Homeಮುಖಪುಟನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

- Advertisement -
- Advertisement -

ವಿಶೇಷ ವಿವಾಹ ಕಾಯ್ದೆಯಡಿ ಮದುವೆ ನೋಂದಣಿ ಮಾಡಿಕೊಳ್ಳಲು ನೆರೆಮನೆಯ ಬ್ರಾಹ್ಮಣ ಯುವತಿಯೊಂದಿಗೆ ಆಗಮಿಸಿದ್ದ ಮುಸ್ಲಿಂ ಯುವಕನಿಗೆ ಬಲಪಂಥೀಯ ಹಿಂದುತ್ವ ಸಂಘಟನೆಯ ದುಷ್ಕರ್ಮಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ (ಫೆ.7) ಮಧ್ಯಪ್ರದೇಶದ ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ನರ್ಮದಾಪುರಂ ಜಿಲ್ಲೆಯ ಪಿಪರಿಯಾ ಪ್ರದೇಶದ ಯುವಕ ಮತ್ತು ಯುವತಿ ತಮ್ಮ ವಿವಾಹ ನೋಂದಣಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ವೇಳೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಸಂಸ್ಕೃತಿ ಬಚಾವೊ ಮಂಚ್ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಯವರು ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಯುವಕನ ಮೇಲೆ ಹಲ್ಲೆ ನಡೆಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಇಬ್ಬರು ವ್ಯಕ್ತಿಗಳು ಯುವಕನನ್ನು ನೆಲಕ್ಕೆ ಕೆಡವಿ, ಬೂಟುಗಾಲಿನಿಂದ ಆತನ ಮುಖಕ್ಕೆ ತುಳಿಯುತ್ತಿರುವ ದೃಶ್ಯವಿದೆ.

ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಯುವಕನ ಬಲ ಹುಬ್ಬಿನ ಬಳಿ ರಕ್ತಸ್ರಾವವಾಗುತ್ತಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ನೀವು ಹಿಂದೂ ಹುಡುಗಿಯರ ಹಿಂದೆ ಏಕೆ ಇದ್ದೀರಿ? ಮತ್ತೆ ಲವ್ ಜಿಹಾದ್ ಮಾಡ್ತಿದ್ದೀರಾ? ನೀವು ಸುರಕ್ಷಿತವಾಗಿರಲು ಬಯಸಿದರೆ ಮುಸ್ಲಿಂ ಹುಡುಗಿಯನ್ನು ಮದುವೆಯಾಗಿ” ಎಂದು ದುಷ್ಕರ್ಮಿಗಳು ಹೇಳುವುದನ್ನು ಕೇಳಬಹುದು ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಮಗದೊಂದು ವಿಡಿಯೋದಲ್ಲಿ ಪೊಲೀಸರು ಹಲ್ಲೆಗೊಳಗಾದ ಯುವಕನನ್ನು ಸ್ಥಳೀಯ ಎಂಪಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲು ವಾಹನದ ಕಡೆಗೆ ಕರೆದೊಯ್ಯುವಾಗಲೂ, ದುಷ್ಕರ್ಮಿಗಳು ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಕಾಣಬಹುದು ಎಂದು ವರದಿ ಹೇಳಿದೆ.

ಸ್ಥಳೀಯ ಹಿಂದುತ್ವ ಸಂಘಟನೆ ಸಂಸ್ಕೃತಿ ಬಚಾವೋ ಮಂಚ್‌ ಅನ್ನು ಪ್ರತಿನಿಧಿಸುವ ಚಂದ್ರಶೇಖರ್ ತಿವಾರಿ ಎಂಬಾತ “ಹಿಂದೂ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಮುಸ್ಲಿಂ ಯುವಕನ ಪ್ರಯತ್ನವನ್ನು ತಂತ್ರದ ಮೂಲಕ ವಿಫಲಗೊಳಿಸಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

“ಆತ ಲವ್ ಜಿಹಾದ್‌ನಲ್ಲಿ ತೊಡಗಿದ್ದ. ನಕಲಿ ಐಡಿ ಮೂಲಕ ಚಾಟ್ ಮಾಡಿ ಹಿಂದೂ ಯುವತಿಯನ್ನು ವಂಚಿಸಿದ್ದ. ಮದುವೆ ಮತ್ತು ನಂತರದ ಧಾರ್ಮಿಕ ಮತಾಂತರಕ್ಕಾಗಿ ಆಕೆಯನ್ನು ಅಕ್ರಮ ಸಂಬಂಧಕ್ಕೆ ಒತ್ತಾಯಿಸಿದ್ದ. ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿ ನಾವು ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ತಿವಾರಿ ಹೇಳಿದ್ದಾಗಿ ವರದಿ ವಿವರಿಸಿದೆ.

ಹಿಂದುತ್ವ ಗುಂಪಿನ ಜೊತೆಗಿದ್ದ ವಕೀಲರೊಬ್ಬರು, “ಮುಸ್ಲಿಂ ಯುವಕ ನಕಲಿ ಅಫಿಡವಿಟ್ ಆಧಾರದ ಮೇಲೆ ಹಿಂದೂ ಯುವತಿಯನ್ನು ಮದುವೆಯಾಗಲು ಪ್ರಯತ್ನಿಸಿದ್ದಾನೆ” ಎಂದು ಆರೋಪಿಸಿದ್ದಾರೆ.

“ಹಿಂದೂ ಅರ್ಚಕನ ಮಗಳಾದ ಯುವತಿಯನ್ನು ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ ಮುಸ್ಲಿಂ ವ್ಯಕ್ತಿ ಲವ್ ಜಿಹಾದ್ ಮಾಡಿ ವಂಚಿಸಿದ್ದಾನೆ. ಆತನ ಮೇಲಿನ ಹಲ್ಲೆಯ ಬಗ್ಗೆ ಕೇಳುವ ಮೊದಲು, ಲವ್ ಜಿಹಾದ್ ಮೂಲಕ ಧಾರ್ಮಿಕ ಮತಾಂತರಕ್ಕಾಗಿ ಹಿಂದೂ ಅರ್ಚಕನ ಮಗಳನ್ನು ತನ್ನೊಂದಿಗೆ ಏಕೆ ಕರೆತಂದಿದ್ದಾನೆ ಎಂದು ಕೇಳಿ” ಎಂದು ವಕೀಲ ಹೇಳಿದ್ದಾರೆ.

“ಭಿನ್ನ ಧರ್ಮದ ಯುವಕ ಮತ್ತು ಯುವತಿ ವಿವಾಹ ನೋಂದಣಿ ಮಾಡಿಕೊಳ್ಳಲು ನ್ಯಾಯಾಲಯಕ್ಕೆ ಬರುತ್ತಿರುವ ಬಗ್ಗೆ ಕೆಲ ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾವು ಅಂತರ್ಧರ್ಮೀಯ ದಂಪತಿಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಅವರ ಹೇಳಿಕೆಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಸಹಾಯಕ ಪೊಲೀಸ್ ಆಯುಕ್ತ (ಎಂಪಿ ನಗರ) ಅಕ್ಷಯ್ ಚೌಧರಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕ ಮೇಲಿನ ಹಲ್ಲೆಯ ವಿಡಿಯೋ ಹಂಚಿಕೊಂಡಿರುವವರು ಪೊಲೀಸರು ಹಲ್ಲೆ ನಡೆಸಿದ ದುಷ್ಕರ್ಮಿಗಳ ಬದಲು, ಹಲ್ಲೆಗೊಳಗಾದ ಯುವಕನನ್ನೇ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು| ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ; ರೈಲಿನಿಂದ ಹೊರಗೆ ತಳ್ಳಿದ ವಿಕೃತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...