Homeಮುಖಪುಟಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

ಮುಸ್ಲಿಮರು ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ, ಪಡೆಯುವಂತಿಲ್ಲ: ಭೋಪಾಲ್ ಪೊಲೀಸ್ ಅಧಿಕಾರಿ

- Advertisement -
- Advertisement -

ಮುಸ್ಲಿಂ ಜಿಮ್ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ಸಬ್ ಇನ್ಸ್‌ಪೆಕ್ಟರೊಬ್ಬರು ಜಿಮ್‌ ಮಾಲಿಕರಿಗೆ ಸೂಚಿಸುತ್ತಿರುವ ವಿಡಿಯೊ ವೈರಲ್ ಆಗಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತಪವಾಗಿದೆ. ಭಜರಂಗದಳದ ದುಷ್ಕರ್ಮಿಗಳು ಅಯೋಧ್ಯಾ ನಗರ ಪ್ರದೇಶದ ಜಿಮ್‌ಗೆ ಭೇಟಿ ನೀಡಿ, ಜಿಮ್ ಆಪರೇಟರ್‌ನಿಂದ ಮುಸ್ಲಿಂ ಟ್ರೈನರ್‌ಗಳ ವಿವರಗಳನ್ನು ಕೇಳಿದಾಗ ಈ ಘಟನೆ ನಡೆದಿ ಎಂದು ವರದಿಯಾಗಿದೆ. ಮುಸ್ಲಿಮರು ಜಿಮ್‌ನಲ್ಲಿ

ಭೋಪಾಲ್‌ನಲ್ಲಿ ಜಿಮ್ ಮಾಲೀಕರೊಂದಿಗಿನ ಸಂವಾದದ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ದಿನೇಶ್ ಶರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ಈ ವಿಡಿಯೋದಲ್ಲಿ ಮುಸ್ಲಿಂ ಟ್ರೈನರ್‌ ಮತ್ತು ತರಬೇತಿ ಪಡೆಯುವವರು ಜಿಮ್‌ಗೆ ಪ್ರವೇಶಿಸುವುದನ್ನು ನಿಷೇಧಿಸುವಂತೆ ಮಾಲೀಕರಿಗೆ ಸೂಚಿಸುತ್ತಿರುವುದು ಕೇಳಿಬರುತ್ತಿದೆ. 3–4 ದಿನಗಳ ಹಿಂದೆ ಈ ನಡೆದಿದೆ ಎಂದು ಹೇಳಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸಾರ್ವಜನಿಕರ ಗಮನ ಸೆಳೆಯಿತು.

“ಯಾವುದೇ ಮುಸ್ಲಿಂ ಇಲ್ಲಿ ತರಬೇತಿ ನೀಡಲು ಅಥವಾ ಪಡೆಯಲು ಬರುವಂತಿಲ್ಲ. ನಾನು ಅದನ್ನು ನಿಮಗೆ ಸ್ಪಷ್ಟಪಡಿಸಿದ್ದೇನೆ” ಎಂದು ಪೊಲೀಸ್ ಅಧಿಕಾರಿ ಹೇಳುವುದು ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಆಜ್ ತಕ್ ವರದಿ ಮಾಡಿದೆ.

ಭೋಪಾಲ್ ಪೊಲೀಸರ ಹೇಳಿಕೆಗೆ ಬಿಜೆಪಿ ಬೆಂಬಲ ನೀಡಿದ್ದು, ಆದರೆ ಕಾಂಗ್ರೆಸ್ ಇದನ್ನು ವಿರೋಧಿಸಿ, ಜಿಮ್ ತೆರೆಯುವುದು, ತರಬೇತಿ ನೀಡುವುದು ಅಪರಾಧವಲ್ಲ ಎಂದು ಹೇಳಿದೆ.

ಭೋಪಾಲ್‌ನ ಬಿಜೆಪಿ ಸಂಸದ ಅಲೋಕ್ ಶರ್ಮಾ ಪೊಲೀಸರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಮುಸ್ಲಿಂ ಜಿಮ್ ಟ್ರೈನರ್‌ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದು, ಭೋಪಾಲ್‌ನಲ್ಲಿ ಟ್ರೈನರ್‌ಗಳ ಪಟ್ಟಿಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಿಳಾ ಗ್ರಾಹಕರಿಗೆ ಮಹಿಳಾ ತರಬೇತುದಾರರನ್ನು ಮಾತ್ರ ನಿಯೋಜಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಇಂದೋರ್‌ನಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಂಡಂತೆ, ಈಗ ನಾವು ಭೋಪಾಲ್‌ನಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಜಿಮ್ ಟ್ರೈನರ್‌ಗಳ ಪಟ್ಟಿಯನ್ನು ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ಸರ್ಕಾರ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತದೆ, ಆದರೆ ನಾವು ಕೂಡ ನಮ್ಮ ಜವಾಬ್ದಾರಿಗಳನ್ನು ಪೂರೈಸುತ್ತೇವೆ. ಯಾರಿಗೂ ಲವ್ ಜಿಹಾದ್ ಮಾಡಲು ಸ್ವಾತಂತ್ರ್ಯ ನೀಡಲಾಗುವುದಿಲ್ಲ. ಇಲ್ಲಿ ಭೂ ಜಿಹಾದ್ ಕೂಡ ನಡೆಯುತ್ತಿದೆ.” ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಭೋಪಾಲ್ ಕೇವಲ ನವಾಬರ ಅಥವಾ ಯಾವುದೇ ಒಂದು ಸಮುದಾಯದ ನಗರವಲ್ಲ ಎಂದು ಅವರು ಮತ್ತಷ್ಟು ಪ್ರತಿಪಾದಿಸಿದ್ದಾರೆ. “ಇದು ಚಕ್ರವರ್ತಿ ಅಶೋಕ, ಚಂದ್ರಗುಪ್ತ ಮೌರ್ಯ, ಪರ್ಮಾರ್ ರಾಜವಂಶ ಮತ್ತು ರಾಣಿ ಕಮಲಪತಿಯ ನಾಡು. ಒಬೈದಿಯಾ ಶಾಲೆ, ರಶೀದಿಯಾ ಶಾಲೆ, ಸುಲ್ತಾನಿಯಾ ಜನಾನಾ ಆಸ್ಪತ್ರೆ ಮತ್ತು ಹಮೀದಿಯಾ ಆಸ್ಪತ್ರೆಯಂತಹ ಸಂಸ್ಥೆಗಳಿಗೆ ಭಾರತೀಯ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ಇಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಭೋಪಾಲ್‌ನಾದ್ಯಂತ ಒಂದೇ ಕಾನೂನು ಅನ್ವಯಿಸಬೇಕು. ಯಾರೂ ಪಾಕಿಸ್ತಾನದಲ್ಲಿಲ್ಲ; ಎಲ್ಲರೂ ಭಾರತದಲ್ಲಿದ್ದಾರೆ – ಅದು ಖಾಜಿ ಕ್ಯಾಂಪ್ ಆಗಿರಲಿ ಅಥವಾ ಯಾವುದೇ ಇತರ ಪ್ರದೇಶವಾಗಲಿ.” ಎಂದು ಅವರು ಸ್ಥಳೀಯ ಆಡಳಿತವನ್ನು ಟೀಕಿಸಿದ್ದಾರೆ. ಕಲೆಕ್ಟರ್, ಪೊಲೀಸ್ ಆಯುಕ್ತರು, ಹೆಚ್ಚುವರಿ ಎಸ್‌ಪಿ ಮತ್ತು ಎಸ್‌ಡಿಎಂ ಸೇರಿದಂತೆ ಅಧಿಕಾರಿಗಳು ತಮ್ಮ ಕಚೇರಿಗಳಿಂದ ಹೊರಬಂದು ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಸಂಸದರ ಹೇಳಿಕೆಗಳನ್ನು ಟೀಕಿಸಿದ್ದಾರೆ. “ಜಿಮ್ ತೆರೆಯುವುದು ಅಥವಾ ತರಬೇತಿ ನೀಡುವುದು ಅಪರಾಧವಲ್ಲ. ಯಾರಾದರೂ ತರಬೇತಿ ಪಡೆದಿದ್ದರೆ, ಅವರು ತರಬೇತಿ ನೀಡುತ್ತಾರೆ. ಯಾವುದೇ ಅನುಮಾನವಿದ್ದರೆ, ಅದನ್ನು ತನಿಖೆ ಮಾಡಿ. ಜನರು ತಮ್ಮ ಜಿಮ್‌ಗಳು ಮತ್ತು ತರಬೇತುದಾರರನ್ನು ಆಯ್ಕೆ ಮಾಡುತ್ತಾರೆಯೆ ಹೊರತು ಸಂಸದರು ಅಥವಾ ಶಾಸಕರಲ್ಲ” ಎಂದು ಅವರು ಹೇಳಿದ್ದಾರೆ.

“ಅವರು ಭೋಪಾಲ್‌ನ ಸಂಸದರು, ಭೋಪಾಲ್ ನಿವಾಸಿ ಮತ್ತು ನಮ್ಮ ಸ್ನೇಹಿತ. ಅವರಿಗೆ ವಹಿಸಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೆಲಸ ಮಾಡಬೇಕು” ಎಂದು ಶಾಸಕ ಮಸೂದ್ ಅವರು ಶರ್ಮಾ ಅವರಿಗೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ಮೋದಿ ಸಂಪುಟಕ್ಕೆ ರಾಜೀನಾಮೆ ಘೋಷಿಸಲಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್; ಕಾರಣವೇನು ಗೊತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...