ಎಂದು ಲಿಖಿತ ದೂರಿನಲ್ಲಿ ಅಸ್ಲಂ ಹೇಳಿದ್ದಾಗಿ ದಿ ವೈರ್ ತಿಳಿಸಿದೆ.

“ಆರೋಪಿಗಳು ಹೆಲ್ಮೆಟ್‌ನಿಂದ ನನಗೆ ಥಳಿಸಿದ್ದಾರೆ. ನನ್ನ ಮೇಲೆ ಮದ್ಯ ಸುರಿದಿದ್ದಾರೆ. ಕುದಿಯುವ ನೀರು ಎರಚುವುದಾಗಿ ಬೆದರಿಸಿದ್ದಾರೆ. ಅಷ್ಟೇ ಅಲ್ಲದೆ, ನನ್ನನ್ನು ಸುಮಾರು ಒಂದೂವರೆ ಗಂಟೆಯ ಕಾಲ ಕೊಠಡಿಯಲ್ಲಿ ಕೂಡಿಹಾಕಿದ್ದದರು. ಇದರಿಂದ ಇತರ ಆರ್ಡರ್‌ಗಳನ್ನು ತಲುಪಿಸಲು ಆಗಲಿಲ್ಲ” ಎಂದು ಅಸ್ಲಂ ಆರೋಪಿಸಿದ್ದಾಗಿ ತಿಳಿದು ಬಂದಿದೆ.

ಹಲ್ಲೆ ನಡೆಸಿದ ಬಳಿಕ ಅಸ್ಲಂನನ್ನು ಬಿಟ್ಟ ಆರೋಪಿಗಳು, ತಾನೇ ಆಹಾರಕ್ಕೆ ಹೆಚ್ಚು ಶುಲ್ಕ ವಿಧಿಸಿದೆ. ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದೆ ಮತ್ತು ಅವರು ಹಲ್ಲೆ ನಡೆಸಿದ ವಿಷಯ ಎಲ್ಲೂ ಹೇಳುವುದಿಲ್ಲ ಎಂದು ಆರೋಪಿಗಳು ಅಸ್ಲಂನಿಂದ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿರುವ ಪೊಲೀಸರು, ಉಳಿದ ಮೂವರಿಗಾಗಿ ಹುಡುಕಾಡುತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲಿನ ನಿಷೇಧ ತೆಗೆದುಹಾಕಿದ ರಾಜಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...