Homeಕರ್ನಾಟಕಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ...

ಉಡುಪಿಯ ಶ್ರೀಕೃಷ್ಣ ಮಠ ಕಟ್ಟಲು ಜಾಗ ನೀಡಿದ್ದೇ ಮುಸ್ಲಿಂ ರಾಜ: ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಭಾಷಣ ವೈರಲ್

- Advertisement -
- Advertisement -

ರಾಜ್ಯದಲ್ಲಿ ಈಗ ಉಡುಪಿಯ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಯಾರು? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಕರಾವಳಿ ಕಾಂಗ್ರೆಸ್‌ನ ಯುವ ನಾಯಕ ಮಿಥನ್ ರೈ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮಸೀದಿ ನೋಡಬನ್ನಿ ಕಾರ್ಯಕ್ರಮದಲ್ಲಿ ”ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ” ಎಂದು ಹೇಳಿಕೆ ನೀಡಿದ್ದರು.

ಅವರ ಹೇಳಿಕೆಗೆ ಪೂರಕವಾಗಿ, ಈ ಹಿಂದೆ ವಿಶ್ವೇಶತೀರ್ಥ ಪೇಜಾವರ ಸ್ವಾಮೀಜಿ ಅವರು ಮಾತನಾಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಶ್ರೀಗಳು, ಹಿಂದೂ-ಮುಸ್ಲಿಂರು ಸಾಮರಸ್ಯದಿಂದ ಇರಬೇಕು ಎಂದು ಹೇಳುತ್ತಾ, ಮಧ್ವಾಚಾರರಿಗೆ ಶ್ರೀಕೃಷ್ಣ ಮಠ ಕಟ್ಟಲು ಜಾಗ ಕೊಟ್ಟಿದ್ದೇ ಮುಸ್ಲಿಂ ರಾಜ ಎಂದು ಹೇಳಿದ್ದಾರೆ.

ಇದೀಗ, ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟಣೆ ನೀಡಿದ್ದು,  ‘ನನ್ನ ಹೇಳಿಕೆಯು ‌ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಮಿಥುನ್ ರೈ ಸ್ಪಷ್ಟಣೆ ಹೇಳಿಕೆ:

‘ನಾನು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಷ್ಠಾವಂತ ಅನುಯಾಯಿ ಹಾಗೂ ಅವರ ಬೋಧನೆಗಳು ಮತ್ತು ಕೋಮು ಸೌಹಾರ್ದ ಸಿದ್ಧಾಂತಗಳನ್ನು ನನ್ನ ಕೊನೆಯ ಉಸಿರು ಇರುವವರೆಗೂ ಪಾಲಿಸುತ್ತೇನೆ. ನಾನು ಏನೇ ಮಾತನಾಡಿದರೂ ಅದು ಪೇಜಾವರ ಶ್ರೀಗಳ ಭಾಷಣದಿಂದ ಉಲ್ಲೇಖಿಸಲ್ಪಟ್ಟಿದೆಯೇ ಹೊರತು ಯಾವುದು ನನ್ನ ವೈಯಕ್ತಿಕ ಹೇಳಿಕೆಯಲ್ಲ ಏಕೆಂದರೆ ನಾನು ಇತಿಹಾಸಕಾರನಲ್ಲ’ ಎಂದಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿವೆ. ಇಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವುದಕ್ಕೆ, ಬಿಜೆಪಿಯವರು ಸೃಷ್ಟಿಸಿದ ಇಂತಹ ವಿವಾದಗಳು ಕೇವಲ ರಾಜಕೀಯ ಗಿಮಿಕ್ ಆಗಿದೆ ಎಂಬುವುದು ಸ್ಪಷ್ಟವಾಗಿ ಕಾಣುತ್ತಿದ್ದೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಮಾತಿನಲ್ಲಿ ಸರಿ ಇರಬಹುದು, ಆದರೆ ನನ್ನ ದೃಷ್ಟಿಕೋನದಿಂದ ನಾನು ಕೂಡ ಸರಿ. ನಮ್ಮ ಗೌರವಾನ್ವಿತ ಶ್ರೀಗಳು ನಮಗೆ ಕಲಿಸಿದ೦ತೆಯೇ ನಾನು ಕೋಮು ಸೌಹಾರ್ದತೆಯನ್ನು ಬೋಧಿಸುತ್ತೇನೆ, ಏಕೆಂದರೆ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಅದರ ಅವಶ್ಯಕತೆಯಿದೆ.

ಇದನ್ನೂ ಓದಿ: ಮಿಥುನ್‌ ರೈ ಹೇಳಿಕೆ ವಿರೋಧಿಸಿದ ‘ರಕ್ಷಿತ್‌ ಶೆಟ್ಟಿ’ಗೆ ನೆಟ್ಟಿಗರಿಂದ ಇತಿಹಾಸ ಪಾಠ!

ನನ್ನ ಎಲ್ಲಾ ಅನುಯಾಯಿಗಳು ಈ ಗೊಂದಲ ಮತ್ತು ಸೃಷ್ಟಿಯಾದ ವಿವಾದವನ್ನು ಕೊನೆಗಾಣಿಸಬೇಕೆಂದು ನಾನು ತಮ್ಮಲ್ಲಿ ವಿನಂತಿಸುತ್ತೇನೆ. ಹಾಗೂ ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್ ಶೆಟ್ಟಿ ಅವರನ್ನು ಟಾರ್ಗೆಟ್ ಮಾಡಬೇಡಿ, ಅವರು ನಮ್ಮ ತುಳುನಾಡಿನ ಹೆಮ್ಮೆ. ಏನೇ ಅಡಚಣೆ ಬಂದರು ಸಹ ತುಳುನಾಡಿನ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ ಎಂದು ಮಿಥುನ್‌ ರೈ ಅವರು ತಮ್ಮ ಹೇಳಿಕೆಯಲ್ಲಿ ಬರೆದಿದ್ದಾರೆ.

ಈ ಹೇಳಿಕೆ ಬೆನ್ನಲ್ಲೇ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ನಾಯಕರು ಮಿಥನ್ ರೈ ವಿರುದ್ಧ ಮುಗಿಬಿದ್ದು, ಅವರ ಹೇಳಿಕೆಯನ್ನು ಖಂಡಿಸಿದ್ದರು.

ಈ ವಿಚಾರವಾಗಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರಿಗೆ ನಟ ರಕ್ಷಿತ್ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದು ಪರ ವಿರೋಧದ ಚರ್ಚೆಗೆ ಕಾರಣವಾಗಿತ್ತು.

ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ಪ್ರತಿಕ್ರಿಯಿಸಿ, ”ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ ಇಲ್ಲದಿದ್ದರೆ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿ ಮಾತಾಡೋದು ಯಾಕೆ?” ಎಂದು ಪ್ರಶ್ನೆ ಮಾಡಿದ್ದರು.

ಹೀಗೆ ರಕ್ಷಿತ್ ಶೆಟ್ಟಿ ಹಾಗೂ ಮಿಥುನ್‌ ರೈ ಪರ ನೆಟ್ಟಿಗರ ನಡುವೆ ಟ್ವಿಟರ್ ವಾರ್ ನಡೆಯುತ್ತಿತ್ತು. ಇದೀಗ ಮಿಥನ್ ರೈ ತಮ್ಮ ಹೇಳಿಕೆ ಬಗ್ಗೆ ಪೇಜಾವರ ಶ್ರೀಗಳ ಭಾಷಣ ಉಲ್ಲೇಖಿಸಿ ಸ್ಪಷ್ಟಣೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...