Homeಮುಖಪುಟಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

- Advertisement -
- Advertisement -

ಜನವರಿ 21, ಶನಿವಾರದಂದು 100ಕ್ಕೂ ಹೆಚ್ಚು ಬಜರಂಗದಳದ ದುಷ್ಕರ್ಮಿಗಳ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬರ್ತ್ ಡೇ ಪಾರ್ಟಿಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಕನಿಷ್ಠ ಐದು ಮುಸ್ಲಿಂ ಯುವಕರಿಗೆ ಥಳಿಸಲಾಗಿದೆ.

24 ವರ್ಷದ ಹಿಂದೂ ಯುವತಿಯು ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಆ ಯುವತಿಯ ಫ್ಲ್ಯಾಟ್‌ಗೆ ನುಗ್ಗಿ ಆಕೆಯ ಮುಸ್ಲಿಂ ಸ್ನೇಹಿತರಿಗೆ ಹೊಡೆಯಲಾಗಿದೆ. ಮುಸ್ಲಿಂ ಯುವಕರ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ದುಷ್ಕರ್ಮಿಗಳು, ನಂತರ ಇಂದೋರ್‌ನ ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತರನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋಗಳು ಜನವರಿ 22ರ ಭಾನುವಾರದಂದು ವೈರಲ್ ಆಗಿವೆ.

ವೀಡಿಯೋ ಒಂದರಲ್ಲಿ- ಬಹುಮಹಡಿ ಕಟ್ಟಡದ ಮೆಟ್ಟಿಲುಗಳ ಮೇಲೆ ದೊಡ್ಡ ಜನಸಮೂಹವೇ ಹತ್ತುತ್ತಿರುವುದನ್ನು ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ- ಖಾಸಗಿ ನಿವಾಸದೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರು ಏನು ಹೇಳುತ್ತಿದ್ದಾರೆ?

“ಕೆಲವು ಹುಡುಗರನ್ನು ಬಜರಂಗದಳದ ಸದಸ್ಯರು ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆತಂದರು, ನಂತರ ಅವರಲ್ಲಿ ಐವರನ್ನು ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ (ಅಂದರೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆ ಆರೋಪದಲ್ಲಿ) ಜೈಲಿಗೆ ಕಳುಹಿಸಲಾಗಿದೆ.

ಆದರೆ, ಖಾಸಗಿ ನಿವಾಸಕ್ಕೆ ನುಗ್ಗಿ ಯುವಕರನ್ನು ಥಳಿಸಿದ ಬಜರಂಗದಳದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಕುರಿತು ‘ದಿ ಕ್ವಿಂಟ್’ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಎಂಐಜಿ ಸ್ಟೇಷನ್ ಇನ್‌ಚಾರ್ಜ್ ಅಜಯ್ ವರ್ಮಾ, “ಜಗಳ ಮತ್ತು ಹೆಚ್ಚಿನ ವಿವಾದವನ್ನು ತಪ್ಪಿಸಲು, ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅವರೆಲ್ಲರನ್ನೂ ನಾಳೆಯೊಳಗೆ (ಅಂದರೆ ಭಾನುವಾರದೊಳಗೆ) ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು. ಆದರೆ ಜ.23ರಂದು ಈ ವರದಿಯನ್ನು ಪ್ರಕಟಿಸುವ ಸಮಯದವರೆಗೂ ಯುವಕರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ‘ದಿ ಕ್ವಿಂಟ್‌’ ತಿಳಿಸಿದೆ.

ಇದಕ್ಕೂ ಮೊದಲು, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೀಮಾ ಶರ್ಮಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, “ಯುವಕ ಮತ್ತು ಯುವತಿಯರ ಗುಂಪು ಸ್ನೇಹಿತರ ಹುಟ್ಟುಹಬ್ಬವನ್ನು ಆಚರಿಸುತ್ತಿತ್ತು. ಈ ವಿಷಯದಲ್ಲಿ ಭಾಗಿಯಾಗಿರುವ ಹುಡುಗಿಯರು ಲವ್ ಜಿಹಾದ್‌ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಏನು ಹೇಳುತ್ತಿದ್ದಾರೆ?

ಭಜರಂಗದಳದ ಜಿಲ್ಲಾ ಸಂಯೋಜಕ (ಜಿಲ್ಲಾ ಸಂಯೋಜಕ) ಎಂದು ಹೇಳಿಕೊಳ್ಳುವ ಮನೋಜ್ ಯಾದವ್, ಜನವರಿ 21ರಂದು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, “ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದೇವೆ” ಎಂದು  ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿರಿ: ಹಿಂದೂಗಳು ಮತ್ತು ಮುಸ್ಲಿಮರು ಏಕೆ ’ಹಸು ಬಲಿ’ ಕೊಡುತ್ತಾರೆ?

“ಇಂದೋರ್‌ನ ಶ್ರೀನಗರ ಪ್ರದೇಶದಲ್ಲಿ ಐವರು ಮುಸ್ಲಿಂ ಯುವಕರು ಮತ್ತು ಇಬ್ಬರು ಹಿಂದೂ ಯುವತಿಯರು ಒಟ್ಟಿಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದ ನಂತರ ನಾವು ಅಲ್ಲಿಗೆ ಹೋಗಿ ಅವರ ಕೊಠಡಿಗಳಲ್ಲಿ ಹುಡುಕಾಟ ನಡೆಸಿದ್ದೇವೆ. ಮದ್ಯದ ಬಾಟಲಿ ಸೇರಿದಂತೆ ಅಮಲು ಪದಾರ್ಥಗಳು ಪತ್ತೆಯಾಗಿವೆ. ನಾವು ಅವರನ್ನು ಎಂಐಜಿ ಕಾಲೋನಿ ಠಾಣೆಗೆ ಕರೆತಂದಿದ್ದು, ಮೇಲಧಿಕಾರಿಗಳಿಗೂ ದೂರು ನೀಡಿದ್ದೇವೆ” ಎಂದು ಮನೋಜ್ ಯಾದವ್ ಪ್ರತಿಕ್ರಿಯಿಸಿದ್ದಾನೆ.

ಹಲ್ಲೆ ಮಾಡಿದವರ ವಿರುದ್ಧ ವಿರುದ್ಧ ಕ್ರಮವೇನು?

ಸುಪ್ರೀಂ ಕೋರ್ಟ್‌ ವಕೀಲರಾದ ಎಹ್ತೇಶಾಮ್ ಹಶ್ಮಿಯವರು ಪೊಲೀಸರ ವರ್ತನೆಯನ್ನು ಖಂಡಿಸಿದ್ದು, “ಅತಿಕ್ರಮಣ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸುವ ಭಜರಂಗದಳದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಬೇರೆ ಧರ್ಮಕ್ಕೆ ಸೇರಿದ ತಮ್ಮ ಸ್ನೇಹಿತನ ಜನ್ಮದಿನವನ್ನು ಆಚರಿಸಿದ ಏಕೈಕ ತಪ್ಪಿಗೆ ಪೊಲೀಸರು ಐದು ಜನರನ್ನು ಜೈಲಿಗೆ ಹಾಕಿದ್ದಾರೆ. ಇದೊಂದು ಘೋರ ಕಾನೂನು ದುರ್ವರ್ತನೆಯಾಗಿದೆ” ಎಂದು ವಿಷಾದಿಸಿದ್ದಾರೆ.

ವರದಿ ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...