Homeಮುಖಪುಟಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

- Advertisement -
- Advertisement -

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮಾರ್ಚ್ 1ರಂದು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು maktoobmedia.com ವರದಿ ಮಾಡಿದೆ.

ವರದಿಯ ಪ್ರಕಾರ, ಮಧುಬನಿಯ ಘೋಷರ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಹಿ ಗ್ರಾಮದ ರೋಷನ್ ಖಾತೂನ್ ಮೃತ ಮಹಿಳೆ. ಈಕೆ ಫೆಬ್ರವರಿ 28ರಂದು ಸ್ಥಳೀಯ ವಿವಾದವೊಂದನ್ನು ಬಗೆಹರಿಸಲು ಸಹಾಯ ಕೋರಿ ಗ್ರಾಮದ ಮುಖ್ಯಸ್ಥೆಯ ಬಳಿ ಹೋಗಿದ್ದರು. ಈ ವೇಳೆ ಮುಖ್ಯಸ್ಥೆಯ ಮಗನ ನೇತೃತ್ವದಲ್ಲಿ ಗುಂಪು ಹಲ್ಲೆ ನಡೆಸಲಾಗಿದೆ.

ಸ್ಥಳೀಯರ ಪ್ರಕಾರ, 40 ವರ್ಷದ ರೋಷನ್ ಖಾತೂನ್ ಅವರು ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಗ್ರಾಮದ ಮುಖ್ಯಸ್ಥೆ ಮುಖಿಯಾ ಕುಮಾರಿ ದೇವಿ ಅವರ ಮನೆಗೆ ಹೋಗಿದ್ದರು. ಈ ವೇಳೆ ಮುಖಿಯಾ ಕುಮಾರಿಯ ಮಗನ ನೇತೃತ್ವದ ಗುಂಪು ಖಾತೂನ್ ಅವರನ್ನು ಕಂಬಕ್ಕೆ ಕಟ್ಟಿ ತೀವ್ರವಾಗಿ ಥಳಿಸಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನೆರೆದಿದ್ದವರು ಕೂಡ ಆಕೆಯನ್ನು ನಿಂದಿಸಿದ್ದಾರೆ.

ಖಾತೂನ್ ಅವರ ಪತಿಯನ್ನು ಗ್ರಾಮದ ಮುಖ್ಯಸ್ಥೆಯ ಮಗ ಬಲವಂತವಾಗಿ ಕರೆದೊಯ್ದಿದ್ದ. ಈ ಬಗ್ಗೆ ಮಾಹಿತಿ ತಿಳಿದು ವಿಚಾರಿಸಲು ಹೋದ ವೇಳೆ, ಖಾತೂನ್‌ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಒಂದು ಹೇಳುತ್ತಿದೆ.

ಹಲ್ಲೆಯ ಸಮಯದಲ್ಲಿ ಖಾತೂನ್ ಅವರು ರಂಝಾನ್ ಉಪವಾಸದಲ್ಲಿದ್ದರು. ತೀವ್ರ ದಾಳಿಯಿಂದ ಬಾಯಾರಿಕೆಯಾದಾಗ ಅವರು ನೀರು ಕೇಳಿದ್ದರು. ಈ ವೇಳೆ ಆರೋಪಿಗಳು ಅವರಿಗೆ ಬಲವಂತವಾಗಿ ಮದ್ಯ ಮಿಶ್ರಿತ ಮೂತ್ರ ಕುಡಿಸಿದ್ದಾರೆ ಎಂದು ಕುಟುಂಬ ಸದಸ್ಯರು ಮತ್ತು ಪ್ರತ್ಯಕ್ಷದರ್ಶಿಗಳು ಗಂಭೀರ ಆರೋಪ ಮಾಡಿದ್ದಾರೆ.

ಅನೇಕ ಜನರ ಸಮ್ಮುಖದಲ್ಲೇ ಖಾತೂನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಅವರೆಲ್ಲರೂ ಮೂಕ ಪ್ರೇಕ್ಷರಾಗಿ ನಿಂತಿದ್ದರು. ಖಾತೂನ್ ತೀವ್ರ ಅಸಹಾಯಕರಾಗಿದ್ದರು. ಹಲ್ಲೆಯನ್ನು ನಿಲ್ಲಿಸುವಂತೆ ಪದೇ ಪದೇ ಬೇಡಿಕೊಳ್ಳುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿರುವುದಾಗಿ maktoobmedia.com ಉಲ್ಲೇಖಿಸಿದೆ.

ಆರೋಪಗಳನ್ನು ದೃಢಪಡಿಸದ ಪೊಲೀಸರು

ಆದಾಗ್ಯೂ, ಪೊಲೀಸ್ ಅಧಿಕಾರಿಗಳು ಈ ಆರೋಪಗಳನ್ನು ಇನ್ನೂ ದೃಢಪಡಿಸಿಲ್ಲ ಎಂದು ತಿಳಿಸಿದ್ದಾರೆ. ತನಿಖೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು, “ಸಂತ್ರಸ್ತೆ ಉಪವಾಸವಿದ್ದ ಬಗ್ಗೆ ಮತ್ತು ನೀರು ಕೇಳಿದ ಬಗ್ಗೆ ಕೆಲವು ವರದಿಗಳನ್ನು ನಾವು ನೋಡಿದ್ದೇವೆ. ಆದರೆ ಈ ಹಂತದಲ್ಲಿ ನಾವು ಈ ವಿವರಗಳನ್ನು ಖಚಿತಪಡಿಸಲು ಸಾಧ್ಯವಿಲ್ಲ. ತನಿಖೆ ಮುಂದುವರಿಯುತ್ತಿದ್ದು, ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ಹೇಳಿರುವುದಾಗಿ maktoobmedia.com ತಿಳಿಸಿದೆ.

ಎಫ್‌ಐಆರ್ ದಾಖಲು, ಪ್ರಮುಖ ಆರೋಪಿಯ ಬಂಧನ

ಪ್ರಕರಣದ ಮುಖ್ಯ ಆರೋಪಿ, ಗ್ರಾಮದ ಮುಖ್ಯಸ್ಥೆಯ ಮಗ ಮಂಗನು ಸಿಂಗ್ (ಮನು ಸಿಂಗ್) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಒಟ್ಟು 17 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ವರದಿಯಾಗಿದೆ.

ಮನ್ಸೂರಿ ಸಮುದಾಯದ ರಾಜ್ಯಾಧ್ಯಕ್ಷ ಅಜಯ್ ಮನ್ಸೂರಿ ಅವರು, “ಮೃತ ಮಹಿಳೆಗೆ ನ್ಯಾಯ ಒದಗಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ. ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

ರೋಷನ್ ಅವರ ಪತಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

“ರೋಷನ್ ಖಾತೂನ್ ಒಬ್ಬಳು ಬಡ ಮಹಿಳೆ. ಸಹಾಯ ಯಾಚಿಸಲು ಹೋದ ಆಕೆಯನ್ನು ಥಳಿಸಿ ಕೊಂದಿರುವುದು ನಮಗೆ ತೀವ್ರ ನೋವುಂಟು ಮಾಡಿದೆ. ಆಕೆಗೆ ನ್ಯಾಯ ಮತ್ತು ಎಲ್ಲಾ ನಾಗರಿಕರಿಗೆ ಸುರಕ್ಷತೆಯನ್ನು ನಾವು ಬಯಸುತ್ತೇವೆ” ಎಂದು ಸಮುದಾಯದ ಹಿರಿಯರೊಬ್ಬರು ಸ್ಥಳೀಯ ಮಾಧ್ಯಮ ಮಿಥ್ಲಾ ಸಮಾಚಾರ್‌ಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...