Homeಮುಖಪುಟವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

ವಡೋದರಾ: ಮುಸ್ಲಿಂ ಮಹಿಳೆಗೆ ಫ್ಲ್ಯಾಟ್‌ ನೀಡದಂತೆ ವಿರೋಧ

- Advertisement -
- Advertisement -

ಮುಖ್ಯಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ವಾಣಿಜ್ಯೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಸಚಿವಾಲಯದಲ್ಲಿ ಉದ್ಯೋಗಿಯಾಗಿರುವ 44 ವರ್ಷದ ಮುಸ್ಲಿಂ ಮಹಿಳೆಗೆ ಮನೆ ಮಂಜೂರು ಮಾಡಲಾಗಿದ್ದು, ಸ್ಥಳೀಯರು ಮುಸ್ಲಿಂ ಮಹಿಳೆ ವಾಸಿಸುವುದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಇದರಿಂದ 2017ರಲ್ಲಿ ಮನೆ ಮಂಜೂರಾದರೂ, ಮನೆಯಲ್ಲಿ ವಾಸಿಸಲು ಸಾಧ್ಯವಾಗದೆ ಮಹಿಳೆ ಕಂಗಾಲಾಗಿದ್ದಾರೆ.

ಹರ್ನಿಯಲ್ಲಿರುವ ವಡೋದರಾ ಮುನ್ಸಿಪಲ್ ಕಾರ್ಪೊರೇಷನ್(ವಿಎಂಸಿ) ಮಹಿಳೆಗೆ ವಸತಿ ಘಟಕವನ್ನು 2017ರಲ್ಲಿ ಮಂಜೂರು ಮಾಡಿತ್ತು. ಇದರಿಂದ ಮಹಿಳೆ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗ ಸಂತೋಷಪಟ್ಟಿದ್ದರು. ಆದರೆ ಅವರು ಸ್ಥಳಾಂತರಗೊಳ್ಳುವ ಮೊದಲೇ ವಸತಿ ಸಮುಚ್ಚಯದ 33 ನಿವಾಸಿಗಳು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳಿಗೆ ಲಿಖಿತ ದೂರನ್ನು ನೀಡಿದ್ದು, ಮುಸ್ಲಿಂ ಕುಟುಂಬ ವಸತಿ ಸಮಚ್ಚಯಕ್ಕೆ ಸ್ಥಳಾಂತರಗೊಳ್ಳುವುದನ್ನು ವಿರೋಧಿಸಿದ್ದಾರೆ. ಆಕೆ ನಮ್ಮ ನೆರೆಹೊರೆಯಲ್ಲಿರುವುದರಿಂದ ನಮಗೆ ಬೆದರಿಕೆ ಉಂಟು ಮಾಡುತ್ತದೆ ಮತ್ತು ಸಮಸ್ಯೆಯಾಗುತ್ತದೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ವಡೋದರಾ ಮುನ್ಸಿಪಲ್ ಕಮಿಷನರ್ ದಿಲೀಪ್ ರಾಣಾ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಮತ್ತು ಉಪ ಮುನ್ಸಿಪಲ್ ಕಮಿಷನರ್ ಅರ್ಪಿತ್ ಸಾಗರ್ ಮತ್ತು ಎಂಜಿನಿಯರ್ ನೀಲೇಶ್‌ಕುಮಾರ್ ಪರ್ಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿಯಲ್ಲಿ ಉಲ್ಲೇಖಿಸಿದೆ.

2020ರಲ್ಲಿ ನಿವಾಸಿಗಳು ತನಗೆ ಮನೆ ಹಂಚಿಕೆ ಮಾಡಿದ ಮನೆಯನ್ನು ಅಮಾನ್ಯಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದರು. ಮುಸ್ಲಿಂ ಕುಟುಂಬಗಳಿಗೆ ಮನೆ ನೀಡುವುದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ಭುಗಿಲೆದ್ದವು.  ಹರ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎರಡೂ ಪಕ್ಷಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಮುಸ್ಲಿಂ ಮಹಿಳೆಯ ವಾಸಕ್ಕೆ ವಿರೋಧಿಸಿ ಇದೀಗ ಜೂನ್ 10ರಂದು ಮತ್ತೆ ಪ್ರತಿಭಟನೆ ನಡೆದಿದೆ.

ನಾನು ಬರೋಡದಲ್ಲಿ ಎಲ್ಲಾ ವರ್ಗದ ಜನರು ವಾಸಿಸುವ ಪ್ರದೇಶದಲ್ಲಿ ಹುಟ್ಟಿ ಬೆಳೆದವಳು. ನನ್ನ ಮಗ ಎಲ್ಲರನ್ನೂ ಒಳಗೊಂಡಿರುವ ವಾತಾವರಣದಲ್ಲಿ ಬೆಳೆಯಬೇಕೆಂದು ನಾನು ಯಾವಾಗಲೂ ಬಯಸಿದ್ದೆ, ಆದರೆ ಸುಮಾರು ಆರು ವರ್ಷಗಳಾಗಿರುವುದರಿಂದ ನನ್ನ ಕನಸುಗಳು ಛಿದ್ರಗೊಂಡಿವೆ. ನಾನು ಎದುರಿಸುತ್ತಿರುವ ವಿರೋಧಕ್ಕೆ ಯಾವುದೇ ಪರಿಹಾರವಿಲ್ಲ. ನನ್ನ ಮಗ ಈಗ 12ನೇ ತರಗತಿಯಲ್ಲಿದ್ದಾನೆ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಆತನಿಗೆ ವಯಸ್ಸಾಗಿದೆ. ತಾರತಮ್ಯವು ಅವನ ಮೇಲೆ ಮಾನಸಿಕವಾಗಿ ಪರಿಣಾಮ ಬೀರುತ್ತದೆ ಎಂದು ಸಂತ್ರಸ್ತ ಮುಸ್ಲಿಂ ಮಹಿಳೆ ಹೇಳಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜಿಲ್ಲಾಧಿಕಾರಿ, ಮೇಯರ್, ವಿಎಂಸಿ ಕಮಿಷನರ್ ಹಾಗೂ ವಡೋದರಾದ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ 33 ಸಹಿದಾರರು ಫಲಾನುಭವಿಗೆ ಮಂಜೂರು ಮಾಡಿದ ವಸತಿ ಘಟಕವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೋಟ್ನಾಥ್ ರೆಸಿಡೆನ್ಸಿ ಕೋಆಪರೇಟಿವ್ ಹೌಸಿಂಗ್ ಸರ್ವಿಸಸ್ ಸೊಸೈಟಿ ಲಿಮಿಟೆಡ್‌ನ ಜ್ಞಾಪಕ ಪತ್ರವು ಹೀಗೆ ಹೇಳುತ್ತದೆ: ವಿಎಂಸಿಯು ಮಾರ್ಚ್ 2019ರಲ್ಲಿ ಒಬ್ಬ ಅಲ್ಪಸಂಖ್ಯಾತ ಫಲಾನುಭವಿಗೆ ಮನೆ ಸಂಖ್ಯೆ K204ನ್ನು ಮಂಜೂರು ಮಾಡಿದೆ. ಹರ್ನಿ ಪ್ರದೇಶವು ಹಿಂದೂ ಪ್ರಾಬಲ್ಯದ ಶಾಂತಿಯುತ ಪ್ರದೇಶವಾಗಿದೆ ಮತ್ತು ಮುಸ್ಲಿಮರು ವಾಸ ಇಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿಕೊಂಡಿದೆ.

ಕಾಲೋನಿಯ ನಿವಾಸಿಗಳು ಮುಸ್ಲಿಂ ಕುಟುಂಬಗಳಿಗೆ ಸ್ಥಳಾಂತರಗೊಳ್ಳಲು ಅವಕಾಶ ನೀಡಿದರೆ ಕಾನೂನು-ಸುವ್ಯವಸ್ಥೆ ಬಿಕ್ಕಟ್ಟು ಉಂಟಾಗುತ್ತದೆ ಎಂದು ಹೇಳಿದ್ದಾರೆ. ನಾವೆಲ್ಲರೂ ಈ ಕಾಲೋನಿಯಲ್ಲಿ ಮನೆಗಳನ್ನು ಬುಕ್ ಮಾಡಿದ್ದೇವೆ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವ್ಯಕ್ತಿಗಳು ನಮ್ಮ ಕಾಲೋನಿಯಲ್ಲಿ ವಾಸಿಸುವುದು ನಾವು ಇಷ್ಟಪಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೌಸಿಂಗ್ ಕಾಲೋನಿಯಲ್ಲಿನ ಹಲವಾರು ಕುಟುಂಬಗಳು ಮಾಂಸಾಹಾರಿಗಳಾಗಿದ್ದರೂ, ವಿಭಿನ್ನ ಧಾರ್ಮಿಕ ಕಲ್ಪನೆಯ ಜನರು ನಮ್ಮ ನೆರೆಹೊರೆಗೆ ಬರುವುದು  ಕಳವಳವನ್ನು ಉಂಟುಮಾಡಿದೆ. ಅಲ್ಪಸಂಖ್ಯಾತ ಕುಟುಂಬವು ನಮ್ಮ ನೆರೆಹೊರೆಯಲ್ಲಿ ವಾಸಿಸುವುದರಿಂದ  ನಮಗೆ ನೆಮ್ಮದಿಗೆ ಭಂಗ ತರುತ್ತದೆ ಎಂದು ಹೇಳಿದ್ದಾರೆ.

ಮಹಿಳೆ ಪ್ರಸ್ತುತ ತನ್ನ ಪೋಷಕರು ಮತ್ತು ಮಗನೊಂದಿಗೆ ವಡೋದರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ವಿರೋಧದ ಕಾರಣದಿಂದ ನಾನು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯನ್ನು ಮಾರಾಟ ಮಾಡಲು ಬಯಸುವುದಿಲ್ಲ. ನಾನು ಕಾಯುತ್ತೇನೆ. ನಾನು ಪದೇ ಪದೇ ಕಾಲೋನಿಯ ವ್ಯವಸ್ಥಾಪಕ ಸಮಿತಿಯನ್ನು ಭೇಟಿ ಮಾಡಿದರೂ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದ್ದಾರೆ.

ಆದರೂ ಕಾಲೊನಿಯ ನಿವಾಸಿಯೋರ್ವರು ಮಹಿಳೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಅನ್ಯಾಯವಾಗಿದೆ ಏಕೆಂದರೆ ಅವಳು ಸರ್ಕಾರಿ ಯೋಜನೆಯ ಫಲಾನುಭವಿಯಾಗಿದ್ದಾಳೆ ಮತ್ತು ಕಾನೂನು ನಿಬಂಧನೆಗಳ ಪ್ರಕಾರ ಫ್ಲಾಟ್‌ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಯೋಜನೆಗಳು ಅರ್ಜಿದಾರರು ಮತ್ತು ಫಲಾನುಭವಿಗಳನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸದ ಕಾರಣ, ವಸತಿಯನ್ನು ನಿಯಮಾನುಸಾರ ನೀಡಲಾಗಿದೆ ಎಂದು ವಿಎಂಸಿಯ ವಸತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಎರಡೂ  ನ್ಯಾಯಾಲಯಗಳನ್ನು ಸಂಪರ್ಕಿಸುವ ಮೂಲಕ ಪರಿಹರಿಸಬೇಕಾದ ವಿಷಯವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತಕ್ಕೆ ಕಾರಣವೇನು?: ಪ್ರಾಥಮಿಕ ತನಿಖೆಗಳು ಏನು ಹೇಳುತ್ತದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...