ರಾಜ್ಯದಲ್ಲಿ ಈಗ ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಯಾರು? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಕರಾವಳಿ ಕಾಂಗ್ರೆಸ್‌ನ ಯುವ ನಾಯಕ ಮಿಥನ್ ರೈ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮಸೀದಿ ನೋಡಬನ್ನಿ ಕಾರ್ಯಕ್ರಮದಲ್ಲಿ ”ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ” ಎಂದು ಹೇಳಿಕೆ ನೀಡಿದ್ದರು.
ಅವರ ಹೇಳಿಕೆಗೆ ಪೂರಕವಾಗಿ, ಈ ಹಿಂದೆ ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಅವರು ಮಾತನಾಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಶ್ರೀಗಳು, ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಇರಬೇಕು ಎಂದು ಹೇಳುತ್ತಾ, ಮಧ್ವಾಚಾರರಿಗೆ ಶ್ರೀಕೃಷ್ಣ ಮಠ ಕಟ್ಟಲು ಜಾಗ ಕೊಟ್ಟಿದ್ದೇ ಮುಸ್ಲಿಂ ರಾಜ ಎಂದು ಹೇಳಿದ್ದಾರೆ.
ರಕ್ಷಿತ್ ಶೆಟ್ರೆ ಜಾಸ್ತಿ ಯಾರಿಗೂ ಬಕೆಟ್ ಹಿಡಿಯೋಕೆ ಹೋಗ್ಬೇಡಿ ದೇವರು ಮೆಚ್ಚುವಂಥ ಕೆಲಸ ಮಾಡಿ ಅಷ್ಟು ಸಾಕು pic.twitter.com/CZ56e1sNIv
— ಪ್ರದೀಪ್ ಶೆಟ್ಟಿ (@pradeepshettyn) March 11, 2023
ಭಾರತದ ಅತಿ ದೊಡ್ಡ ಇತಿಹಾಸ ಕಾರ @rakshitshetty ಸಾಹೇಬ್ರು ಇದರ ಬಗ್ಗೆ ಪ್ರತಿಕ್ರಿಯೆ ಕೊಡಬೇಕು. https://t.co/SxQ5szjIDW pic.twitter.com/oMR3F48v6y
— 👑Che_ಕೃಷ್ಣ🇮🇳💛❤️ (@ChekrishnaCk) March 11, 2023
ಇದೀಗ, ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟಣೆ ನೀಡಿದ್ದು, ‘ನನ್ನ ಹೇಳಿಕೆಯು ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಮಿಥುನ್ ರೈ ಸ್ಪಷ್ಟಣೆ ಹೇಳಿಕೆ:
— Mithun Rai (@TheMithunRai) March 12, 2023
‘ನಾನು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಷ್ಠಾವಂತ ಅನುಯಾಯಿ ಹಾಗೂ ಅವರ ಬೋಧನೆಗಳು ಮತ್ತು ಕೋಮು ಸೌಹಾರ್ದ ಸಿದ್ಧಾಂತಗಳನ್ನು ನನ್ನ ಕೊನೆಯ ಉಸಿರು ಇರುವವರೆಗೂ ಪಾಲಿಸುತ್ತೇನೆ. ನಾನು ಏನೇ ಮಾತನಾಡಿದರೂ ಅದು ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ ಏಕೆಂದರೆ ನಾನು ಇತಿಹಾಸಕಾರನಲ್ಲ’ ಎಂದಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿವೆ. ಇಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕೆ, ಬಿಜೆಪಿಯವರು ಸೃಷ್ಟಿಸಿದ ಇಂತಹ ವಿವಾದಗಳು ಕೇವಲ ರಾಜಕೀಯ ಗಿಮಿಕ್ ಆಗಿದೆ ಎಂಬುವುದು ಸ್ಪಷ್ಟವಾಗಿ ಕಾಣುತ್ತಿದ್ದೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ರಕ್ಷಿತ್ ಶೆಟ್ಟಿ ಅವರ ಮಾತಿನಲ್ಲಿ ಸರಿ ಇರಬಹುದು, ಆದರೆ ನನ್ನ ದೃಷ್ಟಿಕೋನದಿಂದ ನಾನು ಕೂಡ ಸರಿ. ನಮ್ಮ ಗೌರವಾನ್ವಿತ ಶ್ರೀಗಳು ನಮಗೆ ಕಲಿಸಿದ೦ತೆಯೇ ನಾನು ಕೋಮು ಸೌಹಾರ್ದತೆಯನ್ನು ಬೋಧಿಸುತ್ತೇನೆ, ಏಕೆಂದರೆ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಅದರ ಅವಶ್ಯಕತೆಯಿದೆ.
ಇದನ್ನೂ ಓದಿ: ಮಿಥುನ್ ರೈ ಹೇಳಿಕೆ ವಿರೋಧಿಸಿದ ‘ರಕ್ಷಿತ್ ಶೆಟ್ಟಿ’ಗೆ ನೆಟ್ಟಿಗರಿಂದ ಇತಿಹಾಸ ಪಾಠ!
ನನ್ನ ಎಲ್ಲಾ ಅನುಯಾಯಿಗಳು ಈ ಗೊಂದಲ ಮತ್ತು ಸೃಷ್ಟಿಯಾದ ವಿವಾದವನ್ನು ಕೊನೆಗಾಣಿಸಬೇಕೆಂದು ನಾನು ತಮ್ಮಲ್ಲಿ ವಿನಂತಿಸುತ್ತೇನೆ. ಹಾಗೂ ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್ ಶೆಟ್ಟಿ ಅವರನ್ನು ಟಾರ್ಗೆಟ್ ಮಾಡಬೇಡಿ, ಅವರು ನಮ್ಮ ತುಳುನಾಡಿನ ಹೆಮ್ಮೆ. ಏನೇ ಅಡಚಣೆ ಬಂದರು ಸಹ ತುಳುನಾಡಿನ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಮಿಥುನ್ ರೈ ಅವರು ತಮ್ಮ ಹೇಳಿಕೆಯಲ್ಲಿ ಬರೆದಿದ್ದಾರೆ.
ಈ ಹೇಳಿಕೆ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ನಾಯಕರು ಮಿಥನ್ ರೈ ವಿರುದ್ಧ ಮುಗಿಬಿದ್ದು, ಅವರ ಹೇಳಿಕೆಯನ್ನು ಖಂಡಿಸಿದ್ದರು.
ಈ ವಿಚಾರವಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ನಟ ರಕ್ಷಿತ್ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದು ಪರ ವಿರೋಧದ ಚರ್ಚೆಗೆ ಕಾರಣವಾಗಿತ್ತು.
ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ಪ್ರತಿಕ್ರಿಯಿಸಿ, ”ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ ಇಲ್ಲದಿದ್ದರೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿ ಮಾತಾಡೋದು ಯಾಕೆ?” ಎಂದು ಪ್ರಶ್ನೆ ಮಾಡಿದ್ದರು.
The temple town of Udupi has written history of more than thousand years… Why talk nonsense on a public platform when you have no idea???
— Rakshit Shetty (@rakshitshetty) March 11, 2023
ಹೀಗೆ ರಕ್ಷಿತ್ ಶೆಟ್ಟಿ ಹಾಗೂ ಮಿಥುನ್ ರೈ ಪರ ನೆಟ್ಟಿಗರ ನಡುವೆ ಟ್ವಿಟರ್ ವಾರ್ ನಡೆಯುತ್ತಿತ್ತು. ಇದೀಗ ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಪೇಜಾವರ ಶ್ರೀಗಳ ಭಾಷಣ ಉಲ್ಲೇಖಿಸಿ ಸ್ಪಷ್ಟಣೆ ನೀಡಿದ್ದಾರೆ.


