Homeಕರ್ನಾಟಕಮುಸ್ಲಿಂ ವಿದ್ಯಾರ್ಥಿಗೆ ಕಿರುಕುಳ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಿಂದ ಎಬಿವಿಪಿ ಕಾರ್ಯಕರ್ತ ಅಮಾನತು

ಮುಸ್ಲಿಂ ವಿದ್ಯಾರ್ಥಿಗೆ ಕಿರುಕುಳ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಿಂದ ಎಬಿವಿಪಿ ಕಾರ್ಯಕರ್ತ ಅಮಾನತು

- Advertisement -
- Advertisement -

ಮುಸ್ಲಿಂ ವಿದ್ಯಾರ್ಥಿಯೊಬ್ಬರಿಗೆ ಮೌಖಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ ಕಾರ್ಯಕರ್ತನನ್ನು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಅಮಾನತುಗೊಳಿಸಿದೆ ಎಂದು ‘ಮಕ್ತೂಬ್‌ ಮೀಡಿಯಾ’ ಸುದ್ದಿ ಮಾಡಿದೆ.

ಆರೋಪಿಯನ್ನು ರಿಷಿ ತಿವಾರಿ ಎಂದು ಗುರುತಿಸಲಾಗಿದ್ದು, ವಿಶ್ವವಿದ್ಯಾಲಯದಲ್ಲಿ ಎಂಎ ಡೆವಲಪ್‌ಮೆಂಟ್‌ನ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದಾನೆ. ಆರೋಪಿಯ ವಿರುದ್ಧ ಮುಸ್ಲಿಂ ವಿದ್ಯಾರ್ಥಿಯೊಬ್ಬರು ದ್ವೇಷ ಕಾರುವ ಮಾತುಗಳನ್ನು ಆಡಿದ್ದಾಗಿ ದೂರು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಿಷಿ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ತಿವಾರಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ‘ಮಕ್ತೂಬ್‌’ ವಿದ್ಯಾರ್ಥಿಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರು

ಘಟನೆಯು ಮೇ 1 ರಂದು ನಡೆದಿದ್ದು, ಮುಸ್ಲಿಂ ವಿದ್ಯಾರ್ಥಿ ಕೆಜಿಎ ಹಾಸ್ಟೆಲ್ ಬಳಿ ತನ್ನ ಉಪವಾಸ ತೊರೆಯಲು ತೆರಳಿದ್ದಾಗ ರಿಷಿ ತಿವಾರಿ ಅವರನ್ನು ನಿಂದಿಸಲು ಪ್ರಾರಂಭಿಸಿದ್ದನು. ಅಲ್ಲದೆ, ಅವರ ಮೇಲೆ ಆಹಾರವನ್ನು ಎಸೆದು, ಮುಖದ ಮೇಲೆ ಉಗುಳಿದ್ದನು.

ರಿಷಿ ತಿವಾರಿನ್ನು ಅಮಾನತು ಮಾಡಿದರೆ ಸಾಕಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದು, “ಇದು ದ್ವೇಷಾಪರಾಧವಾಗಿದ್ದು ಅತ್ಯಂತ ಗಂಭೀರ ರೀತಿಯಲ್ಲಿ ಪರಿಗಣಿಸಿ ಆರೋಪಿಯನ್ನು ಶಿಕ್ಷೆಗೆ ಒಳಪಡಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರೋಪಿಯ ವಿರುದ್ಧ ‘ಗಂಭೀರ ದಂಡನಾತ್ಮಕ ಕ್ರಮ’ ತೆಗೆದುಕೊಳ್ಳಲಾಗಿದೆ ಎಂದು ವಿಶ್ವವಿದ್ಯಾನಿಲಯ ನಮಗೆ ತಿಳಿಸಿದೆ. ಆದರೆ ವಿದ್ಯಾರ್ಥಿ ಸಂಘಟನೆಯಾಗಿ ಇದನ್ನು ನಾವು ಒಪ್ಪುವುದಿಲ್ಲ” ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

“ಆರೋಪಿಯನ್ನು ವಿಶ್ವವಿದ್ಯಾಲಯದಿಂದ ಹೊರಹಾಕಬೇಕು ಅಥವಾ ಕನಿಷ್ಠ ಒಂದು ವರ್ಷದ ಪೂರ್ಣ ಅಮಾನತು ಮಾಡಬೇಕು” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ತಿವಾರಿಯ ಕೃತ್ಯವನ್ನು ‘ಇಸ್ಲಾಮೋಫೋಬಿಕ್’ ಎಂದು ವಿದ್ಯಾರ್ಥಿಗಳು ಕರೆದಿದ್ದಾರೆ.

“ನಾವು ವಿಶ್ವವಿದ್ಯಾನಿಲಯಕ್ಕೆ ಸೇರುವ ಮೊದಲು ರ್‍ಯಾಗಿಂಗ್‌ ವಿರೋಧಿ ಅಫಿಡವಿಟ್‌ಗಳಿಗೆ ಸಹಿ ಮಾಡಿರುತ್ತೇವೆ. ಹೀಗಾಗಿ ತಿವಾರಿಯ ಈ ಕೃತ್ಯವನ್ನು ಆ್ಯಂಟಿ ರ್‍ಯಾಗಿಂಗ್‌ ಸೆಲ್ ರ್‍ಯಾಗಿಂಗ್‌ ಎಂದು ಪರಿಗಣಿಸಬೇಕು. ಅದರಂತೆ ಶಿಕ್ಷೆಗೆ ಒಳಪಡಿಸಬೇಕು” ಎಂದು ವಿದ್ಯಾರ್ಥಿಗಳು ಹೇಳಿಕೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...