Homeಕರ್ನಾಟಕಗಂಗಾವತಿ: 'ಜೈ ಶ್ರೀರಾಮ್' ಹೇಳುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ

ಗಂಗಾವತಿ: ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ

- Advertisement -
- Advertisement -

ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ನವೆಂಬರ್ 25ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪ್ರಜಾವಾಣಿ, ಈದಿನ.ಕಾಮ್ ಸೇರಿದಂತೆ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆರೋಪಿಗಳು ಸಿದ್ದಿಕೇರಿಗೆ ಹೋಗುವ ಮಾರ್ಗದ ರೈಲ್ವೆ ಸೇತುವೆಯ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ವೃದ್ದನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹಲ್ಲೆಗೊಳಗಾದ ಮೆಹಬೂಬ್‌ ನಗರ ಮೂಲದ ಅಂಧ ವೃದ್ಧ ಹುಸೇನ್ ಸಾಬ್ (65) ಪೊಲೀಸರಿಗೆ ದೂರು ನೀಡಿದ್ದಾರೆ.

“ಕೆಲಸದ ನಿಮಿತ್ತ ಹೊಸಪೇಟೆಗೆ ಹೋಗಿ ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೋ ನಿಲ್ದಾಣದ ಬಳಿ ಕಾಯುತ್ತಿದ್ದೆ. ಆಗ ಬೈಕ್‌ನಲ್ಲಿ ಬಂದ ಕೆಲ ಯುವಕರು ಎಲ್ಲಿಗೆ ಹೋಗುತ್ತಿದ್ದಿಯಾ? ಎಂದು ಪ್ರಶ್ನಿಸಿದ್ದಾರೆ. ಬಳಿಕ ಬಲವಂತವಾಗಿ ಬೈಕ್‌ ಮೇಲೆ ಕೂರಿಸಿಕೊಂಡು ಪಂಪಾನಗರ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಸಿದ್ದಿಕೇರಿಗೆ ಹೋಗುವ ಮಾರ್ಗದ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ. ಯುವಕರ ಗುಂಪು, ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ” ಎಂದು ಹುಸೇನ್ ಸಾಬ್ ದೂರಿನಲ್ಲಿ ತಿಳಿಸಿದ್ದಾರೆ

“ಆರೋಪಿಗಳು ನನ್ನ ಬಳಿಯಿದ್ದ ಹಣ ದೋಚಿಕೊಂಡು ಹೋಗಿದ್ದಾರೆ. ಬೆಳಗಿನ ಜಾವ ಕುರಿ ಕಾಯುವ ಹುಡುಗರು ನನ್ನನ್ನು ನೋಡಿ ಮನೆಯ ವಿಳಾಸ ಕೇಳಿ ರಕ್ಷಣೆ ಮಾಡಿ, ಮನೆಗೆ ತಲುಪಿಸಿದ್ದಾರೆ” ಎಂದು ಹೇಳಿದ್ದಾರೆ.

ಘಟನೆಯ ಕುರಿತು ಗುರುವಾರ ರಾತ್ರಿ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಸೇನ್ ಸಾಬ್ ಮೇಲೆ ಹಲ್ಲೆ ನಡೆದಿರುವುದಕ್ಕೆ ಸಾಕ್ಷಿಯಾಗಿ ಅವರ ಮೈಲೆ ಗಾಯದ ಗುರುತುಗಳು ಕಂಡು ಬಂದಿವೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ : ಚಿಕ್ಕಮಗಳೂರು: ಯುವ ವಕೀಲನ ಮೇಲೆ ಹಲ್ಲೆ; ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...